90 ದಿನಗಳ ವ್ಯಾಲಿಡಿಟಿಯ ಜಿಯೋದ ಈ ಪ್ಲ್ಯಾನಿನ ಬೆಲೆಯಲ್ಲಿ ಅಚ್ಚರಿಯ ಬದಲಾವಣೆ!
ಭಾರತದ ಮುಂಚೂಣಿಯ ಟೆಲಿಕಾಂ ಎನಿಸಿಕೊಂಡಿರುವ ರಿಲಯನ್ಸ್ ಜಿಯೋ ಆಗಷ್ಟ್‌ನಲ್ಲಿ ಗ್ರಾಹಕರಿಗೆ ಹೊಸದಾಗಿ 750 ರೂ. ಬೆಲೆಯ ಪ್ರಿಪೇಯ್ಡ್ ಯೋಜನೆಯನ್ನು ಪರಿಚಯಿಸಿತು. ಈ ಪ್ರೀಪೇಯ್ಡ್ ಪ್ಲ್ಯಾನಿನ ಪ್ರಮುಖ ವಿಶೇಷತೆ ಎಂದರೆ 90 ದಿನಗಳ ವ್ಯಾಲಿಡಿಟಿಯನ್ನು ಇದು ಒಳಗೊಂಡಿದ್ದು, ಜೊತೆಗೆ ಡೇಟಾ ಪ್ರಯೋಜನದಿಂದ ಭರ್ತಿ ಆಗಿದೆ. ಆದರೆ ಜಿಯೋ ಟೆಲಿಕಾಂ ಈ ಯೋಜನೆಯ ಬೆಲೆಯಲ್ಲಿ ಈಗ ಸ್ವಲ್ಪ ಬದಲಾವಣೆ ಮಾಡಿದೆ.

ಹೌದು, ಜಿಯೋ ಟೆಲಿಕಾಂ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ನೂತನ 750 ರೂ. ಬೆಲೆಯ ಪ್ರಿಪೇಯ್ಡ್ ಯೋಜನೆ ಆಕರ್ಷಕ ಪ್ರಯೋಜನಗಳೊಂದಿಗೆ ಎನಿಸಿದೆ. ಆದ್ರೀಗ ಸಂಸ್ಥೆಯು ಈ ಯೋಜನೆಯ ಬೆಲೆಯಲ್ಲಿ 750 ರೂ. ಬೆಲೆಯಿಂದ, ಈಗ 749 ರೂ. ಬೆಲೆಗೆ ಬದಲಾವಣೆ ಮಾಡಿದೆ. ಇದರೊಂದಿಗೆ ಪ್ರಯೋಜನಗಳಲ್ಲಿಯೂ ಕೆಲವೊಂದು ಸಣ್ಣ ಪುಟ್ಟ ಬದಲಾವಣೆಗಳನ್ನು ತಂದಿದೆ. ಹಾಗಾದರೇ ಈ ಯೋಜನೆ ಪ್ರಯೋಜನಗಳ ಬಗ್ಗೆ ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಯೋಣ ಬನ್ನಿರಿ.

ಜಿಯೋದ 750ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ನೂತನ 750ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 180 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಜಿಯೋ 750ರೂ. ಯೋಜನೆಯೊಂದಿಗೆ, ಗ್ರಾಹಕರು 1 ರೂ. ಗೆ 100MB ಹೆಚ್ಚುವರಿ ಡೇಟಾವನ್ನು ಪಡೆಯುತ್ತಾರೆ. ಆದ್ದರಿಂದ ಯೋಜನೆಯನ್ನು ಈಗಾಗಲೇ ಜಿಯೋದಿಂದ ಎರಡು ಅಂಶಗಳಾಗಿ ವಿಂಗಡಿಸಲಾಗಿದೆ. ಮೊದಲ ಭಾಗ 749 ರೂ. ಯೋಜನೆಯಾಗಿದೆ. ಇನ್ನು ಎರಡನೆಯದು 1 ರೂ. ಯೋಜನೆಯಾಗಿದ್ದು, ಅದು 100MB ಡೇಟಾ ಒಳಗೊಂಡಿದೆ.

ಜಿಯೋದ 719ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 719ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಜಿಯೋದ 1066ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 1066 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173 GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ಜಿಯೋದ 799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 799 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 112 GB ಡೇಟಾ ಪ್ರಯೋಜನ ಸಿಗುತ್ತದೆ.


Click it and Unblock the Notifications








