ತಲಕಾವೇರಿಯಲ್ಲಿ ಈಗ ಜಿಯೋ ಟ್ರೂ 4G ಡಿಜಿಟಲ್ ಲೈಫ್ ಆರಂಭ!
ಕೊಡಗು ಜಿಲ್ಲೆಯ ತಲಕಾವೇರಿಯು ಕಾವೇರಿ ನದಿಯ ಉಗಮ ಸ್ಥಾನವಾಗಿದ್ದು, ಹಿಂದೂಗಳ ಪವಿತ್ರ ಸ್ಥಳವಾಗಿದೆ. ಕೊಡಗಿನ ಭಾಗಮಂಡಲದ ಬಳಿಯ ಬ್ರಹ್ಮಗಿರಿ ಬೆಟ್ಟಗಳಲ್ಲಿ ಈ ತಲಕಾವೇರಿ ಇದ್ದು, ರಿಲಯನ್ಸ್ ಜಿಯೋದಿಂದ ಇತ್ತೀಚೆಗೆ ತಲಕಾವೇರಿಯಲ್ಲಿ ಟ್ರೂ 4G ಡಿಜಿಟಲ್ ಲೈಫ್ ಪರಿಚಯಿಸಲಗಿದೆ. ಸ್ಥಳೀಯ ಕುಟುಂಬಗಳಿಗೆ ಮತ್ತು ಇಡೀ ಸಮುದಾಯಕ್ಕೆ ಇದು ಮೆರುಗು ತಂದಿದೆ.

ಈಗ ಲಭ್ಯವಿರುವ ನೆಟ್‌ವರ್ಕ್ ಮೂಲಕವಾಗಿ ತಮ್ಮ ಮಕ್ಕಳು ಪ್ರತಿ ದಿನ ಹಲವು ಕಿಲೋ ಮೀಟರ್ ದೂರ ಪ್ರಯಾಣಿಸದೆಯೇ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗುತ್ತದೆ ಮತ್ತು ಯುವಕರು ಮನೆಯಿಂದಲೇ ಕೆಲಸ (ವರ್ಕ್ ಫ್ರಮ್ ಹೋಮ್) ಮಾಡಲು ಅಥವಾ ಸುರಕ್ಷಿತ ವಾತಾವರಣದಲ್ಲಿ ಅನಿಯಮಿತ ಮನರಂಜನೆ ಪಡೆಯಲು ಆಗುತ್ತದೆ ಎಂದು ಪೋಷಕರು ಜಿಯೋಗೆ ತಮ್ಮ ಕೃತಜ್ಞತೆ ವ್ಯಕ್ತಪಡಿಸಿದರು.

ದೂರಸಂಪರ್ಕ ಸೇವೆಗಳ ಕೊರತೆಯಿಂದಾಗಿ ತಲಕಾವೇರಿಯ ಜನರು ಹೊರ ಜಗತ್ತಿಗೆ ಮೂಲಭೂತವಾದ ಸಂಪರ್ಕದಿಂದ ವಂಚಿತರಾಗಿದ್ದರು. ಜಿಯೋದಿಂದ ಸೌರ ಶಕ್ತಿಯನ್ನು ಬಳಸಿಕೊಂಡು, ಹಸಿರು ಟವರ್ ನೊಂದಿಗೆ ಟ್ರೂ 4G ಒದಗಿಸುತ್ತದೆ.
ಡಿಜಿಟಲ್ ಇಂಡಿಯಾಗೆ ಅಗತ್ಯವಿರುವ ವೇಗವರ್ಧಕವಾಗಿದೆ ಜಿಯೋ. ಇನ್ನು ಜಿಯೋ ತನ್ನ ಸೇವೆಗಳ ಮೂಲಕವಾಗಿ ಪ್ರಾರಂಭದಿಂದಲೂ ಡಿಜಿಟಲ್ ಕ್ರಾಂತಿಯನ್ನು ಮಾಡಿತು ಮತ್ತು ಪ್ರತಿಯೊಬ್ಬ ಭಾರತೀಯರಿಗೆ ಡೇಟಾದ ಶಕ್ತಿ ನೀಡಿತು. ಈ ಡಿಜಿಟಲ್ ಕ್ರಾಂತಿಯಿಂದಾಗಿ ಈಗ ನಮ್ಮ ದೇಶದ ದೂರದ ಭಾಗಗಳಿಗೆ ಇನ್ನಷ್ಟು ಸಂಪರ್ಕಿಸಬಹುದಾಗಿದೆ.

ಕರ್ನಾಟಕದಲ್ಲಿ ಜಿಯೋದ ಈ ಹೊಸ ಉಪಕ್ರಮವು ಕೊಡುಗೆಗಳ ಗುಚ್ಛದ ಮೂಲಕ ಗಮನ ಸೆಳೆಯುತ್ತದೆ ಮತ್ತು ಜಿಯೋ ಡಿಜಿಟಲ್ ಲೈಫ್ ರಾಜ್ಯದ ಚಂದಾದಾರರಿಗೆ ತರುವ ಪ್ರಯೋಜನಗಳನ್ನು ತೆರೆದಿಡುತ್ತದೆ.
ಅಂದ ಹಾಗೆ, ಜಿಯೋ ನೀಡುತ್ತಿರುವ ಪ್ರಯೋಜನಗಳು ಈ ಕೆಳಕಂಡವುಗಳನ್ನೂ ಒಳಗೊಂಡಿವೆ:
- ಕರ್ನಾಟಕದಾದ್ಯಂತ ತಡೆರಹಿತ ಸಂಪರ್ಕ, ದೃಢ ಮತ್ತು ವ್ಯಾಪಕವಾದ 4G ನೆಟ್‌ವರ್ಕ್
- ಅನಿಯಮಿತ ವಾಯಿಸ್ ಕರೆ ಮತ್ತು ಡೇಟಾ ಪ್ರಯೋಜನಗಳು ಲಭ್ಯ
- ಜಿಯೋ ಟಿವಿ (ಪ್ರಯಾಣದಲ್ಲಿರುವಾಗ ಹೆಚ್ಚು ಜನಪ್ರಿಯವಾಗಿರುವ, ಕ್ಯಾಚ್-ಅಪ್ ಟಿವಿ ಅಪ್ಲಿಕೇಷನ್), ಜಿಯೋಸಿನಿಮಾ ಮತ್ತು ಇತರವುಗಳನ್ನು ಒಳಗೊಂಡಿರುವ ಜಿಯೋ ಪ್ರೀಮಿಯಂ ಅಪ್ಲಿಕೇಷನ್‌ಗಳ ಬಳಕೆಗೆ ಅವಕಾಶ.
- ಕರ್ನಾಟಕದಾದ್ಯಂತ ಜಿಯೋ ಸಿಮ್‌ಗಳ ಸುಲಭ ಲಭ್ಯತೆ
- ಸರಳ ಮತ್ತು ಅನುಕೂಲಕರ ಸೇರ್ಪಡೆ ಅನುಭವ
ಗ್ರಾಹಕರ ಸಂತೋಷವು ಜಿಯೋ ಅನುಭವದ ಮೂಲಾಧಾರವಾಗಿದೆ. ಈ ಉಪಕ್ರಮದ ಮೂಲಕವಾಗಿ ಜಿಯೋ ತನ್ನ ದೃಢವಾದ ನೆಟ್‌ವರ್ಕ್ ಮತ್ತು ಜಿಲ್ಲೆಯಾದ್ಯಂತ ವ್ಯಾಪಕವಾದ ಲಭ್ಯತೆಯ ಮೂಲಕ ತಲಕಾವೇರಿಯಲ್ಲಿನ ಸ್ಥಳೀಯ ಕುಟುಂಬಗಳಿಗೆ ಎಲ್ಲೆಡೆಯೂ ಎಲ್ಲ ಸಮಯದಲ್ಲಿಯೂ ತಡೆರಹಿತ ಅನುಭವ ನೀಡುವುದನ್ನು ಮುಂದುವರಿಸುತ್ತದೆ ಎಂಬುದನ್ನು ಖಾತ್ರಿಪಡಿಸುತ್ತದೆ.

ಜಿಯೋ 5G ಡೇಟಾ ರೀಚಾರ್ಜ್ ಮಾಹಿತಿ
ಜಿಯೋ 5G ಸೇವೆ ಲಭ್ಯವಿರುವ ಪ್ರದೇಶದ ಗ್ರಾಹಕರು ಜಿಯೋ 239 ರೂ. ಪ್ರಿಪೇಯ್ಡ್ ಯೋಜನೆ ಅಥವಾ ಅದಕ್ಕಿಂತ ಅಧಿಕ ಮೊತ್ತದ ಪ್ಲ್ಯಾನ್ ರೀಚಾರ್ಜ್ ಮಾಡಿರುವ ಗ್ರಾಹಕರು ಹೆಚ್ಚುವರಿ ಪ್ಯಾಕ್ ಖರೀದಿಸುವ ಅಗತ್ಯವಿಲ್ಲ. ಆದರೆ ಕಡಿಮೆ ಬೆಲೆಯ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಿರುವ ಗ್ರಾಹಕರಿಗೆ 5G ಅನ್ನು ಅನುಭವಿಸಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ಜಿಯೋ ಹೊಸ 5G ಅಪ್‌ಗ್ರೇಡ್ ಪ್ರಿಪೇಯ್ಡ್ ಯೋಜನೆಯನ್ನು ಈಗ ಅವರಿಗೆ ಲಭ್ಯ ಮಾಡಿದೆ. ಅದುವೇ ಜಿಯೋ 61ರೂ. ಪ್ಲ್ಯಾನ್ ಆಗಿದ್ದು, ಇದು 6GB ಡೇಟಾ ಪ್ರಯೋಜನ ಪಡೆದಿದೆ.
ಗ್ರಾಹಕರು ತಮ್ಮ ಚಾಲ್ತಿ ಇರುವ ಪ್ರಿಪೇಯ್ಡ್ ಯೋಜನೆ ಅವಧಿ ಮುಗಿಯುವವರೆಗೆ 61ರೂ. ಪ್ಲ್ಯಾನ್ ಸಕ್ರಿಯವಾಗಿರುತ್ತದೆ. ಜಿಯೋ 119ರೂ, ಜಿಯೋ 149ರೂ, ಜಿಯೋ 179ರೂ, ಜಿಯೋ 199ರೂ ಅಥವಾ ಜಿಯೋ 209ರೂ. ಬೆಲೆಯ ಪ್ರಿಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿರುವ ಗ್ರಾಹಕರಿಗೆ ಈ 5G ಅಪ್‌ಗ್ರೇಡ್ ಡೇಟಾ ಪ್ಲಾನ್ ಕಾರ್ಯನಿರ್ವಹಿಸುತ್ತದೆ. ಆದರೆ, ಗ್ರಾಹಕರು ಜಿಯೋ 5G ವೆಲ್ಕಮ್ ಆಫರ್ ಅನ್ನು ಸ್ವೀಕರಿಸದಿದ್ದರೆ, ಈ ಪ್ಲ್ಯಾನ್ ಉಪಯುಕ್ತವಾಗದು.


Click it and Unblock the Notifications








