ಐಪಿಎಲ್‌ 2022 ಕ್ರಿಕೆಟ್‌ ವಿಕ್ಷಿಸುವುದಕ್ಕೆ ಜಿಯೋ ಟೆಲಿಕಾಂನ ಈ ಪ್ಲಾನ್‌ಗಳು ಬೆಸ್ಟ್‌!

|

ಪ್ರಸ್ತುತ ಇಡೀ ದೇಶದಲ್ಲಿ ಟಾಟಾ ಐಪಿಎಲ್‌ 2022ರ ಕಾವು ಜೋರಾಗಿದೆ. ಸದ್ಯ ಐಪಿಎಲ್‌ ಕ್ರಿಕೆಟ್‌ ಪಂದ್ಯಗಳ ಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಮಾತ್ರ ನೋಡಬಹುದಾಗಿದೆ. ಇದಲ್ಲದೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ನಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ನಲ್ಲಿ ಕ್ರಿಕೆಟ್‌ ಪಂದ್ಯವನ್ನು ವೀಕ್ಷಿಸಬೇಕಾದರೆ ನೀವು ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯನ್ನು ಹೊಂದಿರಬೇಕಿದೆ. ಇದಕ್ಕಾಗಿ ಜಿಯೋ ಟೆಲಿಕಾಂ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯನ್ನು ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿದೆ.

ಜಿಯೋ

ಹೌದು, ಐಪಿಎಲ್‌ ಕ್ರಿಕೆಟ್‌ ಪ್ರೇಮಿಗಳಿಗಾಗಿ ಜಿಯೋ ಟೆಲಿಕಾಂ ಹಲವು ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿದೆ. ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆ ನೀಡುವ ಅನೇಕ ಪ್ಲಾನ್‌ಗಳನ್ನು ನೀಡುತ್ತಿದೆ. ಈ ಪ್ಲಾನ್‌ಗಳಲ್ಲಿ ಅನಿಯಮಿತ ಕರೆ ಪ್ರಯೋಜನ, ದೈನಂದಿನ ಡೇಟಾ ಹಾಗೂ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ. ಹಾಗಾದ್ರೆ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ನೀಡುವ ಜಿಯೋ ಟೆಲಿಕಾಂನ ಪ್ರಿಪೇಯ್ಡ್‌ ಪ್ಲಾನ್‌ಗಳ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋ 499ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 499ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂನ 499ರೂ. ಪ್ರಿಪೇಯ್ಡ್ ಪ್ಲಾನ್‌ ನಿಮಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆಯನ್ನುಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಒಂದು ವರ್ಷದ ಪ್ರವೇಶವನ್ನು ನೀಡುತ್ತದೆ. ಇದಲ್ಲದೆ ಈ ಪ್ಲಾನ್‌ನಲ್ಲಿ ನೀವು ದೈನದಿನ 2GB ಡೇಟಾ ಮತ್ತು ಡೈಲಿ 100 SMS ಪ್ರಯೋಜನ ಪಡೆಯಬಹುದಾಗಿದೆ. ಇನ್ನು ಈ ಪ್ಲಾನ್‌ 28 ದಿನಗಳ ಮಾನ್ಯತೆಯನ್ನು ಹೊಂದಿದ್ದು, ಈ ಅವಧಿಯಲ್ಲಿ ಅನಿಯಮಿತ ಕರೆ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಜಿಯೋ ಸಿನಿಮಾ ಮತ್ತು ಜಿಯೋಟಿವಿ ಅಂತಹ ಜಿಯೋ ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ಪಡೆಯಬಹುದಾಗಿದೆ.

ಜಿಯೋ 799ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 799ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂ 799ರೂ ಪ್ಲಾನ್‌ ನಿಮಗೆ ವಾರ್ಷಿಕ ಚಂದಾದಾರಿಕೆ ನೀಡುವ ಡಿಸ್ನಿ+ ಹಾಟ್‌ಸ್ಟಾರ್‌ ಪ್ರಯೋಜನ ನೀಡಲಿದೆ. ಇದರಲ್ಲಿ ನೀವು ಪ್ರತಿನಿತ್ಯ 2GB ಡೇಟಾ ಮತ್ತು ಅನಿಯಮಿತ ಧ್ವನಿ ಕರೆ ಪ್ರಯೋಜನದ ಜೊತೆಗೆ, ದೈನಂದಿನ 100 SMS ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಇನ್ನು ಈ ಪ್ಲಾನ್‌ 56 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಯೋಜನೆಯಲ್ಲಿ ನೀವು ಜಿಯೋ ಸಿನಿಮಾ, ಜಿಯೋ ಟಿವಿ ಮತ್ತು ಹೆಚ್ಚಿನವುಗಳಂತಹ ಕೆಲವು ಇತರ ಜಿಯೋ ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ನೀಡಲಿದೆ.

ಜಿಯೋ 1499ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 1499ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂನ ಪ್ಲಾನ್‌ ನಿಮಗೆ ಒಂದು ವರ್ಷದ ತನಕ ಡಿಸ್ನಿ + ಹಾಟ್‌ಸ್ಟಾರ್ ಪ್ರೀಮಿಯಂ ಚಂದಾದಾರಿಕೆಯನ್ನು ನೀಡುತ್ತದೆ. ಅಲ್ಲದೆ ಈ ಪ್ಲಾನ್‌ನಲ್ಲಿ ನೀವು ಜಿಯೋದ 719ರೂ. ಯೋಜನೆಯ ಪ್ರಯೋಜನಗಳನ್ನು ಒಂದು ತಿಂಗಳಿಗೆ ಪೂರಕವಾಗಿ ಪಡೆಯಬಹುದು. ಇದರಲ್ಲಿ ದೈನಂದಿನ 2GB ಡೇಟಾ ಪ್ರಯೋಜನವನ್ನು ನೀಡಲಿದೆ. ಜೊತೆಗೆ 84 ದಿನಗಳ ಮಾನ್ಯತೆಯನ್ನು ಹೊಂದಿದ್ದು, ಈ ಅವಧಿಯಲ್ಲಿ ಅನಿಯಮಿತ ಕರೆ ಹಾಗೂ ದಿನಕ್ಕೆ 100 SMS ಸೌಲಭ್ಯ ದೊರೆಯಲಿದೆ.

ಜಿಯೋ 4199ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 4199ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂನ ಈ ಪ್ಲಾನ್‌ನಲ್ಲಿ ಒಂದು ವರ್ಷದ ಡಿಸ್ನಿ + ಹಾಟ್‌ಸ್ಟಾರ್ ಪ್ರೀಮಿಯಂ ಸೌಲಭ್ಯ ನೀಡಲಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲಾನ್‌ ನಿಮಗೆ ಅನಿಯಮಿತ ಕರೆ ಪ್ರಯೋಜನ ಮತ್ತು ದೈನಂದಿನ 100 SMS ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಪ್ರತಿನಿತ್ಯ 3GB ಡೇಟಾವನ್ನು ನೀಡಲಿದೆ. ಅದರಂತೆ ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಇದಲ್ಲದೆ ಹೆಚ್ಚುವರಿಯಾಗಿ ಜಿಯೋ ಅಪ್ಲಿಕೇಶನ್‌ಗಳಿಗೆ ಚಂದಾದಾರಿಕೆಯನ್ನು ಸಹ ಒಳಗೊಂಡಿದೆ.

Most Read Articles
Best Mobiles in India

English summary
Jio's best pre-paid plans with Disney Plus Hotstart Subscription

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X