Home
ಸುದ್ದಿಜಾಲ

ಪ್ರತಿನಿತ್ಯ 2GB ಡೇಟಾ ನೀಡುವ 500ರೂ ಒಳಗಿನ ಬೆಸ್ಟ್‌ ಪ್ರಿಪೇಯ್ಡ್‌ ಪ್ಲಾನ್‌ಗಳು!

ಟೆಲಿಕಾಂ ದೈತ್ಯ ಜಿಯೋ ತನ್ನ ಪ್ರಿಪೇಯ್ಡ್‌ ಪ್ಲಾನ್‌ಗಳ ಮೂಲಕ ಚಂದಾದಾರರ ಗಮನಸೆಳೆದಿದೆ. ಅಗ್ಗದ ಬೆಲೆಯಲ್ಲಿ ಅಧಿಕ ಡೇಟಾ ಪ್ರಯೋಜನ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳಿಂದ ಬಳಕೆದಾರರ ನೆಚ್ಚಿನ ಆಯ್ಕೆಯಾಗಿದೆ. ಇದರಲ್ಲಿ ಅಲ್ಪಾವಧಿಯ ಪ್ಲಾನ್‌ಗಳ ಜೊತೆಗೆ ದೀರ್ಘಾವಧಿಯ ಪ್ಲಾನ್‌ಗಳು ಕೂಡ ಸೇರಿವೆ. ಇನ್ನು ದೀರ್ಘಾವಧಿಯ ಪ್ಲಾನ್‌ಗಳಲ್ಲಿ ಅಧಿಕ ಡೇಟಾ ಪ್ರಯೋಜನಗಳು ದೊರೆಯಲಿವೆ. ಹಾಗೆಯೇ ಅಲ್ಪಾವಧಿಯ ಪ್ಲಾನ್‌ಗಳಲ್ಲಿಯೂ ಕೂಡ ದೈನಂದಿನ 2GB ಡೇಟಾ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಜಿಯೋ

ಹೌದು, ಜಿಯೋ ಟೆಲಿಕಾಂ ವಿವಿಧ ಬೆಲೆ ಶ್ರೇಣಿಗಳಲ್ಲಿ ಅನೇಕ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿದೆ. ಇದರಲ್ಲಿ 2GB ಡೇಟಾ ಪ್ರಯೋಜನ ನೀಡುವ 500ರೂ. ಒಳಗಿನ ಪ್ಲಾನ್‌ಗಳು ಸಾಕಷ್ಟು ಬೇಡಿಕೆ ಪಡೆದುಕೊಂಡಿವೆ. ಈ ಪ್ಲಾನ್‌ಗಳು ಅಲ್ಪಾವಧಿ ಮಾನ್ಯತೆಯಲ್ಲಿ ಬರಲಿವೆಯಾದರೂ ಡೇಟಾ ಪ್ರಯೋಜನ ದಿಂದಾಗಿ ಬಳಕೆದಾರರ ನೆಚ್ಚಿನ ಆಯ್ಕೆ ಎನಿಸಿಕೊಂಡಿವೆ. ಹಾಗಾದ್ರೆ 500ರೂ. ಒಳಗಿನ ಬೆಲೆಯಲ್ಲಿ ಡೈಲಿ 2GB ಡೇಟಾ ಪ್ರಯೋಜನ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋ ಟೆಲಿಕಾಂ 249ರೂ ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂ 249ರೂ ಪ್ರಿಪೇಯ್ಡ್‌ ಪ್ಲಾನ್‌

500ರೂ. ಕ್ಕಿಂತ ಕಡಿಮೆ ಬೆಲೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳಲ್ಲಿ ಜಿಯೋ ಟೆಲಿಕಾಂ 249ರೂ ಪ್ರಿಪೇಯ್ಡ್‌ ಪ್ಲಾನ್‌ ಬೆಸ್ಟ್‌ ಆಯ್ಕೆಯಾಗಿದೆ. ಈ ಪ್ರಿಪೇಯ್ಡ್‌ ಪ್ಲಾನ್‌ ಒಟ್ಟು 23 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಸಮಯದಲ್ಲಿ ಪ್ರತಿನಿತ್ಯ 2GB ಡೇಟಾ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಅನಿಮಿತ ಕರೆಗಳು ಹಾಗೂ ಪ್ರತಿನಿತ್ಯ 100 ಎಸ್‌ಎಮ್‌ಎಸ್‌ ಸೇವೆ ಕೂಡ ಲಭ್ಯವಿದೆ. ಇದರೊಂದಿಗೆ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ ಮತ್ತು ಜಿಯೋ ಕ್ಲೌಡ್ ಸೇರಿದಂತೆ ಜಿಯೋ ಅಪ್ಲಿಕೇಶನ್‌ಗಳಿಗೆ ಉಚಿತ ಚಂದಾದಾರಿಕೆಯನ್ನು ಸಹ ನೀಡುತ್ತದೆ.

ಜಿಯೋ 299ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 299ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ ಟೆಲಿಕಾಂನ 299ರೂ ಪ್ರಿಪೇಯ್ಡ್‌ ಪ್ಲಾನ್‌ ಕೂಡ ಅಗ್ಗದ ಬೆಲೆಯಲ್ಲಿ ಡೈಲಿ 2GB ಡೇಟಾ ಪಡೆದುಕೊಳ್ಳಬಹುದಾಗಿದೆ. ಈ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ನೀಡಲಿದೆ. ಈ ಅವಧಿಯಲ್ಲಿ ಪ್ರತನಿತ್ಯ 2GB ಡೇಟಾ ಹಾಗೂ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯವಾಗಲಿದೆ. ಇದಲ್ಲದೆ ಅನಿಯಿಮಿತ ಕರೆ ಪ್ರಯೋಜನಗಳು ಹಾಗೂ ಜಿಯೋ ಆಪ್ಸ್‌ಗಳಾದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್‌ನಂತಹ ಸೇವೆಗಳು ಕೂಡ ದೊರೆಯಲಿದೆ.

ಜಿಯೋ 499ರೂ.ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 499ರೂ.ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 499ರೂ. ಪ್ರಿಪೇಯ್ಡ್ ಪ್ಲಾನ್‌ 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಮತ್ತು 100 SMS ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಅನಿಯಮಿತ ಕರೆ ಪ್ರಯೋಜನ ಕೂಡ ಲಭ್ಯ. ಇದಲ್ಲದೆ ಈ ಪ್ಲಾನ್‌ ನಿಮಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ನೀಡಲಿದೆ. ಇದು ನಿಮಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಡಿಸ್ನಿ + ಹಾಟ್‌ಸ್ಟಾರ್ ಪ್ಲಾಟ್‌ಫಾರ್ಮ್‌ಗೆ ಒಂದು ವರ್ಷದ ಪ್ರವೇಶವನ್ನು ನೀಡುತ್ತದೆ. ಹಾಗೆಯೇ ಜಿಯೋ ಸಿನಿಮಾ ಮತ್ತು ಜಿಯೋಟಿವಿ ಅಂತಹ ಜಿಯೋ ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ನೀಡಲಿದೆ.

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್‌ ನಿಮಗೆ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ನೀಡಲಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ. Jio TV, Jio ಸಿನಿಮಾ, Jio ಭದ್ರತೆ ಮತ್ತು Jio ಕ್ಲೌಡ್ ಸೇರಿದಂತೆ Jio ಅಪ್ಲಿಕೇಶನ್‌ಗಳಿಗೆ ಪೂರಕ ಚಂದಾದಾರಿಕೆಯನ್ನು ಒಳಗೊಂಡಿದೆ.

ಜಿಯೋ 719ರೂ. ಪ್ರೀಪೇಯ್ಡ್‌ ಪ್ಲಾನ್‌

ಜಿಯೋ 719ರೂ. ಪ್ರೀಪೇಯ್ಡ್‌ ಪ್ಲಾನ್‌

ರಿಲಾಯನ್ಸ್‌ ಜಿಯೋ 719ರೂ. ಪ್ರೀಪೇಯ್ಡ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

Best Mobiles in India

English summary
Jio is offering 2GB daily data with prepaid plans under Rs 500
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+