ಜಿಯೋ 999ರೂ ಮತ್ತು ವಿ 901ರೂ. ಪ್ಲ್ಯಾನ್: ಇವೆರಡರಲ್ಲಿ ಯಾವುದು ಬೆಸ್ಟ್ ಗೊತ್ತಾ?
ಪ್ರಸ್ತುತ ರಿಯಲಾನ್ಸ್ ಜಿಯೋ ಮತ್ತು ವಿ ಟೆಲಿಕಾಂ (ವೊಡಾಫೋನ್-ಐಡಿಯಾ) ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆವೆ. ಕಂಪನಿಗಳು ಪರಿಚಯಿಸಿರುವ ಯೋಜನೆಗಳಲ್ಲಿ ಪ್ರೀಪೇಯ್ಡ್ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್ ಯೋಜನೆಗಳು ಸೇರಿವೆ. ಆದರೆ ಬಜೆಟ್ ಬೆಲೆಯಲ್ಲಿ ಲಭ್ಯ ಇರುವ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ಹೆಚ್ಚಿನ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಜಿಯೋ 999ರೂ ಮತ್ತು ವಿ 901ರೂ. ಪ್ಲ್ಯಾನ್ ಬಹುತೇಕ ಬಳಕೆದಾರರು ಗಮನ ಸೆಳೆದಿವೆ.

ಹೌದು, ಜಿಯೋ ಮತ್ತು ವಿ ಟೆಲಿಕಾಂ ಸಂಸ್ಥೆಗಳು ಭಿನ್ನ ಪ್ರಯೋಜನಗಳ ಆಯ್ಕೆ ಹೊಂದಿವೆ. ಅವುಗಳಲ್ಲಿ ಜಿಯೋ 999ರೂ ಮತ್ತು ವಿ 901ರೂ. ಪ್ಲ್ಯಾನ್ ಗಳು ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಆಕರ್ಷಕ ಎನಿಸಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ 999ರೂ ಮತ್ತು ವಿ 901ರೂ. ಪ್ಲ್ಯಾನ್ ಯಾವುದು ಬೆಸ್ಟ್? ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ಜಿಯೋ 999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಜೊತೆಗೆ ಉಚಿತ ಎಸ್‌ಎಮ್‌ಎಸ್ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.
ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 699ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ 699ರೂ. ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
ಜಿಯೋ 599ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.
ವಿ ಟೆಲಿಕಾಂ ಟೆಲಿಕಾಂ 601ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.


Click it and Unblock the Notifications








