Home
ಸುದ್ದಿಜಾಲ

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ನೀವು ಬೇಡಾ ಅಂದ್ರೂ ಪ್ರತಿದಿನ 3GB ಡೇಟಾ ಪಕ್ಕಾ!

ಭಾರತೀಯ ಟೆಲಿಕಾಂ ವಲಯದಲ್ಲಿ ಅಗ್ರಸ್ಥಾನದಲ್ಲಿ ನಿಂತಿರುವ ರಿಲಯನ್ಸ್ ಜಿಯೋ ಕೆಲವು ಬೊಂಬಾಟ್‌ ಯೋಜನೆಗಳ ಮೂಲಕ ಅಧಿಕ ಚಂದಾದಾರರನ್ನು ಸೆಳೆದುಕೊಂಡಿದೆ. ಆ ಪೈಕಿ ಜಿಯೋ ಟೆಲಿಕಾಂನ ಪ್ರತಿದಿನ 3GB ಡೇಟಾ ಪ್ರಯೋಜನ ಪಡೆದಿರುವ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಅಧಿಕ ಡೇಟಾ ಬಳಕೆ ಮಾಡುವ ಚಂದಾದಾರರಿಗೆ ಅಟ್ರ್ಯಾಕ್ಡ್‌ ಆಗಿವೆ. ಜಿಯೋ ಟೆಲಿಕಾಂನ ಈ ಪ್ಲ್ಯಾನ್‌ಗಳಲ್ಲಿ ನಿತ್ಯ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳ ಆಯ್ಕೆ ಸಹ ಲಭ್ಯ.

ಹೌದು, ರಿಲಯನ್ಸ್ ಜಿಯೋ ಕಂಪನಿಯು ಭಿನ್ನ ಪ್ರೈಸ್‌ ಟ್ಯಾಗ್‌ನ ಡೇಟಾ ಸೌಲಭ್ಯಗಳ ಆಯ್ಕೆ ಪಡೆದಿದೆ. ಪ್ರಮುಖವಾಗಿ 3 GB ಡೇಟಾ ಪ್ರಯೋಜನದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿರುವ ಯೋಜನೆಗಳು ಅಧಿಕ ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಪ್ರತಿದಿನ 3GB ಡೇಟಾ ಪ್ರಯೋಜನ ಪಡೆದ ಜಿಯೋ (Jio) ನ ರೀಚಾರ್ಜ್‌ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ನೀವು ಬೇಡಾ ಅಂದ್ರೂ ಪ್ರತಿದಿನ 3GB ಪಕ್ಕಾ!

ಜಿಯೋದ 219ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 219ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 14 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಜಿಯೋ ಆಪ್ಸ್‌ ಸಹ ದೊರೆಯುತ್ತವೆ. ಪೂರ್ಣ ಅವಧಿಗೆ ಒಟ್ಟು 44GB ಡೇಟಾ ಲಭ್ಯವಾಗಲಿದೆ.

ಜಿಯೋದ 399ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 399 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಯೋಜನೆಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರ ಜೊತೆಗೆ ಜಿಯೋ ಆಪ್ಸ್‌ ಸಹ ದೊರೆಯುತ್ತವೆ. ಪೂರ್ಣ ಅವಧಿಗೆ ಒಟ್ಟು 90 GB ಡೇಟಾ ಲಭ್ಯವಾಗಲಿದೆ.

ಜಿಯೋದ 999ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಸಂಸ್ಥೆಯ 999 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದ್ದು, ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಲಭ್ಯ. ಇದರ ಜೊತೆಗೆ ಜಿಯೋ ಆಪ್ಸ್‌ ಸಹ ಲಭ್ಯ ಇದ್ದು, ಇನ್ನು ಪೂರ್ಣ ಅವಧಿಗೆ ಒಟ್ಟು 252 GB ಡೇಟಾ ಲಭ್ಯವಾಗಲಿದೆ.

ಜಿಯೋದ 1499ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಸಂಸ್ಥೆಯ 1499 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಸಹ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದ್ದು, ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಲಭ್ಯ. ಇನ್ನು ಈ ಪ್ಲ್ಯಾನ್‌ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಓಟಿಟಿ ಚಂದಾದಾರಿಕೆ ಪಡೆದಿದ್ದು, ಜಿಯೋ ಆಪ್ಸ್‌ ಸಹ ಲಭ್ಯ. ಇನ್ನು ಪೂರ್ಣ ಅವಧಿಗೆ ಒಟ್ಟು 252 GB ಡೇಟಾ ಲಭ್ಯವಾಗಲಿದೆ.

Best Mobiles in India

English summary
Jio Prepaid Plans with 3GB Data Per Day. Check Plans benefits and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+