Home
ಸುದ್ದಿಜಾಲ

Jio: ಜಿಯೋದ ಈ ಕಡಿಮೆ ಬೆಲೆಯ ಪ್ಲ್ಯಾನಿನಲ್ಲಿ, 84 ದಿನಗಳ ವ್ಯಾಲಿಡಿಟಿ ಗ್ಯಾರಂಟಿ!

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ರಿಲಯನ್ಸ್‌ ಜಿಯೋ ಸಂಸ್ಥೆಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಸದ್ದು ಮಾಡಿದೆ. ಅವುಗಳ ಪೈಕಿ ಜಿಯೋದ ಬಹುತೇಕ ಯೋಜನೆಗಳು ಅನಿಯಮಿತ ವಾಯಿಸ್ ಕರೆ, ದೈನಂದಿನ ಡೇಟಾ ಸೌಲಭ್ಯ ಹೊಂದಿವೆ. ಅಲ್ಲದೇ ಜಿಯೋ ತನ್ನ ಚಂದಾದಾರರಿಗಾಗಿ ಬಜೆಟ್‌ ದರದಲ್ಲಿ ಕೆಲವು ಪ್ರೀಪೇಯ್ಡ್‌ ಯೋಜನೆಗಳ ಆಯ್ಕೆ ನೀಡಿದೆ. ಆ ಪೈಕಿ ಜಿಯೋ ಟೆಲಿಕಾಂನ 479ರೂ. ರೀಚಾರ್ಜ್‌ ಪ್ಲ್ಯಾನ್‌ ಹೆಚ್ಚು ಕಡಿಮೆ ಮೂರು ತಿಂಗಳ ವ್ಯಾಲಿಡಿಟಿ ಒದಗಿಸಲಿದೆ.

ಹೌದು, ಜಿಯೋ ಸಂಸ್ಥೆಯ 479ರೂ. ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದ್ದು, ಗ್ರಾಹಕರ ಗಮನ ಸೆಳೆದಿದೆ. ಈ ಪ್ರೀಪೇಯ್ಡ್‌ ಯೋಜನೆಯು ಡೇಟಾ ಪ್ರಯೋಜನ, ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಸಹ ಪಡೆದಿದೆ. ಇದರ ಜೊತೆಗೆ ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಪಡೆದಿದ್ದು, ಪ್ಲಸ್‌ ಪಾಯಿಂಟ್‌ ಎನಿಸಿದೆ. ಹಾಗಾದರೆ ಜಿಯೋ ಟೆಲಿಕಾಂನ 479ರೂ. ರೀಚಾರ್ಜ್‌ ಪ್ಲ್ಯಾನಿನ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

Jio: ಜಿಯೋದ ಈ ಕಡಿಮೆ ಬೆಲೆಯ ಪ್ಲ್ಯಾನಿನಲ್ಲಿ, 84 ದಿನಗಳ ವ್ಯಾಲಿಡಿಟಿ ಗ್ಯಾರಂಟಿ!

ಜಿಯೋ 479ರೂ. ರೀಚಾರ್ಜ್‌ ಯೋಜನೆ

ಜಿಯೋ ಸಂಸ್ಥೆಯ ಈ 479ರೂ. ರೀಚಾರ್ಜ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಸಿಗಲಿದೆ. ಹಾಗೆಯೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿಗೆ ಒಟ್ಟು 1000 ಎಸ್‌ಎಮ್‌ಎಸ್‌ ಪ್ರಯೋಜನದ ಸೌಲಭ್ಯ ಕೂಡಾ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ.

ಇನ್ನು ಈ ಪ್ರೀಪೇಯ್ಡ್‌ ಯೋಜನೆಯಲ್ಲಿ ಒಟ್ಟು 6GB ಡೇಟಾ ಸೌಲಭ್ಯ ಇದ್ದು, ಯಾವುದೇ ದೈನಂದಿನ ಡೇಟಾ ಮಿತಿ ಇರುವುದಿಲ್ಲ. ಅಲ್ಲದೇ ಒಟ್ಟು 1000 ಎಸ್‌ಎಮ್‌ಎಸ್‌ ಲಭ್ಯ ಇದ್ದು, ಯಾವುದೇ ದೈನಂದಿನ ಮಿತಿ ನೀಡಿಲ್ಲ. ಇದರ ಜೊತೆಗೆ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಜಿಯೋ ಕ್ಲೌಡ್‌ ಸೇವೆಗಳು ಸಹ ಸಿಗಲಿವೆ.

ಜಿಯೋ 1889ರೂ. ರೀಚಾರ್ಜ್‌ ಯೋಜನೆ

ಜಿಯೋ (Jio) ಸಂಸ್ಥೆಯ ಈ 1889ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 336 ದಿನಗಳ ವ್ಯಾಲಿಡಿಟಿ ಅವಧಿ ಲಭ್ಯ ಆಗಲಿದೆ. ಹಾಗೆಯೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 24GB ಡೇಟಾ ಪ್ರಯೋಜನ ಲಭ್ಯ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿಗೆ ಒಟ್ಟು 3600 ಎಸ್‌ಎಮ್‌ಎಸ್‌ ಪ್ರಯೋಜನದ ಸೌಲಭ್ಯ ಗ್ರಾಹಕರಿಗೆ ದೊರೆಯುತ್ತವೆ. ಇದಲ್ಲದೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ.

ಜಿಯೋ 189ರೂ. ರೀಚಾರ್ಜ್‌ ಯೋಜನೆ

ಜಿಯೋ ಸಂಸ್ಥೆಯ ಈ 189ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಲಭ್ಯ ಆಗಲಿದೆ. ಹಾಗೆಯೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 2GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿಗೆ ಒಟ್ಟು 3600 ಎಸ್‌ಎಮ್‌ಎಸ್‌ ಪ್ರಯೋಜನದ ಸೌಲಭ್ಯ ಗ್ರಾಹಕರಿಗೆ ಸಿಗಲಿದೆ. ಇದರೊಂದಿಗೆ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ.

ಅಂದಹಾಗೆ 28 ದಿನಗಳ ವ್ಯಾಲಿಡಿಟಿ ಅವಧಿಗೆ 2GB ಡೇಟಾ ಇದ್ದು, ಯಾವುದೇ ದೈನಂದಿನ ಡೇಟಾ ಮಿತಿ ಇರುವುದಿಲ್ಲ. ಅಲ್ಲದೇ ಒಟ್ಟು 300 ಎಸ್‌ಎಮ್‌ಎಸ್‌ ಸೌಲಭ್ಯ ನೀಡಲಾಗಿದ್ದು, ದೈನಂದಿನ ಮಿತಿ ಇರಲ್ಲ. ಇದರ ಜೊತೆಗೆ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಜಿಯೋ ಕ್ಲೌಡ್‌ ಸೇವೆಗಳು ದೊರೆಯುತ್ತವೆ.

Best Mobiles in India

English summary
Jio Rs 479 Prepaid Plan Offers 84 Days Validity with Data. Check out Other Benefits and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+