ಜಿಯೋ 5G ಡೇಟಾ ಬಳಕೆಯ ಪ್ಲ್ಯಾನ್‌ಗಳು: ಈ ಲಿಸ್ಟ್‌ ಒಮ್ಮೆ ಗಮನಿಸಿ!

|

ಜಿಯೋ ಟೆಲಿಕಾಂ ಭಾರತದಾದ್ಯಂತ ತನ್ನ ಸ್ವತಂತ್ರ 5G ನೆಟ್‌ವರ್ಕ್ ಅನ್ನು ಬಹಳ ವೇಗ ಗತಿಯಲ್ಲಿ ಪ್ರಾರಂಭಿಸುತ್ತಾ ಸಾಗಿದೆ. ಜಿಯೋ ಟೆಲಿಕಾಂ ಈಗಾಗಲೇ ಬೆಂಗಳೂರು, ದೆಹಲಿ ಎನ್‌ಆರ್‌ಸಿ, ಮುಂಬೈ ಮತ್ತು ಗುಜರಾತ್‌ನ 33 ಜಿಲ್ಲೆಗಳು ಸೇರಿದಂತೆ 57 ನಗರಗಳಲ್ಲಿ 5G ಅನ್ನು ಹೊರತಂದಿದೆ.

5G ವೆಲ್ಕಮ್ ಆಫರ್

ಜಿಯೋ 5G ವೆಲ್ಕಮ್ ಆಫರ್ ಅನ್ನು ಪಡೆದ ಬಳಕೆದಾರರು ಮಾತ್ರ 5G ನೆಟ್‌ವರ್ಕ್‌ಗೆ ಸಂಪರ್ಕಿಸಲು ಸಾಧ್ಯವಾಗುತ್ತದೆ. ಅಂದಹಾಗೆ, ಈ ನಗರಗಳಲ್ಲಿ ವಾಸಿಸುವ ಜನರು 5G ವೆಲ್ಕಮ್ ಆಫರ್‌ನೊಂದಿಗೆ ಆಹ್ವಾನಿತ ಆಧಾರದ ಮೇಲೆ 5G ಪಡೆಯುತ್ತಾರೆ. ಈ ನಗರಗಳ ಪ್ರತಿಯೊಂದು ಪ್ರದೇಶದಲ್ಲೂ 5G ಲಭ್ಯವಿಲ್ಲದಿರಬಹುದು. ಏಕೆಂದರೆ ಹಂತ ಹಂತಗಳಲ್ಲಿ ನಿಯೋಜಿಸಲಾಗುತ್ತಿದೆ ಮತ್ತು ನೆಟ್‌ವರ್ಕ್ ಇನ್ನೂ ಸ್ಥಿರವಾಗಿಲ್ಲ.

5G ಡೇಟಾ ಆಕ್ಸಸ್‌

ಇನ್ನು ಜಿಯೋ 5G ಡೇಟಾ ಆಕ್ಸಸ್‌ ನೀಡುವ 239ರೂ. ಪ್ಲ್ಯಾನ್ ಮತ್ತು ಅದಕ್ಕಿಂತ ಅಧಿಕ ಮೊತ್ತದ ಜಿಯೋ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಯಾವುವು ಗೊತ್ತೆ? ಈ ಪ್ಲ್ಯಾನ್‌ಗಳು ಯಾವೆಲ್ಲಾ ಪ್ರಯೋಜನಗಳನ್ನು ಒಳಗೊಂಡಿವೆ ಎನ್ನುವ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್‌ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್‌ ಸೇವೆ ಲಭ್ಯ.

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್‌ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112 GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ.

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 299ರೂ. ಪ್ರಿಪೇಯ್ಡ್ ಯೋಜನೆಯು ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಪಡೆದಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ದೈನಂದಿನ ಡೇಟಾ ಸೌಲಭ್ಯ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಪ್ರಯೋಜನ ಸಿಗಲಿದೆ. ಜೊತೆಗೆ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಮೂವಿಸ್, ಜಿಯೋ ನ್ಯೂಸ್ ಹಾಗೂ ಇತರೆ ಸೇವೆಗಳು ಸಿಗಲಿವೆ.

ಜಿಯೋದ 1199 ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1199 ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 1199 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಜಿಯೋ ಆಪ್ಸ್‌ ಸಹ ಲಭ್ಯ.

ಇತರೆ ಜಿಯೋ ಟೆಲಿಕಾಂ ಪ್ಲ್ಯಾನ್‌ಗಳು

ಇತರೆ ಜಿಯೋ ಟೆಲಿಕಾಂ ಪ್ಲ್ಯಾನ್‌ಗಳು

ಜಿಯೋ 2023ರೂ. ಪ್ಲ್ಯಾನ್
ಜಿಯೋ 2999ರೂ. ಪ್ಲ್ಯಾನ್
ಜಿಯೋ 2545ರೂ. ಪ್ಲ್ಯಾನ್
ಜಿಯೋ 2879ರೂ. ಪ್ಲ್ಯಾನ್
ಜಿಯೋ 719ರೂ. ಪ್ಲ್ಯಾನ್
ಜಿಯೋ 419ರೂ. ಪ್ಲ್ಯಾನ್

Best Mobiles in India

English summary
Jio plans that offer 5G data access: Here’s the list of plans, that will offer 5G data access.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X