Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನಿಗೆ ಖಂಡಿತಾ ನೀವು ಫಿದಾ ಆಗ್ತೀರಾ!..ಆದ್ರೆ ಬೆಲೆ ದುಬಾರಿ!

ದೇಶದ ಟೆಲಿಕಾಂ ವಲಯದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುಂದೆ ಸಾಗಿರುವ ಜಿಯೋ ಇದೀಗ ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಆ ಪೈಕಿ ಜಿಯೋ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ದುಬಾರಿ ಬೆಲೆಯಲ್ಲಿ ಕಾಣಿಸಿದರೂ, ಆಕರ್ಷಕ ಪ್ರಯೋಜನಗಳನ್ನು ಒಳಗೊಂಡಿದೆ. ಈ ಪ್ರಿಪೇಯ್ಡ್‌ ಯೋಜನೆ ಅನ್ನು ರೀಚಾರ್ಜ್‌ ಮಾಡಿಸಿದರೇ ಒಂದು ವರ್ಷ ಡೇಟಾ ಕಿರಿ ಕಿರಿ ಇರಲ್ಲ ಜೊತೆಗೆ ಭರ್ಜರಿ ಓಟಿಟಿ ಮನರಂಜನೆ ಸಿಗಲಿದೆ.

ಯೋಜನೆಯು

ಹೌದು, ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ ಆಗಲಿದೆ ಜೊತೆಗೆ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋ ಟೆಲಿಕಾಂನ 4,199ರೂ. ವಾರ್ಷಿಕ ಪ್ರೀಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು

ಜಿಯೋ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು

ರಿಲಾಯನ್ಸ್‌ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

ಜಿಯೋ 3119ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು

ಜಿಯೋ 3119ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು

ರಿಲಾಯನ್ಸ್‌ ಜಿಯೋ ಟೆಲಿಕಾಂನ 3119ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ (ಹೆಚ್ಚುವರಿ 10GB ಸಿಗಲಿದೆ) ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 740 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

ಜಿಯೋ 2999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು

ಜಿಯೋ 2999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು

ರಿಲಾಯನ್ಸ್‌ ಜಿಯೋ ಟೆಲಿಕಾಂನ 2999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2.5GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 912.5 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

English summary
Jio Rs. 4199 Plans Offers Daily Data with Disney+ Hotstar Subscription.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+