Home
ಸುದ್ದಿಜಾಲ

ಜಿಯೋದ ಈ ಅಗ್ಗದ ಡೇಟಾ ಪ್ಯಾಕ್‌ನಲ್ಲಿ ಈಗ ಭರ್ಜರಿ ಡೇಟಾ ಪ್ರಯೋಜನ!

ಜಿಯೋ ಟೆಲಿಕಾಂ ಕಡಿಮೆ ಬೆಲೆಯಲ್ಲಿ ಹಲವು ಡೇಟಾ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಅನಿಸಿಕೊಂಡಿದೆ. ಹಾಗೆಯೇ ತನ್ನ ಚಂದಾದಾರರಿಗೆ ಹೆಚ್ಚುವರಿ ಡೇಟಾ ಅನುಕೂಲಕ್ಕಾಗಿ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಕೆಲವು 4G ಡೇಟಾ ವೋಚರ್‌ ಪ್ಯಾಕ್‌ಗಳನ್ನು ಸಹ ಪರಿಚಯಿಸಿದೆ. ಜಿಯೋ ಡೇಟಾ ವೋಚರ್‌ನ ಆರಂಭಿಕ 11ರೂ. ಪ್ಯಾಕ್‌ನಲ್ಲಿ ಈಗ ಪರಿಷ್ಕರಣೆ ಆಗಿದ್ದು, ಹೆಚ್ಚಿನ ಪ್ರಯೋಜನ ಸೇರಿದೆ.

ಟೆಲಿಕಾಂ

ಹೌದು, ಜಿಯೋ ಟೆಲಿಕಾಂ ಆರಂಭಿಕ 11ರೂ. ಬೆಲೆಯಿಂದ ಡೇಟಾ ವೋಚರ್‌ಗಳ ಆಯ್ಕೆಯನ್ನು ಗ್ರಾಹಕರಿಗೆ ನೀಡಿದೆ. ಇದೀಗ 11ರೂ. ಬೆಲೆಯ ಪ್ಯಾಕ್‌ನಲ್ಲಿ ಹೆಚ್ಚುವರಿ ಡೇಟಾ ಸೌಲಭ್ಯ ಸೇರಿಸಲಾಗಿದೆ. ಈ ಪ್ಯಾಕ್‌ನಲ್ಲಿ ಮೊದಲು 400MB ಡೇಟಾ ಲಭ್ಯವಿತ್ತು. ಆದರೆ ಪರಿಕ್ಷರಣೆಯ ನಂತರ ಈಗ 1GB ಡೇಟಾ ಸಿಗಲಿದೆ. ಇನ್ನುಳಿದಂತೆ ಜಿಯೋ ಟೆಲಿಕಾಂನ ಡೇಟಾ ವೋಚರ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ.

ಜಿಯೋ 4G ಡಾಟಾ ವೋಚರ್ಸ್‌

ಜಿಯೋ 4G ಡಾಟಾ ವೋಚರ್ಸ್‌

ಜಿಯೋ ಸಂಸ್ಥೆಯು ಹೆಚ್ಚುವರಿ ಡಾಟಾ ಬಳಕೆಗಾಗಿ ಅಗತ್ಯವಿರುವ ಗ್ರಾಹಕರಿಗಾಗಿ ಹಾಗೂ 4G ಡಾಟಾ ಬಳಕೆಗಾಗಿ ಕೆಲವು 4G ಡಾಟಾ ವೋಚರ್ಸ್‌ ಆಯ್ಕೆಗಳು ಪರಿಚಯಿಸಿದೆ. 11ರೂ. ಡಾಟಾ ವೋಚರ್ ನಲ್ಲಿ 1GB ಡಾಟಾ ಲಭ್ಯ, 21ರೂ. ವೋಚರ್‌ನಲ್ಲಿ 2GB ಡಾಟಾ, 51ರೂ. ನಲ್ಲಿ 6GB ಡಾಟಾ, ಹಾಗೂ 101ರೂ. ಡಾಟಾ ವೋಚರ್ ಪ್ಲ್ಯಾನಿನಲ್ಲಿ ಒಟ್ಟು 12GB ಡಾಟಾ ಸಿಗಲಿದೆ.

ಜಿಯೋ 349ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 349ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಿದ್ದು, ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ದೊರೆಯುತ್ತದೆ. ಇದರೊಂದಿದೆ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಆಪ್ಸ್‌ ಸೇವೆ ಲಭ್ಯ.

ಜಿಯೋ 401ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 401ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋದ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಲಭ್ಯವಿದ್ದು, ಒಟ್ಟು 90GB ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಜಿಯೋ ಟು ಜಿಯೋ ಉಚಿತ ವಾಯಿಸ್ ಕರೆ ಹಾಗೂ ಜಿಯೋ ಟು ಇತರೆ ಟೆಲಿಕಾಂಗಳ ಕರೆಗಳು ಸಹ ಅನಿಯಮಿತ ಉಚಿತ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಇದೆ. ಹಾಗೆಯೇ ಜಿಯೋ ಆಪ್ಸ್‌ ಲಭ್ಯ.

ಜಿಯೋ 999ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 999ರೂ. ಪ್ರೀಪೇಯ್ಡ್‌ ಪ್ಲಾನ್

ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

Best Mobiles in India

English summary
Jio has revised the cheapest 4G Data Voucher priced at Rs 11. The Rs 11 4G Data Voucher from Reliance Jio used to offer 800MB of data up until now.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+