ಜಿಯೋ 401ರೂ. ಪ್ಲ್ಯಾನ್: ರೀಚಾರ್ಜ್ ಮಾಡಿಸಲು ಯೋಗ್ಯವೇ?
ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಜಿಯೋ ಇತ್ತೀಚಿಗಷ್ಟೆ ಮತ್ತೊಂದು ಹೊಸ ಪ್ರೀಪೇಯ್ಡ್ ಪ್ಲ್ಯಾನ್ ಬಿಡುಗಡೆ ಮಾಡಿದೆ. ಅದುವೇ ಜಿಯೋ 401ರೂ. ಪ್ಲ್ಯಾನ್. ಈ ಯೋಜನೆಯು ಆಕರ್ಷಕ ಸೌಲಭ್ಯ ಪಡೆದಿದೆ. ಈ ಪ್ಲ್ಯಾನ್ ರೀಚಾರ್ಜ್ ಮಾಡಿಸಲು ಉತ್ತಮವೇ?

ಹೌದು, ಜಿಯೋ ಟೆಲಿಕಾಂ ಹೊಸದಾಗಿ ಪರಿಚಯಿಸಿರುವ ಜಿಯೋ 401ರೂ. ಪ್ರೀಪೇಯ್ಡ್ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದೆ. ಜಿಯೋದ 401ರೂ. ಪ್ಲ್ಯಾನ್ ಡೇಟಾ, ವಾಯಿಸ್ ಕರೆ, ಎಸ್‌ಎಮ್‌ಎಸ್ ಜೊತೆಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಒಳಗೊಂಡಿದೆ. ಹೀಗಾಗಿ ಸದ್ಯ ಜಿಯೋದ ಈ ಯೋಜನೆಯು IPL ಪ್ರಿಯರಿಗೆ ಬೆಸ್ಟ್ ಪ್ಲ್ಯಾನ್ ಆಗಿ ಆಕರ್ಷಿಸಿದೆ. ಹಾಗಾದರೇ ಜಿಯೋದ ಈ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಮುಂದೆ ಓದಿರಿ.

ಜಿಯೋ 401ರೂ. ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ ಒಟ್ಟು 90GB ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಜಿಯೋ ಟು ಜಿಯೋ ಉಚಿತ ವಾಯಿಸ್ ಕರೆ ಹಾಗೂ ಜಿಯೋ ಟು ಇತರೆ ಟೆಲಿಕಾಂಗಳಿಗೆ 1000 ನಿಮಿಷಗಳ ಕರೆ ಮಿತಿ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಇದೆ. ಹಾಗೆಯೇ ಇದರೊಂದಿಗೆ ಹೆಚ್ಚುವರಿಯಾಗಿ 399ರೂ ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಜಿಯೋ 777ರೂ. ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ ಒಟ್ಟು 131GB ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಜಿಯೋ ಟು ಜಿಯೋ ಉಚಿತ ವಾಯಿಸ್ ಕರೆ ಹಾಗೂ ಜಿಯೋ ಟು ಇತರೆ ಟೆಲಿಕಾಂಗಳಿಗೆ 3000 ನಿಮಿಷಗಳ ಕರೆ ಮಿತಿ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಇದೆ. ಹಾಗೆಯೇ ಇದರೊಂದಿಗೆ ಹೆಚ್ಚುವರಿಯಾಗಿ 399ರೂ ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಜಿಯೋ 598ರೂ. ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ ಒಟ್ಟು 112GB ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಜಿಯೋ ಟು ಜಿಯೋ ಉಚಿತ ವಾಯಿಸ್ ಕರೆ ಹಾಗೂ ಜಿಯೋ ಟು ಇತರೆ ಟೆಲಿಕಾಂಗಳಿಗೆ 2000 ನಿಮಿಷಗಳ ಕರೆ ಮಿತಿ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಇದೆ. ಹಾಗೆಯೇ ಇದರೊಂದಿಗೆ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಕೊನೆಯ ಮಾತು:ಯಾವುದು ಉತ್ತಮ?
ಈ ಮೂರು ಯೋಜನೆಗಳು ಆಕರ್ಷಕ ಪ್ರಯೋಜನಗಳೊಂದಿಗೆ ಡಿಸ್ನಿ ಹಾಟ್‌ಸ್ಟಾರ್ ಸದಸ್ಯತ್ವ ಹೊಂದಿವೆ. ಐಪಿಎಲ್ ಪ್ರಿಯರಿಗೆ ಈ ಯೋಜನೆಗಳು ಉತ್ತಮ ಆಯ್ಕೆ. ಕಡಿಮೆ ಬೆಲೆಯಲ್ಲಿ ಡಿಸ್ನಿ ಹಾಟ್‌ಸ್ಟಾರ್ ಸದಸ್ಯತ್ವ ಯೋಜನೆ ಬೇಕಿದ್ದರೇ ಜಿಯೋ 401ರೂ. ಸರಿ ಅನಿಸಲಿದೆ. ಇನ್ನು ದೀರ್ಘಾವಧಿ ವ್ಯಾಲಿಡಿಟಿ ಬೇಕಿದ್ದರೇ, ಜಿಯೋ 598ರೂ. ಅಥವಾ ಜಿಯೋ 777ರೂ. ಪ್ಲ್ಯಾನ್ ಯೋಗ್ಯ.


Click it and Unblock the Notifications








