ಜಿಯೋದ ಈ ಆಫರ್‌ನಲ್ಲಿ ಕಡಿಮೆ ಬೆಲೆಯ ಪ್ಲ್ಯಾನ್‌ಗಳು, ಇನ್ನಷ್ಟು ಕಡಿಮೆ ಬೆಲೆಗೆ ಸಿಗುತ್ತೆ!
ದೇಶದ ಮುಂಚೂಣಿಯ ಟೆಲಿಕಾಂ ಆಗಿರುವ ರಿಲಯನ್ಸ್ ಜಿಯೋ ಹತ್ತು ಹಲವು ಕೊಡುಗೆಗಳ ಮೂಲಕ ಈಗಾಗಲೇ ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಜಿಯೋ ಇತ್ತೀಚಿಗಷ್ಟೆ ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಓಟಿಟಿ ಚಂದಾದಾರಿಕೆಯನ್ನು ಒಳಗೊಂಡ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿ ಐಪಿಎಲ್ ಸಂದರ್ಭದಲ್ಲಿ ಸದ್ದು ಮಾಡಿದೆ. ಇದೀಗ ಮತ್ತೊಂದು ಆಫರ್ ತಿಳಿಸಿದ್ದು, ಕೆಲವು ಅಗ್ಗದ ಪ್ಲ್ಯಾನ್‌ಗಳಿಗೆ ಕ್ಯಾಶ್‌ಬ್ಯಾಕ್ ಲಭ್ಯ ಮಾಡಿದೆ.

ಹೌದು, ಜಿಯೋ ಟೆಲಿಕಾಂ ಕಡಿಮೆ ಬೆಲೆಯಿಂದ ದುಬಾರಿ ಬೆಲೆಯ ವರೆಗೂ ಹಲವಯ ಭಿನ್ನ ಪ್ರೀಪೇಯ್ಡ್ ಯೋಜನೆಗಳ ಆಯ್ಕೆಯನ್ನು ಒಳಗೊಂಡಿದೆ. ಆ ಪೈಕಿ ಇದೀಗ ಜಿಯೋ ಮೂರು ಯೋಜನೆಗಳಿಗೆ ಶೇ. 20% ಕ್ಯಾಶ್‌ಬ್ಯಾಕ್ ತಿಳಿಸಿದೆ. ಆ ಯೋಜನೆಗಳು ಕ್ರಮವಾಗಿ ಜಿಯೋ 249ರೂ, ಜಿಯೋ 555ರೂ ಮತ್ತು ಜಿಯೋ 599ರೂ. ಆಗಿವೆ. ಹಾಗಾದರೇ ಜಿಯೋದ ಈ ಮೂರು ಪ್ರೀಪೇಯ್ಡ್ ಯೋಜನೆಗಳ ಪ್ರಯೋಜನಗಳು ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 249ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು:
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ಗಳಾದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್‌ನಂತಹ ಸೇವೆಗಳು ಸಹ ಲಭ್ಯ.

ಜಿಯೋ 555ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು:
ಜಿಯೋ 555ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಲ್-ಇನ್-ಒನ್ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಒಟ್ಟು 126 GB ಡೇಟಾ ದೊರೆಯುತ್ತದೆ. ಜೊತೆಗೆ ಜಿಯೋ ಆಪ್ಸ್‌ಗಳಾದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್‌ನಂತಹ ಸೇವೆಗಳು ಸಹ ಲಭ್ಯ.

ಜಿಯೋ 599ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು:
ರಿಲಾಯನ್ಸ್ ಜಿಯೋ 599ರೂ. ಪ್ರೀಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 168 GB ಡೇಟಾ ದೊರೆಯುತ್ತದೆ. ಜೊತೆಗೆ ಜಿಯೋ ಆಪ್ಸ್‌ಗಳಾದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್‌ನಂತಹ ಸೇವೆಗಳು ಸಹ ಲಭ್ಯ.

ಜಿಯೋ 249ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್
ಜಿಯೋ ಟೆಲಿಕಾಂ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 1.2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.


Click it and Unblock the Notifications