ಇಂದಿನಿಂದ ಜಿಯೋ ಪ್ಲ್ಯಾನ್‌ಗಳ ಹೊಸ ಬೆಲೆ ಜಾರಿ!..ರೀಚಾರ್ಜ್ ಮುನ್ನ ಇಲ್ಲಿ ಗಮನಿಸಿ!
ರಿಲಯನ್ಸ್ ಜಿಯೋ ಟೆಲಿಕಾಂ ನವೆಂಬರ್ 28 ರಂದು ತನ್ನ ಪ್ರಿಪೇಯ್ಡ್ ಪ್ಲ್ಯಾನ್‌ಗಳ ದರ ಹೆಚ್ಚಳ ಘೋಷಣೆ ಮಾಡಿ, ಗ್ರಾಹಕರಿಗೆ ಅಚ್ಚರಿ ನೀಡಿದೆ. ಜಿಯೋ ಟೆಲಿಕಾಂನ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಹೊಸ ಬೆಲೆಯು ಇಂದಿನಿಂದ (ಡಿಸೆಂಬರ್ 1 ರಿಂದ) ಜಾರಿ ಆಗಿವೆ. ಹೀಗಾಗಿ ಇನ್ಮುಂದೆ ರೀಚಾರ್ಜ್ ಮಾಡಿಕೊಳ್ಳುವ ಗ್ರಾಹಕರಿಗೆ ಹೊಸ ದರಗಳು ಅನ್ವಯ ಆಗಲಿವೆ.

ಹೌದು, ಜಿಯೋ ಗ್ರಾಹಕರೇ ಇಂದಿನಿಂದ (ಡಿ.1) ಪ್ರಿಪೇಯ್ಡ್ ಯೋಜನೆಗಳ ಹೊಸ ದರ ಜಾರಿ ಆಗಿವೆ. ಅಲ್ಪಾವಧಿಯ ಪ್ರಿಪೇಯ್ಡ್ ಯೋಜನೆಗಳು, ದೀರ್ಘಾವಧಿಯ ಪ್ರಿಪೇಯ್ಡ್ ಯೋಜನೆಗಳು ಹಾಗೂ ವಾರ್ಷಿಕ ಪ್ರಿಪೇಯ್ಡ್ ಯೋಜನೆಗಳ ಬೆಲೆಯಲ್ಲಿ ಹೆಚ್ಚಳ ಆಗಿದೆ. ರೀಚಾರ್ಜ್ ಮಾಡುವ ಮೊದಲು ಜಿಯೋ ಯೋಜನೆಗಳ ಬಗ್ಗೆ ಗಮನಿಸಿ. ಹಾಗಾದರೇ ಹಾಗಾದರೇ ಜಿಯೋ ಟೆಲಿಕಾಂನ ಕೆಲವು ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 239ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಹಾಗೆಯೇ ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋದ 299ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಜಿಯೋದ 395ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಜಿಯೋದ 479ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋದ 533ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋದ 666ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1199ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ 1199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 2545ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.


Click it and Unblock the Notifications








