ಜಿಯೋದ ಈ ಮೂರು ಪ್ಲ್ಯಾನ್‌ಗಳಲ್ಲಿ ಸಿಗಲಿದೆ ಭರ್ಜರಿ ಕ್ಯಾಶ್‌ಬ್ಯಾಕ್ ಕೊಡುಗೆ!
ದೇಶದ ಮುಂಚೂಣಿಯ ಟೆಲಿಕಾಂ ಆಗಿರುವ ರಿಲಯನ್ಸ್ ಜಿಯೋ ಸೇರಿದಂತೆ ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಇತ್ತೀಚಿಗೆ ತಮ್ಮ ಪ್ರಿಪೇಯ್ಡ್ ಯೋಜನೆಗಳ ಬೆಲೆ ಹೆಚ್ಚಳ ಮಾಡಿವೆ. ಅದಾಗ್ಯೂ, ಟೆಲಿಕಾಂ ಸಂಸ್ಥೆಗಳು ಕೆಲವು ವಿಶೇಷ ಆಕರ್ಷಣೆ ಮೂಲಕ ಗ್ರಾಹಕರನ್ನು ಸೆಳೆಯುವ ಮತ್ತು ಉಳಿಸಿಕೊಳ್ಳುವ ಪ್ರಯತ್ನ ನಡೆಸಿವೆ. ಆ ಪೈಕಿ ಜಿಯೋ ಟೆಲಿಕಾಂ ಈ ಹಿಂದಿನ ತನ್ನ ಮೂರು ಪ್ರಿಪೇಯ್ಡ್ ಯೋಜನೆಗಳಿಗೆ ನೀಡುತ್ತಿದ್ದ ಕ್ಯಾಶ್‌ಬ್ಯಾಕ್ ಕೊಡುಗೆಯನ್ನು ಹೊಸ ದರದ ಯೋಜನೆಗಳಿಗೂ ಮುಂದುವರಿಸಿದೆ.

ಹೌದು, ಜಿಯೋ ಟೆಲಿಕಾಂ ತನ್ನ ಜಿಯೋ 299ರೂ, ಜಿಯೋ 666ರೂ ಮತ್ತು ಜಿಯೋ 719ರೂ. ಪ್ರಿಪೇಯ್ಡ್ ಯೋಜನೆ ಗಳಿಗೆ 20% ಕ್ಯಾಶ್‌ಬ್ಯಾಕ್ (ಜಿಯೋಮಾರ್ಟ್ ಕೊಡುಗೆ) ನೀಡುತ್ತಿದೆ. ಇದು ಹೊಸ ಕೊಡುಗೆಯೇನಲ್ಲ. ಬೆಲೆ ಹೆಚ್ಚಳದ ಮೊದಲು ಜಿಯೋ 249ರೂ, ಜಿಯೋ 555ರೂ ಮತ್ತು ಜಿಯೋ 599ರೂ. ಯೋಜನೆಗಳಿಗೆ ಕ್ಯಾಶ್‌ಬ್ಯಾಕ್ ಕೊಡುಗೆ ನೀಡುತ್ತಿತ್ತು. ಇನ್ನು ಈ ಮೂರು ಪ್ರಿಪೇಯ್ಡ್ ಯೋಜನೆಗಳು ಆಕರ್ಷಕ ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೇ ಜಿಯೋದ ಈ ಮೂರು ಪ್ರೀಪೇಯ್ಡ್ ಯೋಜನೆಗಳ ಪ್ರಯೋಜನಗಳು ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 299ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು:
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ಗಳಾದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್‌ನಂತಹ ಸೇವೆಗಳು ಸಹ ಲಭ್ಯ.

ಜಿಯೋ 666ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು:
ಜಿಯೋ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಲ್-ಇನ್-ಒನ್ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಒಟ್ಟು 126 GB ಡೇಟಾ ದೊರೆಯುತ್ತದೆ. ಜೊತೆಗೆ ಜಿಯೋ ಆಪ್ಸ್‌ಗಳಾದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್‌ನಂತಹ ಸೇವೆಗಳು ಸಹ ಲಭ್ಯ.

ಜಿಯೋ 719ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು:
ರಿಲಾಯನ್ಸ್ ಜಿಯೋ 719ರೂ. ಪ್ರೀಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 168 GB ಡೇಟಾ ದೊರೆಯುತ್ತದೆ. ಜೊತೆಗೆ ಜಿಯೋ ಆಪ್ಸ್‌ಗಳಾದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್‌ನಂತಹ ಸೇವೆಗಳು ಸಹ ಲಭ್ಯ. ಹಾಗೆಯೇ ಜಿಯೋದ ಇತರೆ ಬಜೆಟ್ ದರದ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ.

ಜಿಯೋದ 239ರೂ. ಯೋಜನೆ ಪ್ರಯೋಜನಗಳು:
ಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂಜಿಯೋದ 199ರೂ. ಪ್ಲಾನ್ - ಹೊಸ ದರ 239ರೂ. ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋ 533ರೂ. ಯೋಜನೆ ಪ್ರಯೋಜನಗಳು:
ಜಿಯೋದ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋದ 1199ರೂ. ಯೋಜನೆ ಪ್ರಯೋಜನಗಳು:
ಜಿಯೋ 1199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 2879ರೂ. ಯೋಜನೆ ಪ್ರಯೋಜನಗಳು:
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.


Click it and Unblock the Notifications








