ಜಿಯೋ ಯೋಜನೆಗಳ ಬೆಲೆ ಏರಿಕೆ!...ಹೊಸ ಪ್ಲ್ಯಾನ್ ಲಿಸ್ಟ್‌ ಇಲ್ಲಿದೆ!

|

ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳು ತಮ್ಮ ಪ್ರಿಪೇಯ್ಡ್‌ ಯೋಜನೆಗಳ ಬೆಲೆ ಹೆಚ್ಚಳ ಮಾಡಿ ಗ್ರಾಹಕರಿಗೆ ಶಾಕ್ ನೀಡಿವೆ. ಅದರ ಬೆನ್ನಲ್ಲೇ ಈಗ ರಿಲಯನ್ಸ್‌ ಜಿಯೋ ಟೆಲಿಕಾಂ ಸಹ ತನ್ನ ಯೋಜನೆಗಳ ದರದಲ್ಲಿ ಏರಿಕೆ ಮಾಡಿದೆ.

ಜಿಯೋ ಯೋಜನೆಗಳ ಬೆಲೆ ಏರಿಕೆ!...ಹೊಸ ಪ್ಲ್ಯಾನ್ ಲಿಸ್ಟ್‌ ಇಲ್ಲಿದೆ!

ಹೌದು, ಜನಪ್ರಿಯ ಜಿಯೋ ಟೆಲಿಕಾಂ ಸಂಸ್ಥೆಯು ಇದೀಗ ತನ್ನ ಅನಿಯಮಿತ ಯೋಜನೆಗಳ ಬೆಲೆಯಲ್ಲಿ ಹೆಚ್ಚಳ ಮಾಡಿದ್ದು, ಜಿಯೋ ಇಂದು ತನ್ನ ಹೊಸ ಅನ್‌ಲಿಮಿಟೆಡ್ ಪ್ಲಾನ್‌ಗಳನ್ನು ಪ್ರಕಟಿಸಿದೆ. ಇನ್ನು ಜಿಯೋ ಯೋಜನೆಗಳ ಹೊಸ ದರಗಳು ಇದೇ ಡಿಸೆಂಬರ್ 1 ರಿಂದ ಜಾರಿ ಆಗಲಿವೆ ಎಂದು ರಿಲಯನ್ಸ್‌ ಜಿಯೋ ಟೆಲಿಕಾಂ ತಿಳಿಸಿದೆ.

ಜಿಯೋ ಯೋಜನೆಗಳ ಬೆಲೆ ಏರಿಕೆ!...ಹೊಸ ಪ್ಲ್ಯಾನ್ ಲಿಸ್ಟ್‌ ಇಲ್ಲಿದೆ!

ಜಿಯೋ ಟೆಲಿಕಾಂನ 129ರೂ. ಬೆಲೆಯ ಆರಂಭಿಕ ಅನಿಯಮಿತ ಯೋಜನೆಯು ಬೆಲೆ ಏರಿಕೆಯಿಂದ ಇದೀಗ 155ರೂ. ಆಗಿದೆ. ಹಾಗೆಯೇ 199ರೂ. ಪ್ರಿಪೇಯ್ಡ್‌ ಯೋಜನೆಯು ಇದೀಗ 239ರೂ. ಆಗಿದೆ. 399ರೂ. ಬೆಲೆಯ ಪ್ರಿಪೇಯ್ಡ್‌ ಯೋಜನೆಯು 479ರೂ. ದರದಲ್ಲಿ ಕಾಣಿಸಿಕೊಂಡಿದೆ. 599ರೂ. ಬೆಲೆಯ ಪ್ರಿಪೇಯ್ಟ್‌ ಯೋಜನೆಯು ಇದೀಗ 719ರೂ. ಆಗಿದೆ. ಇನ್ನು 2399ರೂ. ಬೆಲೆಯ ವಾರ್ಷಿಕ ಪ್ರಿಪೇಯ್ಡ್‌ ಯೋಜನೆಯು 2879ರೂ. ಪ್ರೈಸ್‌ ಟ್ಯಾಗ್ ಪಡೆದಿದೆ.

ಜಿಯೋದ 149ರೂ. ಪ್ರಿಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನ್‌ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಿಗಲಿದೆ.

ಜಿಯೋದ 199ರೂ. ಪ್ರಿಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನ್‌ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್‌ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್‌ ಸೇವೆ ಲಭ್ಯ.

ಜಿಯೋ 249ರೂ. ಪ್ರಿಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

ಜಿಯೋ ಯೋಜನೆಗಳ ಬೆಲೆ ಏರಿಕೆ!...ಹೊಸ ಪ್ಲ್ಯಾನ್ ಲಿಸ್ಟ್‌ ಇಲ್ಲಿದೆ!

ಜಿಯೋ 399ರೂ. ಪ್ರಿಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್‌ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 444ರೂ. ಪ್ರಿಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ.

ಜಿಯೋ 555ರೂ. ಪ್ರಿಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 599ರೂ. ಪ್ರಿಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಜೊತೆಗೆ ಉಚಿತ ಎಸ್‌ಎಮ್‌ಎಸ್‌ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ಜಿಯೋ 1299ರೂ. ಪ್ರಿಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 336 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹಾಗೆಯೇ ಈ ಪ್ಲ್ಯಾನಿನಲ್ಲಿ ಪೂರ್ಣ ಅವಧಿಗೆ ಒಟ್ಟು 24 GB ಡೇಟಾ ಪ್ರಯೋಜನ ಲಭ್ಯವಾಗುತ್ತದೆ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸಿಗುತ್ತವೆ. ಇದೊಂದು ವ್ಯಾಲಿಡಿಟಿ ಯೋಜನವಾಗಿದೆ.

ಜಿಯೋ 2399ರೂ. ಪ್ರಿಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

English summary
Jio Hikes Prepaid Plan Tariff: Check New Price List Here.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X