Home
ಸುದ್ದಿಜಾಲ

ಅಬ್ಬಬ್ಬಾ 200 ದಿನ ವ್ಯಾಲಿಡಿಟಿ!..ಪ್ರತಿದಿನ 2.5GB ಡೇಟಾ..ಹುಬ್ಬೇರಿಸಿದ ಗ್ರಾಹಕರು!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ ಅಗ್ರ ಸ್ಥಾನದಲ್ಲಿ ಗುರುತಿಸಿಕೊಂಡಿದ್ದು. ಕೆಲವು ಆಕರ್ಷಕ ರೀಚಾರ್ಜ್‌ ಪ್ಲ್ಯಾನ್‌ಗಳ ಮೂಲಕ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಜಿಯೋ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆ ಸಹ ನೀಡಿದೆ. ಅವುಗಳಲ್ಲಿ ಹಲವು ಯೋಜನೆಗಳು ಡೇಟಾ ಪ್ರಯೋಜನ ಪಡೆದಿರುವುದು ಪ್ರಮುಖ ಆಕರ್ಷಣೆ ಎನಿಸಿದೆ. ಅದಾಗ್ಯೂ, ಜಿಯೋದ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್‌ ಬಹಳ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿದೆ.

ಹೌದು, ಜಿಯೋ ಸಂಸ್ಥೆಯ ಹಲವು ಭಿನ್ನ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆ ಹೊಂದಿದ್ದು, ಆ ಪೈಕಿ ಹೊಸ 2025ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಹೆಚ್ಚು ಆಕರ್ಷಕ ಎನಿಸಿದ್ದು, ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ. ಈ ರೀಚಾರ್ಜ್‌ ದೀರ್ಘಾವಧಿಯ ವ್ಯಾಲಿಡಿಟಿ ಜೊತೆಗೆ ಆಕರ್ಷಕ ದೈನಂದಿನ ಡೇಟಾ ಪ್ರಯೋಜನ ಪಡೆದಿದೆ. ಇನ್ನು ಗ್ರಾಹಕರು ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, 200 ದಿನ ಪದೇ ಪದೇ ರೀಚಾರ್ಜ್ ಮಾಡುವ ಅಗತ್ಯವೇ ಇರಲ್ಲ. ಹಾಗಾದರೇ ಜಿಯೋ 2025ರೂ. ರೀಚಾರ್ಜ್‌ ಪ್ಲ್ಯಾನಿನ ಹಾಗೂ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಮುಂದೆ ಓದಿರಿ.

ಅಬ್ಬಬ್ಬಾ 200 ದಿನ ವ್ಯಾಲಿಡಿಟಿ!..ಪ್ರತಿದಿನ 2.5GB ಡೇಟಾ..ಹುಬ್ಬೇರಿಸಿದ ಗ್ರಾಹಕರ

ಜಿಯೋ 2025ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಜಿಯೋ ಟೆಲಿಕಾಂನ 2025 ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 200 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದಿದ್ದು, ಈ ಅವಧಿ ಯಲ್ಲಿ ನಿತ್ಯ 2.5 GB ಡೇಟಾ ಸೌಲಭ್ಯ ಸಿಗಲಿದೆ. ಅಲ್ಲದೇ ಉಚಿತ 100 ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಹಾಗೆಯೇ ಚಂದಾದಾರರಿಗೆ ಅನಿಯಮಿತ ಫ್ರೀ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500 GB ಡೇಟಾ ಲಭ್ಯ ಖಚಿತ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ಸಿಗಲಿದೆ.

ಜಿಯೋ 749ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಜಿಯೋ ಟೆಲಿಕಾಂನ 749 ರೂ. ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 72 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದ್ದು, ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಉಚಿತ 100 ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಹಾಗೆಯೇ ಚಂದಾದಾರರಿಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 164GB ಡೇಟಾ ಲಭ್ಯ ಖಚಿತ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ಸಿಗಲಿದೆ.

ಜಿಯೋ 999ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ರಿಲಯನ್ಸ್‌ ಜಿಯೋ ಟೆಲಿಕಾಂನ 999 ರೂ. ರೀಚಾರ್ಜ್‌ ಯೋಜನೆಯು ದೀರ್ಘಾವಧಿಯ ಪ್ಲ್ಯಾನ್‌ ಆಗಿದ್ದು, ಒಟ್ಟು 98 ದಿನಗಳ ವ್ಯಾಲಿಡಿಟಿ (Validity) ಸೌಲಭ್ಯ ಪಡೆದುಕೊಂಡಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯ ಇದ್ದು, ಹಾಗೆಯೇ ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಸಹ ಲಭ್ಯವಾಗಲಿದೆ. ಅಲ್ಲದೇ ಇದರಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ.

ಜಿಯೋ 859ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ರಿಲಯನ್ಸ್‌ ಜಿಯೋ 859 ರೂ. ರೀಚಾರ್ಜ್‌ ನೇರವಾಗಿ ಜಿಯೋ ಟೆಲಿಕಾಂನ 859 ರೂ. ಪ್ರೀಪೇಯ್ಡ್ ಪ್ಲ್ಯಾನ್‌ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿ (Validity) ಸೌಲಭ್ಯ ಪಡೆದುಕೊಂಡಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯ ಇದ್ದು, ಹಾಗೆಯೇ ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಸಹ ಸಿಗಲಿದೆ.

Best Mobiles in India

English summary
Jio Rs 2025 New Prepaid Plan offers 200 Day Validity with data benefits. Check best annual plans and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+