Home
ಸುದ್ದಿಜಾಲ

ಜಿಯೋ ಗ್ರಾಹಕರಿಗೆ ಅಗ್ಗದ ಬೆಲೆಯಲ್ಲಿ ಇವೇ ಬೊಂಬಾಟ್‌ ರೀಚಾರ್ಜ್‌ ಪ್ಲ್ಯಾನ್‌ಗಳು!

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸುವ ಮೂಲಕ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಅದಾಗ್ಯೂ, ಸಂಸ್ಥೆಯು ಚಂದಾದಾರರನ್ನು ಉಳಿಸಿಕೊಳ್ಳಲು ಹಾಗೂ ಹೆಚ್ಚಿಸಿಕೊಳ್ಳಲು ಹೊಸ ಪ್ಲ್ಯಾನ್‌ಗಳನ್ನು ಪರಿಚಯಿಸುತ್ತ ಮುನ್ನಡೆದಿದೆ. ಈ ನಿಟ್ಟಿನಲ್ಲಿ ಅಲ್ಪಾವಧಿ ಯೋಜನೆಗಳ ಜೊತೆಗೆ ದೀರ್ಘಾವಧಿ ಯೋಜನೆಗಳ ಆಯ್ಕೆಗಳನ್ನು ಗ್ರಾಹಕರಿಗೆ ನೀಡಿದ್ದು, ಅವುಗಳಲ್ಲಿ ಬಜೆಟ್‌ ದರದ ಪ್ಲ್ಯಾನ್‌ಗಳು ಹೆಚ್ಚು ಆಕರ್ಷಕ ಎನಿಸಿವೆ.

ಜಿಯೋ ಟೆಲಿಕಾಂ

ಹೌದು, ರಿಯಲನ್ಸ್‌ ಜಿಯೋ ಟೆಲಿಕಾಂ ಭಿನ್ನ ದರದ ಪ್ರೀಪೇಯ್ಡ್‌ ಯೋಜನೆಗಳ ಲಿಸ್ಟ್‌ ಹೊಂದಿದೆ. ಆ ಪೈಕಿ 300ರೂ. ಒಳಗೆ ಲಭ್ಯವಿರುವ ಕೆಲವು ಯೋಜನೆಗಳು ಗ್ರಾಹಕ ಸ್ನೇಹಿ ಎನಿಸಿವೆ. ಈ ಪ್ರೀಪೇಯ್ಡ್‌ ಯೋಜನೆಗಳು ಡೇಟಾ ಸೌಲಭ್ಯ, ವಾಯಿಸ್‌ ಕರೆ, ಎಸ್‌ಎಮ್‌ಎಸ್‌ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಹಾಗಾದರೇ ರಿಯಲನ್ಸ್‌ ಜಿಯೋ ಟೆಲಿಕಾಂನ 300ರೂ. ಒಳಗಿನ ಪ್ರಮುಖ ರೀಚಾರ್ಜ್‌ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 149ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನ

ಜಿಯೋದ 149ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನ

ಜಿಯೋ ಟೆಲಿಕಾಂನ 149ರೂ ಪ್ಲ್ಯಾನ್ ಒಟ್ಟು 20 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಿಗಲಿದೆ.

ಜಿಯೋದ 179ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನ

ಜಿಯೋದ 179ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನ

ಜಿಯೋ ಟೆಲಿಕಾಂನ 179ರೂ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಿಗಲಿದೆ.

ಜಿಯೋದ 199ರೂ. ಪ್ರಿಪೇಯ್ಡ್‌ ಪ್ಲಾನ್‌ ಪ್ರಯೋಜನಗಳು

ಜಿಯೋದ 199ರೂ. ಪ್ರಿಪೇಯ್ಡ್‌ ಪ್ಲಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 23 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 34.5 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಹಾಗೂ ಎಸ್‌ಎಮ್‌ಎಸ್‌ ಪ್ರಯೋಜನ ಸಹ ಪಡೆದಿದೆ.

ಜಿಯೋದ 209ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನ

ಜಿಯೋದ 209ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನ

ಜಿಯೋ ಟೆಲಿಕಾಂನ 209ರೂ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಿಗಲಿದೆ.

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್‌ ಕರೆಗಳು ಅನಿಯಮಿತ ಉಚಿತವಾಗಿವೆ.

ಜಿಯೋ 259ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 259ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 259ರೂ ಬೆಲೆಯ ಕ್ಯಾಲೆಂಡರ್‌ ತಿಂಗಳ ಮಾನ್ಯತೆಯ ಪ್ಲಾನ್‌ ಪ್ರತಿ ತಿಂಗಳು ಕೇವಲ ಒಂದು ರೀಚಾರ್ಜ್ ದಿನಾಂಕವನ್ನು ನೆನಪಿಟ್ಟುಕೊಳ್ಳಲು ಬಳಕೆದಾರರಿಗೆ ಸಹಾಯ ಮಾಡುತ್ತದೆ. ಇನ್ನು ಈ ಪ್ರಿಪೇಯ್ಡ್‌ ಪ್ಲಾನ್‌ 1.5GB ಹೈ-ಸ್ಪೀಡ್ ಡೇಟಾ ಪ್ರಯೋಜನವನ್ನು ನೀಡಲಿದ್ದು, ನಂತರ 64Kbpsಗೆ ಡೇಟಾ ವೇಗವನ್ನು ಇಳಿಯುತ್ತದೆ. ಇದು ಅನಿಯಮಿತ ಧ್ವನಿ ಕರೆಗಳು, ದೈನಂದಿನ 100 SMS ಪ್ರಯೋಜನವನ್ನು ನೀಡಲಿದೆ.

Best Mobiles in India

English summary
Jio plans under Rs 300 with unlimited voice calling, data, and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+