ಸದ್ದಿಲ್ಲದೆ ಜಿಯೋದಿಂದ ಹೊಸ ಪ್ಲ್ಯಾನ್ ಲಾಂಚ್; ವರ್ಷ ಪೂರ್ತಿ ಡೇಟಾ ಮತ್ತು ಕ್ಯಾಶ್‌ಬ್ಯಾಕ್!
ಭಾರತೀಯ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಜಿಯೋ ಈಗಾಗಲೇ ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಸಿದೆ. ಆದ್ರೆ ಜಿಯೋ ಟೆಲಿಕಾಂ ಇದೀಗ ಸದ್ದಿಲ್ಲದೇ ಮತ್ತೆ ನೂತನ ಪ್ರೀಪೇಯ್ಡ್ ಪ್ಲ್ಯಾನ್‌ವೊಂದನ್ನು ಪರಿಚಯ ಮಾಡಿದೆ. ಜಿಯೋ ಟೆಲಿಕಾಂನ ಈ ಹೊಸ ಯೋಜನೆಯಲ್ಲಿ ಗ್ರಾಹಕರಿಗೆ ವರ್ಷ ಪೂರ್ತಿ ದೈನಂದಿನ ಭರ್ಜರಿ ಅಧಿಕ ಡೇಟಾ ಲಭ್ಯವಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ.

ಹೌದು, ಜಿಯೋ ಟೆಲಿಕಾಂ ತನ್ನ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಪಟ್ಟಿಗೆ ನೂತನವಾಗಿ 2999 ರೂ. ಬೆಲೆಯ ಯೋಜನೆಯನ್ನು ಸೇರ್ಪಡೆ ಮಾಡಿಕೊಂಡಿದೆ. ಈ ಯೋಜನೆ ದುಬಾರಿ ದರ ಎನಿಸಿದರೂ, ಈ ಯೋಜನೆಯು ವಾರ್ಷಿಕ ಅವಧಿಯ ಪ್ರೀಪೇಯ್ಡ್ ಯೋಜನೆ ಆಗಿದೆ. ವಾಯಿಸ್ ಕರೆ, ಎಸ್‌ಎಮ್‌ಎಸ್ ಪ್ರಯೋಜನಗಳ ಜೊತೆಗೆ ಒಟ್ಟಾರೇ 912.5 GB ಡೇಟಾ ಸೌಲಭ್ಯವನ್ನು ಈ ಯೋಜನೆಯು ಒಳಗೊಂಡಿದೆ. ಹಾಗೆಯೇ ಈ ಯೋಜನೆಗೆ ಶೇ.20% ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ. ಹಾಗಾದರೇ ಜಿಯೋದ ಹೊಸ 2999 ರೂ.ಗಳ ಪ್ಲ್ಯಾನಿನ ಪ್ರಯೋಜನಗಳ ಬಗ್ಗೆ ಹಾಗೂ ಇತರೆ ವಾರ್ಷಿಕ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಹೊಸ 2999ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನವನ್ನು ಪಡೆದಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 912.5 GB ಡೇಟಾ ಸೌಲಭ್ಯ ಗ್ರಾಹಕರಿಗೆ ಲಭ್ಯವಾಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಜಿಯೋ ಆಪ್ಸ್ ಹಾಗೂ ಇತರೆ ಸೇವೆಗಳು ಸಿಗಲಿವೆ.

ಜಿಯೋ 601ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 6 GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90GB ಡೇಟಾ ಪ್ರಯೋಜನ ದೊರೆಯಲಿದೆ.

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112 GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 395ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಒಟ್ಟು 6 GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಪ್ರಿಪೇಯ್ಡ್ ್ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಆಪ್ಸ್ ಸಹ ಲಭ್ಯ.

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋ 119ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 119ರೂ. ಪ್ರಿಪೇಯ್ಡ್ ಪ್ಲ್ಯಾನ್ 14 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್‌ಎಮ್‌ಎಸ್‌ಗಳು ದೊರೆಯುತ್ತವೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 21GB ಡೇಟಾ ಪ್ರಯೋಜನ ಸಿಗಲಿದೆ.


Click it and Unblock the Notifications








