India

499ರೂ.ಗಳ ಪ್ರಿಪೇಯ್ಡ್‌ ಪ್ಲಾನ್‌ ಅನ್ನು ಮತ್ತೆ ಪರಿಚಯಿಸಿದ ಜಿಯೋ ಟೆಲಿಕಾಂ!

|

ದೇಶದ ಟೆಲಿಕಾಂ ವಲಯದಲ್ಲಿ ಟೆಲಿಕಾಂ ದೈತ್ಯ ಜಿಯೋ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಅಧಿಕ ಡೇಟಾ, ಅನಿಮಿತ ಕರೆ ಪ್ರಯೋಜನ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಇನ್ನು ಇತ್ತೀಚಿಗಷ್ಟೇ ಪ್ರಮುಖ ಟೆಲಿಕಾಂಗಳಾದ ಏರ್‌ಟೆಲ್‌, ಜಿಯೋ, ವಿ ಟೆಲಿಕಾಂಗಳು ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆ ಏರಿಕೆ ಮಾಡಿವೆ. ಇದರಿಂದ ಕೆಲವು ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಸ್ಥಗಿತಗೊಳಿಸಿವೆ. ಅದರಂತೆ ಜಿಯೋ ಟೆಲಿಕಾಂ ಕೂಡ ಕೆಲವು ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಸ್ಟಾಪ್‌ ಮಾಡಿದೆ. ಆದರೆ ಇದೀಗ ಕೆಲವು ದಿನಗಳ ಹಿಂದೆ ಸ್ಟಾಪ್‌ ಮಾಡಿದ್ದ ಪ್ರಿಪೇಯ್ಡ್‌ ಪ್ಲಾನ್‌ ಅನ್ನು ಮತ್ತೆ ಪರಿಚಯಿಸಿದೆ.

ಜಿಯೋ

ಹೌದು, ರಿಲಯನ್ಸ್ ಜಿಯೋ ಟೆಲಿಕಾಂ ಈ ಹಿಂದೆ ಸ್ಥಗಿತಗೊಳಿಸಿದ್ದ 499ರೂ.ಗಳ ಪ್ರಿಪೇಯ್ಡ್ ಪ್ಲಾನ್ ಅನ್ನು ಮತ್ತೆ ಪರಿಚಯಿಸಿದೆ. ಈ ಮೂಲಕ ಅಗ್ಗದ ಬೆಲೆಯ ಪ್ರಿಪೇಯ್ಡ್‌ ಪ್ಲಾನ್‌ ಬಯಸುವವರಿಗೆ ಮತ್ತೊಂದು ಆಯ್ಕೆಯನ್ನು ನೀಡಿದೆ. ಈ ಪ್ಲಾನ್‌ ದೈನಂದಿನ 2GB ಡೇಟಾ ಮತ್ತು ಡಿಸ್ನಿ + ಹಾಟ್‌ಸ್ಟಾರ್‌ಗೆ ಪ್ರವೇಶ ನೀಡಲಿದ್ದು, 28ದಿನಗಳ ಮಾನ್ಯತೆಯನ್ನು ಹೊಂದಿದೆ. ಪ್ರತಿನಿತ್ಯ 2GB ಡೇಟಾ ಬಯಸುವವರಿಗೆ ಇದು ಸೂಕ್ತವಾದ ಪ್ಲಾನ್‌ ಆಗಿದೆ. ಇದಲ್ಲದೆ ಜಿಯೋ ಟೆಲಿಕಾಂ ಹೊಸ ವರ್ಷದ ಪ್ರತುಕ್ತ ಪರಿಚಯಿಸಿದ್ದ ನ್ಯೂ ಇಯರ್‌ ಆಫರ್‌ ಅನ್ನು ಜನವರಿ 7ರ ತನಕ ಮುಂದುವರೆಸುವುದಾಗಿಯೂ ಹೇಳಿದೆ. ಹಾಗಾದ್ರೆ ಜಿಯೋ ಟೆಲಿಕಾಂ 499ರೂ.ಗಳ ಪ್ರಿಪೇಯ್ಡ್ ಪ್ಲಾನ್ ಏನೆಲ್ಲಾ ಪ್ರಯೋಜನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋ 499ರೂ. ಪ್ರಿಪೇಯ್ಡ್ ಪ್ಲಾನ್‌ ಪ್ರಯೋಜನ

ಜಿಯೋ 499ರೂ. ಪ್ರಿಪೇಯ್ಡ್ ಪ್ಲಾನ್‌ ಪ್ರಯೋಜನ

ಜಿಯೋ 499ರೂ. ಪ್ರಿಪೇಯ್ಡ್ ಪ್ಲಾನ್‌ ದೈನದಿನ 2GB ಡೇಟಾ ಮತ್ತು ಡೈಲಿ 100 SMS ಪ್ರಯೋಜನ ನೀಡಲಿದೆ. ಇದು 28 ದಿನಗಳ ಮಾನ್ಯತೆಯನ್ನು ಹೊಂದಿದ್ದು, Jio ಪ್ರೈಮ್ ಸದಸ್ಯತ್ವದೊಂದಿಗೆ ಅನಿಯಮಿತ ಕರೆ ಪ್ರಯೋಜನವನ್ನು ನೀಡಲಿದೆ. ಇದಲ್ಲದೆ ಈ ಪ್ಲಾನ್‌ ನಿಮಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ನೀಡಲಿದೆ. ಇದು ನಿಮಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಡಿಸ್ನಿ + ಹಾಟ್‌ಸ್ಟಾರ್ ಪ್ಲಾಟ್‌ಫಾರ್ಮ್‌ಗೆ ಒಂದು ವರ್ಷದ ಪ್ರವೇಶವನ್ನು ನೀಡುತ್ತದೆ. ಹಾಗೆಯೇ ಜಿಯೋ ಸಿನಿಮಾ ಮತ್ತು ಜಿಯೋಟಿವಿ ಅಂತಹ ಜಿಯೋ ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ನೀಡಲಿದೆ.

ಜಿಯೋ ಹ್ಯಾಪಿ ನ್ಯೂ ಇಯರ್ ಆಫರ್ ವಿಸ್ತರಣೆ

ಜಿಯೋ ಹ್ಯಾಪಿ ನ್ಯೂ ಇಯರ್ ಆಫರ್ ವಿಸ್ತರಣೆ

ಇನ್ನು ಜಿಯೋ ಟೆಲಿಕಾಂ ನ್ಯೂ ಇಯರ್‌ ಪ್ರಯುಕ್ತ 2,545ರೂ ಪ್ಲಾನ್‌ನಲ್ಲಿ ನೀಡಿದ್ದ ಆಫರ್‌ ಅನ್ನು ಈ ವರ್ಷದ ಜನವರಿ 7ರವರೆಗೆ ಮುಂದುವರೆಸುವುದಾಗಿ ಹೇಳಿದೆ. ಇನ್ನು ಈ ಆಫರ್‌ನಲ್ಲಿ 336ದಿನಗಳ ಮಾನ್ಯತೆ ಹೊಂದಿರುವ 2,545ರೂ ಬೆಲೆಯ ವಾರ್ಷಿಕ ಪ್ರಿಪೇಯ್ಡ್‌ ಪ್ಲಾನ್‌ 29 ದಿನಗಳ ಹೆಚ್ಚುವರಿ ಮಾನ್ಯತೆಯನ್ನು ನೀಡುತ್ತದೆ. ಇದರಿಂದ ಈ ಪ್ಲಾನ್‌ನಲ್ಲಿ ನಿಮಗೆ ಸಾಮಾನ್ಯ 336 ದಿನಗಳ ಬದಲಿಗೆ 365 ದಿನಗಳವರೆಗೆ ವ್ಯಾಲಿಡಿಟಿ ಸಿಗಲಿದೆ. ಇನ್ನು ಈ ಪ್ಲಾನ್‌ನಲ್ಲಿ ನಿಮಗೆ ಅನಿಯಮಿತ ಕರೆ, ದಿನಕ್ಕೆ 100 SMS ಮತ್ತು 1.5GB ದೈನಂದಿನ ಡೇಟಾ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಇದರೊಂದಿಗೆ ಜಿಯೋ ಟೆಲಿಕಾಂಗಳ ಇತರೆ ಪ್ರಿಪೇಯ್ಡ್‌ ಪ್ಲಾನ್‌ಗಳ ಬಗ್ಗೆ ಕೆಳಗಿನ ಹಂತಗಳಲ್ಲಿ ತಿಳಿಯಿರಿ.

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯಲಿದೆ. ಅನಿಯಮಿತ ಕರೆ ಪ್ರಯೋಜನ, ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಕಊಡ ಲಭ್ಯವಾಗಲಿದೆ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ.

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಇದರಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್‌ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ.

Most Read Articles
Best Mobiles in India

English summary
Reliance Jio has announced that the popular Rs 499 plan will now be reintroduced along with new benefits like 2GB daily data and access to Disney+ Hotstar.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X