Home
ಸುದ್ದಿಜಾಲ

ಜಿಯೋದಿಂದ ಮತ್ತೆ ಎರಡು ಹೊಸ ಪ್ಲ್ಯಾನ್‌!..ಗ್ರಾಹಕರಿಗೆ ಭಾರೀ ಅನುಕೂಲ!

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್‌ ಜಿಯೋ ಮುಂಚೂಣಿಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಜಿಯೋ ಟೆಲಿಕಾಂ ಈಗಾಗಲೇ ಹಲವು ಅತ್ಯುತ್ತಮ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಜಿಯೋ ಅಗ್ಗದ ಬೆಲೆಯಿಂದ ದುಬಾರಿ ಬೆಲೆಯ ವರೆಗೂ ಯೋಜನೆಗಳ ಆಯ್ಕೆ ನೀಡಿದೆ. ಆದ್ರೆ ಅಧಿಕ ಡೇಟಾ ಪ್ರಯೋಜನದ ಪ್ಲ್ಯಾನ್‌ಗಳಿಗೆ ಡಿಮ್ಯಾಂಡ್‌ ಅಧಿಕ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂ ಮತ್ತೆ ಹೊಸದಾಗಿ ಎರಡು ಭರ್ಜರಿ ಡೇಟಾ ಪ್ಲ್ಯಾನ್‌ಗಳನ್ನು ಲಾಂಚ್‌ ಮಾಡಿದೆ.

ಹೌದು, ಜಿಯೋ ಟೆಲಿಕಾಂ ತನ್ನ ಬಹುತೇಕ ಪ್ರಿಪೇಯ್ಡ್‌ ಯೋಜನೆಗಳಲ್ಲಿ ಆಕರ್ಷಕ ಡೇಟಾ ಪ್ರಯೋಜನ ನೀಡಿದೆ. ಆ ಸಾಲಿಗೆ ಈಗ ಜಿಯೋ 899ರೂ. ಮತ್ತು ಜಿಯೋ 349ರೂ. ಯೋಜನೆಗಳನ್ನು ಸೇರ್ಪಡೆ ಮಾಡಿದೆ. ಈ ಎರಡು ಹೊಸ ಪ್ರಿಪೇಯ್ಡ್‌ ಯೋಜನೆಗಳು ಆಕರ್ಷಕ ದೈನಂದಿನ ಡೇಟಾ ಪ್ರಯೋಜನ ಪಡೆದಿದ್ದು, ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಪಡೆದಿರುವುದು ವಿಶೇಷ.

ಹಾಗಾದರೇ

ಹೀಗಾಗಿ ಅಧಿಕ ಡೇಟಾ ಪ್ರಯೋಜನ ಜೊತೆಗೆ ದೀರ್ಘ ವ್ಯಾಲಿಡಿಟಿ ಬಯಸೋರಿಗೆ ಈ ಪ್ಲ್ಯಾನ್‌ಗಳು ಸೂಕ್ತ ಎನಿಸಲಿವೆ. ಹಾಗಾದರೇ ಜಿಯೋ 899ರೂ ಮತ್ತು ಜಿಯೋ 349ರೂ. ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ ಹೊಸದಾಗಿ ಪರಿಚಯಿಸಿರುವ 899ರೂ. ಪ್ರೀಪೇಯ್ಡ್‌ ಪ್ಲಾನ್ 90 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಈ ಯೋಜನೆಯು ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೆ ಪೂರ್ಣ ವ್ಯಾಲಿಡಿಟಿ ಅವಧಿಗೆ 225GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ, ಪ್ರತಿದಿನ ಉಚಿತ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಜಿಯೋ ಆಪ್ಸ್‌ಗಳು ಸಹ ಲಭ್ಯವಾಗಲಿವೆ.

ಜಿಯೋ 349ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 349ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ ಹೊಸದಾಗಿ ಪರಿಚಯಿಸಿರುವ 349ರೂ. ಪ್ರೀಪೇಯ್ಡ್‌ ಪ್ಲಾನ್ 30 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಈ ಯೋಜನೆಯು ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೆ ಪೂರ್ಣ ವ್ಯಾಲಿಡಿಟಿ ಅವಧಿಗೆ 75GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ, ಪ್ರತಿದಿನ ಉಚಿತ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಜಿಯೋ ಆಪ್ಸ್‌ಗಳು ಸಹ ಲಭ್ಯವಾಗಲಿವೆ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

Best Mobiles in India

English summary
Jio has silently launched Rs 899 and Rs 349 plan. these plans offer daily 2.5GB data. know more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+