India

ಜಿಯೋದ ಈ ಪ್ಲ್ಯಾನಿನಲ್ಲಿ ಸಿಗುತ್ತೆ ಜಬರ್ದಸ್ತ್ ಡೇಟಾ ಮತ್ತು ವ್ಯಾಲಿಡಿಟಿ!

|

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಜಿಯೋ ಇದೀಗ ಮತ್ತೊಂದು ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ ಬಿಡುಗಡೆ ಮಾಡಿದೆ. ಅದುವೇ ಜಿಯೋ 2999ರೂ. ಪ್ರೀಪೇಯ್ಡ್ ಪ್ಲ್ಯಾನ್. ಈ ಯೋಜನೆಯು ದೀರ್ಘಾವಧಿಯ ವ್ಯಾಲಿಡಿಟಿ ಮತ್ತು ಡೇಟಾ ಸೌಲಭ್ಯ ಪಡೆದಿದೆ. ಈ ಪ್ಲ್ಯಾನ್ ರೀಚಾರ್ಜ್ ಮಾಡಿಸಬಹುದೇ?

ಜಿಯೋದ ಈ ಪ್ಲ್ಯಾನಿನಲ್ಲಿ ಸಿಗುತ್ತೆ ಜಬರ್ದಸ್ತ್ ಡೇಟಾ ಮತ್ತು ವ್ಯಾಲಿಡಿಟಿ!

ಹೌದು, ಜಿಯೋ ಟೆಲಿಕಾಂನ 2999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋದ 2999ರೂ. ವಾರ್ಷಿಕ ಪ್ರೀಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಮುಂದೆ ಓದಿರಿ.

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ ಈ ಪ್ಲ್ಯಾನಿನಲ್ಲಿ ಸಿಗುತ್ತೆ ಜಬರ್ದಸ್ತ್ ಡೇಟಾ ಮತ್ತು ವ್ಯಾಲಿಡಿಟಿ!

ಜಿಯೋ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್‌ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

Most Read Articles
Best Mobiles in India

Read more about:
English summary
Jio Rs 2999 Plan Offers Daily 2.5GB Data with 365 Days Validity.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X