Home
ಸುದ್ದಿಜಾಲ

ಜಿಯೋ ಪ್ರಿಪೇಯ್ಡ್‌ ಯೋಜನೆಗಳ ಹೊಸ ಬೆಲೆ ಎಷ್ಟು ಗೊತ್ತಾ?

ದೇಶದ ಟೆಲಿಕಾಂ ವಲಯದಲ್ಲಿ ಏರ್‌ಟೆಲ್‌, ವಿ ಟೆಲಿಕಾಂ ಮತ್ತು ರಿಲಯನ್ಸ್‌ ಜಿಯೋ ಈ ಮೂರು ಟೆಲಿಕಾಂಗಳು ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಬೆಲೆ ಹೆಚ್ಚಳ ಮಾಡಿ ಗ್ರಾಹಕರಿಗೆ ಆಘಾತ ನೀಡಿವೆ. ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳ ಹೊಸ ದರಗಳು ಈಗಾಗಲೇ ಜಾರಿ ಆಗಿವೆ. ಇನ್ನು ರಿಲಯನ್ಸ್‌ ಜಿಯೋ ಟೆಲಿಕಾಂ ತನ್ನ ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ದರ ಹೆಚ್ಚಳವನ್ನು ನೆನ್ನೆ (ನ.28) ಪ್ರಕಟಿಸಿದ್ದು, ಇದೇ ಡಿಸೆಂಬರ್ 1 ರಿಂದ ಜಾರಿಯಾಗಲಿವೆ.

ಬಹುತೇಕ

ಜಿಯೋ ಟೆಲಿಕಾಂ ತನ್ನ ಪ್ರಿಪೇಯ್ಡ್‌ ಯೋಜನೆಗಳ ಬೆಲೆಯಲ್ಲಿ ಶೇ.20% ಏರಿಕೆ ಮಾಡಿದೆ. ಜಿಯೋ ಟೆಲಿಕಾಂನ ಬಹುತೇಕ ಪ್ರಿಪೇಯ್ಡ್‌ ಯೋಜನೆಗಳು ಅಧಿಕ ಡೇಟಾ ಪ್ರಯೋಜನವನ್ನು ಪಡೆದಿದ್ದು, ಅದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹೊಂದಿವೆ. ಹಾಗಾದರೇ ಹೊಸ ಜಿಯೋ ಯೋಜನೆಗಳ ಬೆಲೆ ಎಷ್ಟು ಹಾಗೂ ಯಾವೆಲ್ಲಾ ಪ್ರಯೋಜನಗಳನ್ನು ಒಳಗೊಂಡಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 129ರೂ. ಪ್ಲಾನ್ - ಹೊಸ ದರ 155ರೂ.

ಜಿಯೋ 129ರೂ. ಪ್ಲಾನ್ - ಹೊಸ ದರ 155ರೂ.

ಜಿಯೋದ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್‌ಎಮ್‌ಎಸ್‌ಗಳು ದೊರೆಯುತ್ತವೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇನ್ನು ಈ ಪ್ಲಾನ್ ಒಟ್ಟು 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋದ 149ರೂ. ಪ್ಲಾನ್ - ಹೊಸ ದರ 175ರೂ.

ಜಿಯೋದ 149ರೂ. ಪ್ಲಾನ್ - ಹೊಸ ದರ 175ರೂ.

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಿಗಲಿದೆ.

ಜಿಯೋದ 199ರೂ. ಪ್ಲಾನ್ - ಹೊಸ ದರ 239ರೂ.

ಜಿಯೋದ 199ರೂ. ಪ್ಲಾನ್ - ಹೊಸ ದರ 239ರೂ.

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್‌ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್‌ ಸೇವೆ ಲಭ್ಯ.

ಜಿಯೋ 249ರೂ. ಪ್ಲಾನ್ - ಹೊಸ ದರ 299ರೂ.

ಜಿಯೋ 249ರೂ. ಪ್ಲಾನ್ - ಹೊಸ ದರ 299ರೂ.

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

ಜಿಯೋ 329ರೂ. ಪ್ಲಾನ್ - ಹೊಸ ದರ 395ರೂ.

ಜಿಯೋ 329ರೂ. ಪ್ಲಾನ್ - ಹೊಸ ದರ 395ರೂ.

ಜಿಯೋದ ಈ ಪ್ಲ್ಯಾನಿನಲ್ಲಿ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಜಿಯೋ 399ರೂ. ಪ್ಲಾನ್ - ಹೊಸ ದರ 479ರೂ.

ಜಿಯೋ 399ರೂ. ಪ್ಲಾನ್ - ಹೊಸ ದರ 479ರೂ.

ಜಿಯೋದ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್‌ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 444ರೂ. ಪ್ರೀಪೇಯ್ಡ್‌ ಪ್ಲಾನ್ - ಹೊಸ ದರ 533ರೂ.

ಜಿಯೋ 444ರೂ. ಪ್ರೀಪೇಯ್ಡ್‌ ಪ್ಲಾನ್ - ಹೊಸ ದರ 533ರೂ.

ಜಿಯೋದ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ.

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲಾನ್ - ಹೊಸ ದರ 666ರೂ.

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲಾನ್ - ಹೊಸ ದರ 666ರೂ.

ಜಿಯೋ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲಾನ್ - ಹೊಸ ದರ 719ರೂ.

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲಾನ್ - ಹೊಸ ದರ 719ರೂ.

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 1299ರೂ. ಪ್ರೀಪೇಯ್ಡ್‌ ಪ್ಲಾನ್ - ಹೊಸ ದರ 1559ರೂ.

ಜಿಯೋ 1299ರೂ. ಪ್ರೀಪೇಯ್ಡ್‌ ಪ್ಲಾನ್ - ಹೊಸ ದರ 1559ರೂ.

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 336 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹಾಗೆಯೇ ಈ ಪ್ಲ್ಯಾನಿನಲ್ಲಿ ಪೂರ್ಣ ಅವಧಿಗೆ ಒಟ್ಟು 24 GB ಡೇಟಾ ಪ್ರಯೋಜನ ಲಭ್ಯವಾಗುತ್ತದೆ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸಿಗುತ್ತವೆ. ಇದೊಂದು ವ್ಯಾಲಿಡಿಟಿ ಯೋಜನವಾಗಿದೆ.

ಜಿಯೋ 2399ರೂ. ಪ್ರೀಪೇಯ್ಡ್‌ ಪ್ಲಾನ್ - ಹೊಸ ದರ 2879ರೂ.

ಜಿಯೋ 2399ರೂ. ಪ್ರೀಪೇಯ್ಡ್‌ ಪ್ಲಾನ್ - ಹೊಸ ದರ 2879ರೂ.

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

English summary
Jio Hikes Prepaid Tariffs: Here Are New Recharge Plans Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+