ಜಿಯೋ ಟೆಲಿಕಾಂನಿಂದ ಹೊಸ ಪ್ಲಾನ್‌ ಲಾಂಚ್‌! ಏನೆಲ್ಲಾ ಪ್ರಯೋಜನ?

|

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ ಕಂಪೆನಿ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ತನ್ನ ಜನಪ್ರಿಯ ಪ್ರಿಪೇಯ್ಡ್‌ ಪ್ಲಾನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಇದರಲ್ಲಿ ಅಲ್ಪಾವಧಿಯ ಪ್ಲಾನ್‌ಗಳ ಜೊತೆಗೆ ದೀರ್ಘಾವಧಿಯ ಪ್ಲಾನ್‌ಗಳು ಕೂಡ ಸೇರಿವೆ. ಸದ್ಯ ಇದೀಗ ಜಿಯೋ ಟೆಲಿಕಾಂ ತನ್ನ ಬಳಕೆದಾರರಿಗೆ 259ರೂ. ಬೆಲೆಯಲ್ಲಿ ಹೊಸ ಪ್ರಿಪೇಯ್ಡ್‌ ಪ್ಲಾನ್‌ ಲಾಂಚ್‌ ಮಾಡಿದೆ. ಈ ಪ್ಲಾನ್‌ 'ಕ್ಯಾಲೆಂಡರ್ ತಿಂಗಳ ಮಾನ್ಯತೆ' ಯನ್ನು ಹೊಂದಿದ್ದು, ನಿಖರವಾಗಿ ಒಂದು ಕ್ಯಾಲೆಂಡರ್ ತಿಂಗಳ ಅವಧಿಗೆ ಅನಿಯಮಿತ ಡೇಟಾ ಮತ್ತು ಧ್ವನಿ ಕರೆ ಪ್ರಯೋಜನಗಳನ್ನು ನೀಡುತ್ತದೆ.

ಜಿಯೋ

ಹೌದು, ಜಿಯೋ ಟೆಲಿಕಾಂ ಹೊಸದಾಗಿ ಕ್ಯಾಲೆಂಡರ್‌ ತಿಂಗಳ ವ್ಯಾಲಿಡಿಟಿ ನೀಡುವ ಹೊಸ ಪ್ರಿಪೇಯ್ಡ್‌ ಪ್ಲಾನ್‌ ಪರಿಚಯಿಸಿದೆ. ಈ ಪ್ಲಾನ್‌ 259ರೂ. ಬೆಲೆಯನ್ನು ಹೊಂದಿದ್ದು, ಭರ್ತಿ ಒ೦ದು ತಿಂಗಳ ವ್ಯಾಲಿಡಿಟಿ ನೀಡಲಿದೆ. ಜೊತೆಗೆ ಜಿಯೋ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯನ್ನು ಪ್ರತಿ ತಿಂಗಳ ಅದೇ ದಿನಾಂಕದಂದು ನವೀಕರಿಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಇನ್ನುಳಿದಂತೆ ಈ ವಿಶೇಷ ಪ್ರಿಪೇಯ್ಡ್‌ ಪ್ಲಾನ್‌ ಪ್ರಯೋಜನಗಳು ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋ

ಜಿಯೋ ಟೆಲಿಕಾಂನ 259ರೂ ಬೆಲೆಯ ಕ್ಯಾಲೆಂಡರ್‌ ತಿಂಗಳ ಮಾನ್ಯತೆಯ ಪ್ಲಾನ್‌ ಪ್ರತಿ ತಿಂಗಳು ಕೇವಲ ಒಂದು ರೀಚಾರ್ಜ್ ದಿನಾಂಕವನ್ನು ನೆನಪಿಟ್ಟುಕೊಳ್ಳಲು ಬಳಕೆದಾರರಿಗೆ ಸಹಾಯ ಮಾಡುತ್ತದೆ. ಇನ್ನು ಈ ಪ್ರಿಪೇಯ್ಡ್‌ ಪ್ಲಾನ್‌ 1.5GB ಹೈ-ಸ್ಪೀಡ್ ಡೇಟಾ ಪ್ರಯೋಜನವನ್ನು ನೀಡಲಿದ್ದು, ನಂತರ 64Kbpsಗೆ ಡೇಟಾ ವೇಗವನ್ನು ಇಳಿಯುತ್ತದೆ. ಇದು ಅನಿಯಮಿತ ಧ್ವನಿ ಕರೆಗಳು, ದೈನಂದಿನ 100 SMS ಪ್ರಯೋಜನವನ್ನು ನೀಡಲಿದೆ. ಇದಲ್ಲದೆ ಜಿಯೋ ಅಪ್ಲಿಕೇಶನ್‌ಗಳಿಗೆ ಪೂರಕ ಚಂದಾದಾರಿಕೆಯನ್ನು ಸಹ ಒಳಗೊಂಡಿದೆ. ಇದು ನಿಯಮಿತ ರೀಚಾರ್ಜ್ ಪ್ಲಾನ್‌ಗಿಂತ ಭಿನ್ನವಾಗಿದ್ದು, ನಿಗದಿತ ಮಾನ್ಯತೆಯ ಅವಧಿಯೊಂದಿಗೆ ಬರುತ್ತದೆ.

ಜಿಯೋ

ಇದಲ್ಲದೆ ಜಿಯೋ ಕೆಲ ದಿನಗಳ ಹಿಂದೆ ಹೊಸದಾಗಿ 279ರೂ. ಕ್ರಿಕೆಟ್ ಆಡ್-ಆನ್ ಪ್ರಿಪೇಯ್ಡ್ ಪ್ಲಾನ್‌ ಪರಿಚಯಿಸಿದೆ. ಈ ಪ್ಲಾನ್‌ ಒಂದು ವರ್ಷದ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ನೀಡಲಿದೆ. ಇದು ಒಟ್ಟು 15GB ಹೈ-ಸ್ಪೀಡ್ ಡೇಟಾವನ್ನು ನೀಡುತ್ತದೆ. ಅಲ್ಲದೆ ನೀವು ಈ ಯೋಜನೆಯನ್ನು ಖರೀದಿಸಿದರೆ, ಈಗಾಗಲೇ ನಿಮ್ಮ ಅಸ್ತಿತ್ವದಲ್ಲಿರುವ ಪ್ರಿಪೇಯ್ಡ್ ಯೋಜನೆ ಅವಧಿ ಮುಗಿಯುವವರೆಗೆ ಮಾತ್ರ ಮಾನ್ಯವಾಗಿರುತ್ತದೆ. ಇನ್ನು ಈ ಈ ಕ್ರಿಕೆಟ್ ಪ್ರಿಪೇಯ್ಡ್ ಪ್ಲಾನ್‌ ಎಲ್ಲರಿಗೂ ಲಭ್ಯವಿಲ್ಲ, ಬದಲಿಗೆ ಕೆಲವೇ ಕೆಲ ಆಯ್ದ ಬಳಕೆದಾರರಿಗೆ ಇದು ಲಭ್ಯವಿದೆ. ಕೆಲವು ಆಯ್ದ ಮಂದಿಗಳ ಲಿಸ್ಟ್‌ನಲ್ಲಿ ನೀವು ಕೂಡ ಸೇರಿದ್ದರೆ MyJio ಅಪ್ಲಿಕೇಶನ್‌ನಲ್ಲಿ ಈ ಪ್ಲಾನ್‌ ನಿಮಗೆ ಲಭ್ಯವಾಗಲಿದೆ.

ಜಿಯೋ ಟೆಲಿಕಾಂನ 4,199 ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಜಿಯೋ ಟೆಲಿಕಾಂನ 4,199 ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಜಿಯೋ ಟೆಲಿಕಾಂನ 4,199 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಟೆಲಿಕಾಂ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

ಜಿಯೋ ಟೆಲಿಕಾಂನ 555ರೂ. ಪ್ಲಾನ್‌

ಜಿಯೋ ಟೆಲಿಕಾಂನ 555ರೂ. ಪ್ಲಾನ್‌

ಈ ಪ್ಲಾನ್‌ ನಿಮಗೆ ಒಟ್ಟು 55 GB ಡೇಟಾ ಪ್ರಯೋಜನದ ಸೌಲಭ್ಯವನ್ನು ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆ, ಎಸ್‌ಎಮ್‌ಎಸ್‌ ಸೌಲಭ್ಯ ಲಭ್ಯವಾಗಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ಪಡೆದಿದ್ದು, ಹಾಗೆಯೇ ಈ ಪ್ಲ್ಯಾನ್ ಜಿಯೋ ಮಹಾಕ್ಯಾಶ್‌ ಬ್ಯಾಕ್‌ ಕೊಡುಗೆ ಪಡೆದಿದ್ದು, ಆಕರ್ಷಕ ರಿಯಾಯಿತಿ ಲಭ್ಯವಾಗಬಹುದು. ಐಪಿಎಲ್‌ ಪ್ರಿಯರಿಗೆ ಇದು ಅತ್ಯುತ್ತಮ ಯೋಜನೆ ಎನಿಸಲಿದೆ.

Best Mobiles in India

Read more about:
English summary
Jio is offering 1.5GB high-speed data and unlimited voice calls with the Rs. 259 prepaid recharge plan.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X