ಜಿಯೋದ ಈ ಎರಡು ಜಬರ್ದಸ್ತ್ ಪ್ಲ್ಯಾನ್‌ಗಳಲ್ಲಿ ನಿಮ್ಮ ಆಯ್ಕೆ ಯಾವುದು?
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ರಿಲಾಯನ್ಸ್ ಜಿಯೋ ಮುಂಚೂಣಿಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅಧಿಕ ಡೇಟಾ ಪ್ರಯೋಜನದ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿರುವ ಜಿಯೋ ಟೆಲಿಕಾಂ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್‌ಗಳು ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಸಹ ಪಡೆದಿವೆ. ಅದಾಗ್ಯೂ, ಜಿಯೋದ ಕೆಲವು ಪ್ಲ್ಯಾನ್‌ಗಳು ಬೊಂಬಾಟ್ ಎನಿಸಿವೆ.

ಹೌದು, ಜಿಯೋ ಸಂಸ್ಥೆಯು ಅಗ್ಗದ ಪ್ರೈಸ್‌ಟ್ಯಾಗ್‌ನಿಂದ ದುಬಾರಿ ಬೆಲೆಯಲ್ಲಿ ಹಲವು ಭಿನ್ನ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿದೆ. ಅವುಗಳಲ್ಲಿ ಕೆಲವು ಅಲ್ಪಾವಧಿಯ ಯೋಜನೆಗಳಾಗಿದ್ದು, ಇನ್ನು ಕೆಲವು ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನದ ಪ್ಲ್ಯಾನ್‌ಗಳಾಗಿವೆ. ಆ ಪೈಕಿ ಜಿಯೋ 599ರೂ. ಮತ್ತು ಜಿಯೋ 666ರೂ. ಪ್ರೀಪೇಯ್ಡ್ ಯೋಜನೆಗಳು ಹೆಚ್ಚು ಗಮನ ಸೆಳೆದಿವೆ. ಹಾಗಾದರೇ ಜಿಯೋದ ಈ ಎರಡು ಪ್ರೀಪೇಯ್ಡ್ ಪ್ಲ್ಯಾನ್‌ಗಳ ಪ್ರಯೋಜನಗಳ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗಿದೆ. ಹಾಗೆಯೇ ಡೈಲಿ 2GB ಡೇಟಾ ಸೌಲಭ್ಯದ ಇತರೆ ಪ್ಲ್ಯಾನ್‌ಗಳ ಬಗ್ಗೆ ತಿಳಿಸಲಾಗಿದೆ. ಮುಂದೆ ಓದಿರಿ.

ಜಿಯೋ 599ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 168 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 666ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಒಳಗೊಂಡಿದೆ. ಇತರೆ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 249ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಜಿಯೋ 444ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋ 888ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 888ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಒಳಗೊಂಡಿದೆ.

ಜಿಯೋ 999ರೂ. ಪ್ರೀಪೇಯ್ಡ್ ಪ್ಲಾನ್
ರಿಲಾಯನ್ಸ್ ಜಿಯೋ 999ರೂ. ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಜೊತೆಗೆ ಉಚಿತ ಎಸ್‌ಎಮ್‌ಎಸ್ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.


Click it and Unblock the Notifications








