Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನಿನಲ್ಲಿ ಯಾವುದೇ ಮಿತಿ ಇಲ್ಲದೇ ಡೇಟಾ ಬಳಕೆ ಮಾಡಬಹುದು!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ರಿಲಯನ್ಸ್‌ ಜಿಯೋ ಸಂಸ್ಥೆಯು ಈಗಾಗಲೇ ಆಕರ್ಷಕ ಯೋಜನೆಗಳ ಮೂಲಕ ಗಮನ ಸೆಳೆದಿದೆ. ಬಹುತೇಕ ಪ್ಲ್ಯಾನ್‌ಗಳು ಅನಿಯಮಿತ ವಾಯಿಸ್ ಕರೆ, ದೈನಂದಿನ ಡೇಟಾ ಪ್ರಯೋಜನ ಒಳಗೊಂಡಿವೆ. ಆ ಪೈಕಿ ಜಿಯೋ ಟೆಲಿಕಾಂನ ಈ ಒಂದು ಅಗ್ಗದ ಪ್ಲ್ಯಾನಿನಲ್ಲಿ ಯಾವುದೇ ಮಿತಿ ಇಲ್ಲದೆ ದೈನಂದಿನ ಡೇಟಾ ಬಳಕೆ ಮಾಡಬಹುದು. ಅದು ಯಾವ ಪ್ಲ್ಯಾನ್ ಅಂತೀರಾ?

ಹೌದು, ಜಿಯೋ ಟೆಲಿಕಾಂ 296ರೂ. ರೀಚಾರ್ಜ್‌ ಪ್ಲ್ಯಾನ್‌ ಆಕರ್ಷಕ ಪ್ರಯೋಜನಗಳನ್ನು ಒಳಗೊಂಡಿದ್ದು, ಜೊತೆಗೆ ಗ್ರಾಹಕರ ಸ್ನೇಹಿ ಬೆಲೆಯನ್ನು ಪಡೆದಿದೆ. ಈ ಯೋಜನೆಯ ಅಲ್ಪಾವಧಿಯ ವ್ಯಾಲಿಡಿಟಿ ಪ್ರಯೋಜನ ಪಡೆದಿದ್ದು, ಆದ್ರೆ ದೈನಂದಿನ ಡೇಟಾ ಬಳಕೆಗೆಯಾವುದೇ ಮಿತಿ ಹಾಕಿಲ್ಲ. ಹಾಗಾದರೆ ಜಿಯೋ ಟೆಲಿಕಾಂನ 296ರೂ. ಯೋಜನೆಯ ಪ್ರಯೋಜನಗಳ ಬಗ್ಗೆ ಹಾಗೂ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ ಈ ಪ್ಲ್ಯಾನಿನಲ್ಲಿ ಯಾವುದೇ ಮಿತಿ ಇಲ್ಲದೇ ಡೇಟಾ ಬಳಕೆ ಮಾಡಬಹುದು!

ಜಿಯೋ 296ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಜಿಯೋ ಟೆಲಿಕಾಂನ 296ರೂ ಪ್ರಿಪೇಯ್ಡ್ ಪ್ಲ್ಯಾನ್ ಪೂರ್ಣ ಒಂದು ತಿಂಗಳ (30 ದಿನಗಳು) ವ್ಯಾಲಿಡಿಟಿಯನ್ನು ಹೊಂದಿದೆ. ಇನ್ನು ಈ ಪ್ರಿಪೇಯ್ಡ್‌ ಪ್ಲಾನ್‌ ನಲ್ಲಿ ಒಟ್ಟು 25 GB ಡೇಟಾ ಪ್ರಯೋಜನ ಲಭ್ಯ ಇದ್ದು, ಯಾವುದೇ ದೈನಂದಿನ ಡೇಟಾ ಲಿಮಿಟ್ ನೀಡಿಲ್ಲ. ಬದಲಿಗೆ ಪೂರ್ಣ ತಿಂಗಳಿಗೆ ಒಟ್ಟು 25GB ಡೇಟಾ ಸೌಲಭ್ಯ ಒದಗಿಸಲಾಗಿದೆ.

ಇನ್ನು ಈ ಯೋಜನೆಯು ಅನಿಯಮಿತ ವಾಯಿಸ್‌ ಕರೆಗಳು, ದೈನಂದಿನ ಎಸ್‌ಎಮ್‌ಎಸ್‌ ಪ್ರಯೋಜನಗಳನ್ನು ಪಡೆದಿದೆ. ಇದಲ್ಲದೆ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್‌ ಅಪ್ಲಿಕೇಶನ್‌ಗಳ ಚಂದಾದಾರಿಕೆಯನ್ನು ಸಹ ಒಳಗೊಂಡಿದೆ. ಇದು ನಿಯಮಿತ ರೀಚಾರ್ಜ್ ಪ್ಲಾನ್‌ಗಿಂತ ಭಿನ್ನವಾಗಿ ಕಾಣುತ್ತದೆ.

ಜಿಯೋದ ಈ ಪ್ಲ್ಯಾನಿನಲ್ಲಿ ಯಾವುದೇ ಮಿತಿ ಇಲ್ಲದೇ ಡೇಟಾ ಬಳಕೆ ಮಾಡಬಹುದು!

ಜಿಯೋ 899ರೂ. ಪ್ಲ್ಯಾನ್ ಪ್ರಯೋಜನ : ರಿಲಾಯನ್ಸ್ ಜಿಯೋ 899 ರೂ. ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 225 GB ಡೇಟಾ ಸಿಗಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೂ ಅನಿಯಮಿತ ವಾಯಿಸ್‌ ಕರೆ ಲಭ್ಯ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಗ್ರಾಹಕರಿಗೆ ಸಿಗುತ್ತವೆ.

ಜಿಯೋ 999ರೂ. ಪ್ಲ್ಯಾನ್ ಪ್ರಯೋಜನ : ರಿಲಾಯನ್ಸ್ ಜಿಯೋ 999 ರೂ. ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 292 GB ಡೇಟಾ ಸಿಗಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೂ ಅನಿಯಮಿತ ವಾಯಿಸ್‌ ಕರೆ ಲಭ್ಯ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ.

ಜಿಯೋದ ಈ ಪ್ಲ್ಯಾನಿನಲ್ಲಿ ಯಾವುದೇ ಮಿತಿ ಇಲ್ಲದೇ ಡೇಟಾ ಬಳಕೆ ಮಾಡಬಹುದು!

ಜಿಯೋ 2023ರೂ. ಯೋಜನೆ ಪ್ರಯೋಜನ : ರಿಲಾಯನ್ಸ್ ಜಿಯೋ 2023 ರೂ. ಪ್ಲ್ಯಾನ್ ಒಟ್ಟು 252 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 630 GB ಡೇಟಾ ಸಿಗಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೂ ಅನಿಯಮಿತ ವಾಯಿಸ್‌ ಕರೆ ಲಭ್ಯ.

Best Mobiles in India

English summary
Jio Rs 296 Prepaid Plan offers No Daily Limit for Data use: more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+