ಜಿಯೋ ಟೆಲಿಕಾಂನ ಈ ಅಗ್ಗದ ಪ್ಲ್ಯಾನಿನಲ್ಲಿ ಭರ್ಜರಿ ಡೇಟಾ ಸಿಗುತ್ತೆ!
ಜನಪ್ರಿಯ ಜಿಯೋ ಟೆಲಿಕಾಂ ಇತ್ತೀಚಿಗೆ ತನ್ನ ಪ್ರಿಪೇಯ್ಡ್ ಪ್ಲ್ಯಾನ್ ದರ ಏರಿಕೆ ಮಾಡಿದೆ. ಜಿಯೋದ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಎಸ್‌ಎಮ್‌ಎಸ್ ಪ್ರಯೋಜನ ಪಡೆದಿವೆ. ಕಡಿಮೆ ಬೆಲೆಯಲ್ಲಿ ಕೆಲವೊಂದು ಪ್ರಿಪೇಯ್ಡ್ ಯೋಜನೆಗಳು ಆಕರ್ಷಕ ಎನಿಸಿವೆ. ಆ ಪೈಕಿ ಜಿಯೋ ಟೆಲಿಕಾಂನ 209ರೂ. ಪ್ರಿಪೇಯ್ಡ್ ಯೋಜನೆ ಹೆಚ್ಚು ಗಮನ ಸೆಳೆದಿದೆ.

ರಿಲಯನ್ಸ್ ಜಿಯೋ ಟೆಲಿಕಾಂನ 209ರೂ. ಬೆಲೆಯ ಪ್ರಿಪೇಯ್ಡ್ ಯೋಜನೆಯ ಆಯ್ಕೆ ಹೊಂದಿದೆ. ಈ ಯೋಜನೆಯು ಡೇಟಾ ಪ್ರಯೋಜನದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಹಾಗೂ ವಾಯಿಸ್ ಕರೆಯ ಪ್ರಯೋಜನ ಪಡೆದಿದೆ. ಕಡಿಮೆ ದರದಲ್ಲಿ ಡೈಲಿ ಡೇಟಾ ಹಾಗೂ ವಾಯಿಸ್ ಕರೆ ಬಯಸುವ ಗ್ರಾಹಕರಿಗೆ ಈ ಯೋಜನೆ ಅತ್ಯುತ್ತಮ ಎನಿಸಲಿದೆ. ಹಾಗಾದರೇ ಜಿಯೋ ಟೆಲಿಕಾಂನ 209ರೂ. ಬೆಲೆಯ ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳ ಬಗ್ಗೆ ಹಾಗೂ ಜಿಯೋದ ಇತರೆ ಆಕರ್ಷಕ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.
ಜಿಯೋ 209ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 209ರೂ. ಪ್ರಿಪೇಯ್ಡ್ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಗಳು ದೊರೆಯುತ್ತವೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 28GB ಡೇಟಾ ಪ್ರಯೋಜನ ಸಿಗಲಿದೆ.

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 239ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.
ಜಿಯೋ 119ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 119ರೂ. ಪ್ರಿಪೇಯ್ಡ್ ಪ್ಲ್ಯಾನ್ 14 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್‌ಎಮ್‌ಎಸ್ ಗಳು ದೊರೆಯುತ್ತವೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 21 GB ಡೇಟಾ ಪ್ರಯೋಜನ ಸಿಗಲಿದೆ.


Click it and Unblock the Notifications








