Home
ಸುದ್ದಿಜಾಲ

ಸದ್ದಿಲ್ಲದೇ ಜಿಯೋದಿಂದ ಹೊಸ ಪ್ಲ್ಯಾನ್!..ಸಿಗುತ್ತೆ 55GB ಡೇಟಾ, ಕ್ಯಾಶ್‌ಬ್ಯಾಕ್‌!

ಭಾರತೀಯ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಜಿಯೋ ಈಗಾಗಲೇ ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಸಿದೆ. ಆದ್ರೆ ಜಿಯೋ ಟೆಲಿಕಾಂ ಇದೀಗ ಐಪಿಎಲ್‌ (IPL 2022) ಕ್ರಿಕೆಟ್‌ ಅಭಿಮಾನಿಗಳಿಗಾಗಿ ಸದ್ದಿಲ್ಲದೇ ಮತ್ತೆ ನೂತನ ಪ್ರೀಪೇಯ್ಡ್‌ ಪ್ಲ್ಯಾನ್‌ವೊಂದನ್ನು ಪರಿಚಯ ಮಾಡಿದೆ. ಜಿಯೋ ಟೆಲಿಕಾಂನ ಈ ಹೊಸ ಯೋಜನೆಯಲ್ಲಿ ಗ್ರಾಹಕರಿಗೆ 55 GB ಡೇಟಾ ಲಭ್ಯವಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ದೊರೆಯಲಿದೆ.

ಡೇಟಾ

ಹೌದು, ರಿಲಯನ್ಸ್ ಜಿಯೋ ಭಾರತದಲ್ಲಿ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಯೊಂದಿಗೆ ಹೊಸ 555 ರೂ ಪ್ರಿಪೇಯ್ಡ್ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆ ಡೇಟಾ ಆಡ್-ಆನ್ ಪ್ಲಾನ್ ಆಗಿದ್ದು, ಡೇಟಾ, ವಾಯಿಸ್‌ ಕರೆ, ಎಸ್‌ಎಮ್‌ಎಸ್‌ ಪ್ರಯೋಜನಗಳ ಜೊತೆಗೆ ಒಟ್ಟಾರೇ 55 GB ಡೇಟಾ ಸೌಲಭ್ಯವನ್ನು ಈ ಯೋಜನೆಯು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು 499 ರೂ. ಮೌಲ್ಯದ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ಪಡೆದಿದೆ. ಜೊತೆಗೆ ಜಿಯೋ ಮಹಾಕ್ಯಾಶ್‌ ಬ್ಯಾಕ್‌ ಕೊಡುಗೆ ಲಭ್ಯ. ಹಾಗಾದರೇ ಜಿಯೋ ಟೆಲಿಕಾಂನ ಈ ಯೋಜನೆಯ ಪ್ರಯೋಜನಗಳ ಹಾಗೂ ಇತರೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ಪಡೆದ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ.

ಜಿಯೋ ಟೆಲಿಕಾಂನ 555ರೂ. ಯೋಜನೆಯ ಪ್ರಯೋಜನಗಳು

ಜಿಯೋ ಟೆಲಿಕಾಂನ 555ರೂ. ಯೋಜನೆಯ ಪ್ರಯೋಜನಗಳು

ರಿಲಾಯನ್ಸ್‌ ಜಿಯೋ ಟೆಲಿಕಾಂನ 555ರೂ. ಯೋಜನೆಯು ಆಡ್‌ ಆನ್ ಯೋಜನೆ ಆಗಿದೆ. ಈ ಯೋಜನೆಯು ಒಟ್ಟಾರೇ 55 GB ಡೇಟಾ ಪ್ರಯೋಜನದ ಸೌಲಭ್ಯವನ್ನು ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆ, ಎಸ್‌ಎಮ್‌ಎಸ್‌ ಸೌಲಭ್ಯ ಲಭ್ಯವಾಗಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ಪಡೆದಿದ್ದು, ಹಾಗೆಯೇ ಈ ಪ್ಲ್ಯಾನ್ ಜಿಯೋ ಮಹಾಕ್ಯಾಶ್‌ ಬ್ಯಾಕ್‌ ಕೊಡುಗೆ ಪಡೆದಿದ್ದು, ಆಕರ್ಷಕ ರಿಯಾಯಿತಿ ಲಭ್ಯವಾಗಬಹುದು. ಐಪಿಎಲ್‌ ಪ್ರಿಯರಿಗೆ ಇದು ಅತ್ಯುತ್ತಮ ಯೋಜನೆ ಎನಿಸಲಿದೆ.

ಜಿಯೋ ಟೆಲಿಕಾಂನ 4,199 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 4,199 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ರಿಲಾಯನ್ಸ್‌ ಜಿಯೋ ಟೆಲಿಕಾಂನ 4,199 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಟೆಲಿಕಾಂ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

ಜಿಯೋ 3119ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಜಿಯೋ 3119ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ರಿಲಾಯನ್ಸ್‌ ಜಿಯೋ ಟೆಲಿಕಾಂನ 3119 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ (ಹೆಚ್ಚುವರಿ 10 GB ಸಿಗಲಿದೆ) ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 740 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಟೆಲಿಕಾಂ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

Best Mobiles in India

English summary
Jio Launches New Rs 555 Prepaid Plan With Disney+ Hotstar.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+