ಜಿಯೋ 555ರೂ. ಪ್ಲ್ಯಾನ್ ರೀಚಾರ್ಜ್‌ಗೆ ಯೋಗ್ಯವೇ?..ಪ್ರಯೋಜನಗಳೇನು?
ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಜಿಯೋ ಇದೀಗ ಮತ್ತೊಂದು ಹೊಸ ಪ್ರೀಪೇಯ್ಡ್ ಪ್ಲ್ಯಾನ್ ಬಿಡುಗಡೆ ಮಾಡಿದೆ. ಅದುವೇ ಜಿಯೋ 555ರೂ. ಪ್ರೀಪೇಯ್ಡ್ ಪ್ಲ್ಯಾನ್. ಈ ಯೋಜನೆಯು ದೀರ್ಘಾವಧಿಯ ವ್ಯಾಲಿಡಿಟಿ ಮತ್ತು ಡೇಟಾ ಸೌಲಭ್ಯ ಪಡೆದಿದೆ. ಈ ಪ್ಲ್ಯಾನ್ ರೀಚಾರ್ಜ್ ಮಾಡಿಸಲು ಯೋಗ್ಯವೇ?

ಹೌದು, ಜಿಯೋ ಟೆಲಿಕಾಂನ 555ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋದ ಈ ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?.ಈ ಯೋಜನೆಯ ಪ್ರಯೋಜನಗಳೇನು?..ಮುಂದೆ ಓದಿರಿ.

ಜಿಯೋ 555ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 555ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಲ್-ಇನ್-ಒನ್ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಒಟ್ಟು ಈ ಯೋಜನೆಯಲ್ಲಿ ಗ್ರಾಹಕರಿಗೆ 126GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜಿಯೋ ಟಿವಿ, ಜಿಯೋ ಸೆಕ್ಯುರಿಟಿ, ಜಿಯೋ ನ್ಯೂಸ್, ಜಿಯೋ ಸಿನಿಮಾ ಆಪ್‌ಗಳ ಸೌಲಭ್ಯ ಸಿಗಲಿದೆ.

ಜಿಯೋ 599ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 444ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋ 399ರೂ. ಪ್ರೀಪೇಯ್ಡ್ ಪ್ಲಾನ್
ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.


Click it and Unblock the Notifications








