Home
ಸುದ್ದಿಜಾಲ

ಜಿಯೋ ಟೆಲಿಕಾಂನ 599ರೂ. ಪ್ಲ್ಯಾನ್‌ ರೀಚಾರ್ಜ್‌ಗೆ ಉತ್ತಮವೇ?..ಒಟ್ಟು ಡೇಟಾ ಎಷ್ಟು?

ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಅಧಿಕ ಚಂದಾದಾರರನ್ನು ಸೆಳೆಯಲು ಅತ್ಯುತ್ತಮ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಕಂಪನಿಯು ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಯೋಜನೆಗಳನ್ನು ಗ್ರಾಹಕರ ಮುಂದಿಟ್ಟಿದೆ. ಹಾಗೆಯೇ ಸಂಸ್ಥೆಯ ಬಹುತೇಕ ಪ್ರೀಪೇಯ್ಡ್‌ ಯೋಜನೆಗಳು ಆಕರ್ಷಕ ವ್ಯಾಲಿಡಿಟಿ ಪ್ರಯೋಜನದ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯವನ್ನು ಪಡೆದಿವೆ. ಆ ಪೈಕಿ ಬಜೆಟ್‌ ದರದಲ್ಲಿ ಜಿಯೋ 599ರೂ. ಯೋಜನೆ ಹೆಚ್ಚು ಆಕರ್ಷಕ ಅನಿಸಿದೆ.

ಪ್ರೀಪೇಯ್ಡ್‌ ಯೋಜನೆ

ಹೌದು, ಜಿಯೋ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋದ ಈ ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?.ಈ ಯೋಜನೆಯ ಒಟ್ಟಾರೇ ಪ್ರಯೋಜನಗಳೇನು?..ತಿಳಿಯಲು ಮುಂದೆ ಓದಿರಿ.

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಒಟ್ಟು ಈ ಯೋಜನೆಯಲ್ಲಿ ಗ್ರಾಹಕರಿಗೆ 168GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜಿಯೋ ಟಿವಿ, ಜಿಯೋ ಸೆಕ್ಯುರಿಟಿ, ಜಿಯೋ ನ್ಯೂಸ್, ಜಿಯೋ ಸಿನಿಮಾ ಆಪ್‌ಗಳ ಸೌಲಭ್ಯ ಸಿಗಲಿದೆ.

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಆಲ್‌-ಇನ್‌-ಒನ್‌ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಒಟ್ಟು ಈ ಯೋಜನೆಯಲ್ಲಿ ಗ್ರಾಹಕರಿಗೆ 126GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜಿಯೋ ಟಿವಿ, ಜಿಯೋ ಸೆಕ್ಯುರಿಟಿ, ಜಿಯೋ ನ್ಯೂಸ್, ಜಿಯೋ ಸಿನಿಮಾ ಆಪ್‌ಗಳ ಸೌಲಭ್ಯ ಸಿಗಲಿದೆ.

ಜಿಯೋ 444ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 444ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋದ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ.

ಜಿಯೋ 399ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 399ರೂ. ಪ್ರೀಪೇಯ್ಡ್‌ ಪ್ಲಾನ್

ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್‌ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

Best Mobiles in India

English summary
Jio Rs 599 Prepaid Plan Offers Daily 2GB Data With 84 Days Validity Should You Recharge.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+