ಜಿಯೋ ಟ್ರೂ 5G ಸೇವೆ ಈಗ ಚಿತ್ರದುರ್ಗದಲ್ಲಿಯೂ ಲಭ್ಯ!..5G ರೀಚಾರ್ಜ್ ಬೆಲೆ ಎಷ್ಟು?

|

ಜನಪ್ರಿಯ ರಿಲಯನ್ಸ್ ಜಿಯೋ ಇಂದು (ಜನವರಿ 31) ಕರ್ನಾಟಕದ ಚಿತ್ರದುರ್ಗ ಹಾಗೂ ಭಾರತದ 33 ಹೆಚ್ಚುವರಿ ನಗರಗಳಲ್ಲಿ ತನ್ನ ಟ್ರೂ 5G ಸೇವೆಗಳನ್ನು ಪ್ರಾರಂಭಿಸಿರುವುದಾಗಿ ಘೋಷಿಸಿದೆ. ಇದರೊಂದಿಗೆ, ಭಾರತದ 225 ನಗರಗಳಲ್ಲಿ ಜಿಯೋ ಬಳಕೆದಾರರು ಈಗ ಜಿಯೋ ಟ್ರೂ 5G ಸೇವೆಗಳನ್ನು ಆನಂದಿಸುತ್ತಿದ್ದಾರೆ.

ಜಿಯೋ ಟ್ರೂ 5G ಸೇವೆ ಈಗ ಚಿತ್ರದುರ್ಗದಲ್ಲಿಯೂ ಲಭ್ಯ!..5G ರೀಚಾರ್ಜ್ ಬೆಲೆ ಎಷ್ಟು?

ರಿಲಯನ್ಸ್ ಜಿಯೋ ಚಿತ್ರದುರ್ಗದಲ್ಲಿ 5G ಸೇವೆಗಳನ್ನು ಪ್ರಾರಂಭಿಸಿದ ಮೊದಲ ಮತ್ತು ಏಕೈಕ ಟೆಲಿಕಾಂ ಸಂಸ್ಥೆ ಆಗಿದೆ. ಇಂದಿನಿಂದ ಪ್ರಾರಂಭವಾಗುವ ಈ ಸೇವೆಯನ್ನು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ, 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಈ ನಗರಗಳಲ್ಲಿನ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್‌ ಆಫರ್ ಮೂಲಕ ಆಹ್ವಾನಿಸಲಾಗುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿದ ಜಿಯೋ ವಕ್ತಾರರು, ಚಿತ್ರದುರ್ಗ ಮತ್ತು 33 ಹೆಚ್ಚುವರಿ ನಗರಗಳಲ್ಲಿ ಜಿಯೋ ಟ್ರೂ 5G ಸೇವೆಗಳನ್ನು ಪ್ರಾರಂಭಿಸಲು ನಾವು ಉತ್ಸುಕರಾಗಿದ್ದೇವೆ, ಇದರೊಂದಿಗೆ 5G ಸೇವೆಗಳು ದೊರೆಯುತ್ತಿರುವ ನಗರಗಳ ಒಟ್ಟು ಸಂಖ್ಯೆಯನ್ನು 225 ನಗರಗಳಿಗೆ ಒಯ್ಯುತ್ತೇವೆ. ಬೀಟಾ ಪ್ರಾಯೋಗಿಕ ಅನಾವರಣವಾದ ಕೇವಲ 120 ದಿನಗಳಲ್ಲಿ ಜಿಯೋ ಈ ಮೈಲುಗಲ್ಲನ್ನು ಸಾಧಿಸಿದೆ ಮತ್ತು 2023ರ ಡಿಸೆಂಬರ್ ವೇಳೆಗೆ ಪರಿವರ್ತನೆಯ ಜಿಯೋ ಟ್ರೂ 5ಜಿ ಸೇವೆಗಳೊಂದಿಗೆ ಇಡೀ ರಾಷ್ಟ್ರವನ್ನು ಸಂಪರ್ಕಿಸುವ ಹಾದಿಯಲ್ಲಿದೆ.

ಜಿಯೋ ಟ್ರೂ 5G ಸೇವೆ ಈಗ ಚಿತ್ರದುರ್ಗದಲ್ಲಿಯೂ ಲಭ್ಯ!..5G ರೀಚಾರ್ಜ್ ಬೆಲೆ ಎಷ್ಟು?

ಈ ಪ್ರಮಾಣದ 5G ನೆಟ್‌ವರ್ಕ್ ಜಾರಿಯು ಜಗತ್ತಿನಲ್ಲಿ ಎಲ್ಲಿಯೂ ಆಗಿಲ್ಲ ಮತ್ತು ಭಾರತದಲ್ಲೇ ಮೊದಲನೆಯದು. 2023ನೇ ಇಸವಿಯು ಭಾರತಕ್ಕೆ ಒಂದು ಹೆಗ್ಗುರುತಾಗಿದೆ. ಇಡೀ ದೇಶವು ಜಿಯೋದ ಉನ್ನತ ನೆಟ್‌ವರ್ಕ್ ಮೂಲಸೌಕರ್ಯದ ಮೂಲಕ ವಿತರಿಸಲಾದ ಕ್ರಾಂತಿಕಾರಿ ಟ್ರೂ 5G ತಂತ್ರಜ್ಞಾನದ ಪ್ರಯೋಜನಗಳನ್ನು ಪಡೆದುಕೊಳ್ಳುತ್ತದೆ. ನಮ್ಮ ದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನಕ್ಕೆ ನಿರಂತರ ಬೆಂಬಲ ನೀಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಾವು ಕೃತಜ್ಞರಾಗಿರುತ್ತೇವೆ ಎಂದಿದ್ದಾರೆ.

ಜಿಯೋ 5G ಡೇಟಾ ಪ್ಲ್ಯಾನ್‌ಗಳ ಮಾಹಿತಿ
ಜಿಯೋ 5G ಸೇವೆ ಲಭ್ಯವಿರುವ ಪ್ರದೇಶದ ಗ್ರಾಹಕರು ಜಿಯೋ 239 ರೂ. ಪ್ರಿಪೇಯ್ಡ್ ಯೋಜನೆ ಅಥವಾ ಅದಕ್ಕಿಂತ ಅಧಿಕ ಮೊತ್ತದ ಪ್ಲ್ಯಾನ್‌ ರೀಚಾರ್ಜ್ ಮಾಡಿರುವ ಗ್ರಾಹಕರು ಹೆಚ್ಚುವರಿ ಪ್ಯಾಕ್ ಖರೀದಿಸುವ ಅಗತ್ಯವಿಲ್ಲ. ಆದರೆ ಕಡಿಮೆ ಬೆಲೆಯ ಪ್ಲ್ಯಾನ್‌ಗಳನ್ನು ರೀಚಾರ್ಜ್‌ ಮಾಡಿರುವ ಗ್ರಾಹಕರಿಗೆ 5G ಅನ್ನು ಅನುಭವಿಸಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ಜಿಯೋ ಹೊಸ 5G ಅಪ್‌ಗ್ರೇಡ್‌ ಪ್ರಿಪೇಯ್ಡ್ ಯೋಜನೆಯನ್ನು ಈಗ ಅವರಿಗೆ ಲಭ್ಯ ಮಾಡಿದೆ. ಅದುವೇ ಜಿಯೋ 61ರೂ. ಪ್ಲ್ಯಾನ್ ಆಗಿದ್ದು, ಇದು 6GB ಡೇಟಾ ಪ್ರಯೋಜನ ಪಡೆದಿದೆ.

ಜಿಯೋ ಟ್ರೂ 5G ಸೇವೆ ಈಗ ಚಿತ್ರದುರ್ಗದಲ್ಲಿಯೂ ಲಭ್ಯ!..5G ರೀಚಾರ್ಜ್ ಬೆಲೆ ಎಷ್ಟು?

ಗ್ರಾಹಕರು ತಮ್ಮ ಚಾಲ್ತಿ ಇರುವ ಪ್ರಿಪೇಯ್ಡ್ ಯೋಜನೆ ಅವಧಿ ಮುಗಿಯುವವರೆಗೆ 61ರೂ. ಪ್ಲ್ಯಾನ್‌ ಸಕ್ರಿಯವಾಗಿರುತ್ತದೆ. ಜಿಯೋ 119ರೂ, ಜಿಯೋ 149ರೂ, ಜಿಯೋ 179ರೂ, ಜಿಯೋ 199ರೂ ಅಥವಾ ಜಿಯೋ 209ರೂ. ಬೆಲೆಯ ಪ್ರಿಪೇಯ್ಡ್ ಪ್ಲ್ಯಾನ್‌ ರೀಚಾರ್ಜ್ ಮಾಡಿರುವ ಗ್ರಾಹಕರಿಗೆ ಈ 5G ಅಪ್‌ಗ್ರೇಡ್‌ ಡೇಟಾ ಪ್ಲಾನ್ ಕಾರ್ಯನಿರ್ವಹಿಸುತ್ತದೆ. ಆದರೆ, ಗ್ರಾಹಕರು ಜಿಯೋ 5G ವೆಲ್ಕಮ್ ಆಫರ್ ಅನ್ನು ಸ್ವೀಕರಿಸದಿದ್ದರೆ, ಈ ಪ್ಲ್ಯಾನ್ ಉಪಯುಕ್ತವಾಗದು.

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್‌ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್‌ ಸೇವೆ ಲಭ್ಯ.

ಇತರೆ ಜಿಯೋ ಟೆಲಿಕಾಂ ಪ್ಲ್ಯಾನ್‌ಗಳು
* ಜಿಯೋ 2023ರೂ. ಪ್ಲ್ಯಾನ್
* ಜಿಯೋ 2999ರೂ. ಪ್ಲ್ಯಾನ್
* ಜಿಯೋ 2545ರೂ. ಪ್ಲ್ಯಾನ್
* ಜಿಯೋ 2879ರೂ. ಪ್ಲ್ಯಾನ್
* ಜಿಯೋ 719ರೂ. ಪ್ಲ್ಯಾನ್
* ಜಿಯೋ 419ರೂ. ಪ್ಲ್ಯಾನ್

Best Mobiles in India

English summary
Jio launches True 5G services in Chitradurga and 33 more cities taking the total count to 225 cities. know more details in kannada.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X