Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಡೇಟಾ, ವ್ಯಾಲಿಡಿಟಿ ಟೆನ್ಷನ್ ಇರಲ್ಲ!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಜಿಯೋ ಇದೀಗ ಮತ್ತೊಂದು ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ ಬಿಡುಗಡೆ ಮಾಡಿದೆ. ಅದುವೇ ಜಿಯೋ 2999ರೂ. ಪ್ರೀಪೇಯ್ಡ್ ಪ್ಲ್ಯಾನ್. ಈ ಯೋಜನೆಯು ದೀರ್ಘಾವಧಿಯ ವ್ಯಾಲಿಡಿಟಿ ಮತ್ತು ಡೇಟಾ ಸೌಲಭ್ಯ ಪಡೆದಿದೆ. ಈ ಪ್ಲ್ಯಾನ್ ರೀಚಾರ್ಜ್ ಮಾಡಿಸಬಹುದೇ?

ಜಿಯೋದ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಡೇಟಾ, ವ್ಯಾಲಿಡಿಟಿ ಟೆನ್ಷನ್ ಇರಲ್ಲ!

ಹೌದು, ಜಿಯೋ ಟೆಲಿಕಾಂನ 2999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋದ 2999ರೂ. ವಾರ್ಷಿಕ ಪ್ರೀಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಇತರೆ ಜನಪ್ರಿಯ ಪ್ಲ್ಯಾನ್‌ಗಳ ಮಾಹಿತಿ ಇಲ್ಲಿದೆ.

ಜಿಯೋದ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಡೇಟಾ, ವ್ಯಾಲಿಡಿಟಿ ಟೆನ್ಷನ್ ಇರಲ್ಲ!

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಆದ್ರೆ, ಈ ಪ್ಲ್ಯಾನ್‌ನಲ್ಲಿ ಈಗ ಹೆಚ್ಚುವರಿಯಾಗಿ 23 ದಿನಗಳನ್ನು ಲಭ್ಯವಿದ್ದು, ಒಟ್ಟು 388 ದಿನಗಳ ವ್ಯಾಲಿಡಿಟಿ ದೊರೆಯುತ್ತದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 912.5 GB ಡೇಟಾ ದೊರೆಯುತ್ತದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್ಸ್‌ ಲಭ್ಯ.

ಜಿಯೋದ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಡೇಟಾ, ವ್ಯಾಲಿಡಿಟಿ ಟೆನ್ಷನ್ ಇರಲ್ಲ!

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಡೇಟಾ, ವ್ಯಾಲಿಡಿಟಿ ಟೆನ್ಷನ್ ಇರಲ್ಲ!

ಜಿಯೋ 899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ ಹೊಸದಾಗಿ ಪರಿಚಯಿಸಿರುವ 899ರೂ. ಪ್ರೀಪೇಯ್ಡ್‌ ಪ್ಲಾನ್ 90 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಈ ಯೋಜನೆಯು ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೆ ಪೂರ್ಣ ವ್ಯಾಲಿಡಿಟಿ ಅವಧಿಗೆ 225GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ, ಪ್ರತಿದಿನ ಉಚಿತ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಜಿಯೋ ಆಪ್ಸ್‌ಗಳು ಸಹ ಲಭ್ಯವಾಗಲಿವೆ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಜಿಯೋದ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಡೇಟಾ, ವ್ಯಾಲಿಡಿಟಿ ಟೆನ್ಷನ್ ಇರಲ್ಲ!

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

Best Mobiles in India

English summary
jio rs 2999 prepaid plan offers daily data with 365 days validity. know more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+