Home
ಸುದ್ದಿಜಾಲ

ಜಿಯೋದಿಂದ ಮತ್ತೆ ಹೊಸ ಪ್ಲ್ಯಾನ್‌; ಸಿಗುತ್ತೆ ಪ್ರತಿದಿನ 3GB ಡೇಟಾ!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ರಿಲಾಯನ್ಸ್ ಜಿಯೋ ಸಂಸ್ಥೆಯು ಹೆಚ್ಚಿನ ಬಳಕೆದಾರರನ್ನು ಹೊಂದಿ ಸದ್ಯ ಲೀಡ್‌ನಲ್ಲಿರುವ ಟೆಲಿಕಾಂ ಆಗಿ ಗುರುತಿಸಿಕೊಂಡಿದೆ. ಕೊರೊನಾ ಲಾಕ್‌ಡೌನ್‌ ಅವಧಿಯಲ್ಲಿ ಈಗಾಗಲೇ ಹಲವು ಆಕರ್ಷಕ ಪ್ಲ್ಯಾನ್‌ಗಳನ್ನು ಪರಿಚಯಿಸಿ ತನ್ನ ಗ್ರಾಹಕರಿಗೆ ಅನುಕೂಲ ಒದಗಿಸಿದೆ. ಇದೀಗ ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಪ್ರಯೋಜನದ ಮತ್ತೊಂದು ಪ್ರೀಪೇಯ್ಡ್ ಪ್ಲ್ಯಾನ್‌ ಅನ್ನು ಪರಿಚಯಿಸಿದೆ.

ಜಿಯೋ ಟೆಲಿಕಾಂ

ಹೌದು, ಅಂಬಾನಿ ಮಾಲೀಕತ್ವದ ಜಿಯೋ ಟೆಲಿಕಾಂ ಹೊಸದಾಗಿ ಈಗ 999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ವೊಂದನ್ನು ಪರಿಚಯಿಸಿದೆ. ಈ ಯೋಜನೆಯು 64Kbps ವೇಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸಲಿದ್ದು, ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಜಿಯೋದ ಇತರೆ ಸೇವೆಗಳ ಪ್ರಯೋಜನಗಳು ಈ ಯೋಜನೆಯಲ್ಲಿ ದೊರೆಯಲಿವೆ. ಹಾಗಾದರೆ ಜಿಯೋ 999ರೂ.ಪ್ಲ್ಯಾನ್ ಪ್ರಯೋಜನಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಜಿಯೋ 999ರೂ.ಪ್ಲ್ಯಾನ್

ಜಿಯೋ 999ರೂ.ಪ್ಲ್ಯಾನ್

ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೆ 3,000 ನಿಮಿಷಗಳ ಮಿತಿ ಇರಲಿದೆ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ. ಜಿಯೋದ ಇತರೆ 84 ದಿನಗಳ ವ್ಯಾಲಿಡಿಟಿಯ ಪ್ಲ್ಯಾನ್‌ ಬಗ್ಗೆ ಮುಂದೆ ಓದಿರಿ.

ಜಿಯೋ 555ರೂ. ಪ್ಲ್ಯಾನ್

ಜಿಯೋ 555ರೂ. ಪ್ಲ್ಯಾನ್

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಆಲ್‌-ಇನ್‌-ಒನ್‌ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 1.5GB ಡೇಟಾ ಪ್ರಯೋಜನವನ್ನು ಹೊಂದಿದ್ದು, ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

Best Mobiles in India

English summary
Jio Rs 999 Prepaid Plan offers 3GB high-speed data for 84 days along with unlimited Jio-to-Jio calling.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+