ಜಿಯೋ ಫೋನ್‌ 5G ಫೀಚರ್ಸ್‌ ಬಹಿರಂಗ! ಅತಿ ಕಡಿಮೆ ಬೆಲೆಯಲ್ಲಿ ಇಷ್ಟೆಲ್ಲಾ ಸಿಗುತ್ತಾ?

|

ಜಿಯೋ ಕಂಪೆನಿ ಶೀಘ್ರದಲ್ಲೇ ಭಾರತದಲ್ಲಿ ಹೊಸ ಜಿಯೋ ಫೋನ್‌ 5G ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಜಿಯೋ ಟೆಲಿಕಾಂನ ಮೊದಲ 5G ಫೋನ್‌ ಆಗಿದ್ದು, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಅತಿ ಅಗ್ಗದ ಬೆಲೆಯಲ್ಲಿ ಅತ್ಯುತ್ತಮ 5G ಫೋನ್‌ ಪರಿಚಯಿಸುವ ಗುರಿಯನ್ನು ಜಿಯೋ ಹೊಂದಿದೆ ಎನ್ನಲಾಗಿದೆ. ಈ ಮೂಲಕ ದೇಶದ ಪ್ರತಿ ಮೂಲೆಯಲ್ಲಿಯೂ 5G ಸೇವೆ ಪಡೆಯುವಂತಾಗಬೇಕು ಎಂಬುದು ಜಿಯೋ ಉದ್ದೇಶವಾಗಿದೆ. ಸದ್ಯ ಜಿಯೋ ಫೋನ್‌ 5G ಫೋನ್‌ ಫೀಚರ್ಸ್‌ ಹೇಗಿರಲಿದೆ ಅನ್ನೊದು ಬಹಿರಂಗವಾಗಿದೆ.

ಜಿಯೋ ಫೋನ್‌ 5G

ಹೌದು, ಜಿಯೋ ಫೋನ್‌ 5G ಫೀಚರ್ಸ್‌ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಬೆಂಚ್‌ಮಾರ್ಕಿಂಗ್ ವೆಬ್‌ಸೈಟ್‌ನಲ್ಲಿ ಜಿಯೋ ಫೋನ್‌ 5G ಫೀಚರ್ಸ್‌ ವಿವರವನ್ನು ಬಹಿರಂಗಪಡಿಸಲಾಗಿದೆ. ಅದರಂತೆ ಜಿಯೋ ಫೋನ್‌ 5G ಸ್ನಾಪ್‌ಡ್ರಾಗನ್ 480+ SoC ಪ್ರೊಸೆಸರ್‌ ವೇಗವನ್ನು ಪಡೆದಿರಲಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರುವ ಸಾಧ್ಯತೆ ಕೂಡ ಇದೆ. ಹಾಗಾದ್ರೆ ಈ ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿರಲಿದೆ?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿರಲಿದೆ?

ಜಿಯೋ ಫೋನ್‌ 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 1,600 x 720 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರಲದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ 60Hz ಪ್ರಮಾಣಿತ ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿರಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಜಿಯೋ ಫೋನ್ 5G ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 480+ SoC ಪ್ರೊಸೆಸರ್ ವೇಗವನ್ನು ಪಡೆದಿರಲಿದೆ. ಇದಕ್ಕೆ ಪೂರಕವಾಗಿ ಅಡ್ರಿನೋ 619 GPU ಸಪೋರ್ಟ್‌ ಹೊಂದಿರಲಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸಲಿದೆ ಮತ್ತು Jio ನ PragatiOS ನಲ್ಲಿ ರನ್ ಆಗಬಹುದು. ಹಾಗೆಯೇ 4GB RAM ಮತ್ತು 32GB ಇನ್‌ಬಿಲ್ಟ್‌ ಸ್ಡೋರೇಜ್‌ ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಜಿಯೋ ಫೋನ್ 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಏನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಏನು?

ಜಿಯೋ ಫೋನ್ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇದು 18W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ನೀಡುವ ಸಾಧ್ಯತೆಯಿದೆ. ಇದು ಗೂಗಲ್ ಮೊಬೈಲ್ ಸೇವೆಗಳು ಮತ್ತು ಜಿಯೋ ಅಪ್ಲಿಕೇಶನ್‌ಗಳೊಂದಿಗೆ ಮೊದಲೇ ಲೋಡ್ ಆಗುತ್ತದೆ ಎಂದು ಹೇಳಲಾಗುತ್ತದೆ.

ಬೆಲೆ ಮತ್ತು ಲಭ್ಯತೆ ವಿವರ?

ಬೆಲೆ ಮತ್ತು ಲಭ್ಯತೆ ವಿವರ?

ಜಿಯೋ ಫೋನ್ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ದಿನಾಂಕವನ್ನು ಇನ್ನು ನಿಗಧಿಪಡಿಸಿಲ್ಲ. ಬಹುಶಃ ಈ ಸ್ಮಾರ್ಟ್‌ಫೋನ್‌ ಮುಂದಿನ ವರ್ಷದ ಭಾರತಕ್ಕೆ ಲಗ್ಗೆ ಇಡುವ ಸಾಧ್ಯತೆಯಿದೆ. ಇನ್ನು ಬೆಲೆ ವಿಚಾರದಲ್ಲಿ ಈ ಸ್ಮಾರ್ಟ್‌ಫೋನ್‌ ಎಂಟ್ರಿ ಲೆವೆಲ್‌ ಪ್ರೈಸ್‌ಟ್ಯಾಗ್‌ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇದಕ್ಕೆ ತಕ್ಕಂತೆ ಈ ಸ್ಮಾರ್ಟ್‌ಫೋನ್‌ನ ವಿನ್ಯಾಸವನ್ನು ಕಾಣಬಹುದಾಗಿದೆ. ಇದು ಯಾವ ಬಣ್ಣದ ಆಯ್ಕೆಯಲ್ಲಿ ಬರಲಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ.

Best Mobiles in India

English summary
Jio Phone 5G Features revealed on Geekbench

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X