ಜಿಯೋದ ಈ ಪ್ಲ್ಯಾನ್ ರೀಚಾರ್ಜ್ ಮಾಡಿಸಿದ್ರೇ, ವರ್ಷಪೂರ್ತಿ ಟೆನ್ಷನ್ ಫ್ರೀ!
ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಜಿಯೋ ಇದೀಗ ಮತ್ತೊಂದು ಹೊಸ ಪ್ರೀಪೇಯ್ಡ್ ಪ್ಲ್ಯಾನ್ ಬಿಡುಗಡೆ ಮಾಡಿದೆ. ಅದುವೇ ಜಿಯೋ 2399ರೂ. ಪ್ರೀಪೇಯ್ಡ್ ಪ್ಲ್ಯಾನ್. ಈ ಯೋಜನೆಯು ದೀರ್ಘಾವಧಿಯ ವ್ಯಾಲಿಡಿಟಿ ಮತ್ತು ಡೇಟಾ ಸೌಲಭ್ಯ ಪಡೆದಿದೆ. ಈ ಪ್ಲ್ಯಾನ್ ರೀಚಾರ್ಜ್ ಮಾಡಿಸಬಹುದೇ?
ಹೌದು, ಜಿಯೋ ಟೆಲಿಕಾಂನ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋದ ಈ ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಮುಂದೆ ಓದಿರಿ.

ಜಿಯೋ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 2121ರೂ.ಪ್ಲ್ಯಾನ್ ಪ್ರಯೋಜನಗಳೆನು
ಜಿಯೋ 2121ರೂ.ಪ್ಲ್ಯಾನ್ ಪ್ರತಿದಿನ 1.5GB ಡೇಟಾ ಪ್ರಯೋಜನ ಒದಗಿಸುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನವನ್ನು ಒಳಗೊಂಡಿದ್ದು, ಜಿಯೋ ಟಿವಿ, ಜಿಯೋ ಸಿನಿಮಾ ಸೇರಿದಂತೆ ಜಿಯೋ ಅಪ್ಲಿಕೇಶನ್‌ಗಳ ಸೇವೆಯು ದೊರೆಯುತ್ತದೆ. ಇನ್ನು ಈ ಪ್ಲ್ಯಾನ್ 336 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ.

ಜಿಯೋ 4999ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನ್ ದೊಡ್ಡ ಮೊತ್ತದ ಪ್ಲ್ಯಾನ್ ಆಗಿದ್ದು, ಒಟ್ಟು 360 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 350GB ಡೇಟಾ ಸೌಲಭ್ಯ ಇರುತ್ತದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಉಳಿದಂತೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳು ಲಭ್ಯವಾಗುತ್ತವೆ.


Click it and Unblock the Notifications








