ಜಿಯೋ ಇಂಥಾ ನಿರ್ಧಾರ ಮಾಡುತ್ತೆ ಅಂತ ಯಾರೂ ಊಹಿಸಿರಲಿಲ್ಲ!..ನಿಜಕ್ಕೂ ಶಾಕ್!
ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್ ಜಿಯೋ ಟೆಲಿಕಾಂ ಹಲವು ಆಕರ್ಷಕ ಪ್ಲ್ಯಾನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಜಿಯೋ ಪ್ರೀಪೇಯ್ಡ್ ಜೊತೆಗೆ ಪೋಸ್ಟ್‌ಪೇಯ್ಡ್ ಯೋಜನೆಗಳಿಂದ ಸಹ ಗುರುತಿಸಿಕೊಂಡಿದೆ. ಆ ಪೈಕಿ ಕೆಲವು ಪ್ಲ್ಯಾನ್‌ಗಳು ಅಧಿಕ ಡೇಟಾ ಜೊತೆಗೆ ಹೆಚ್ಚುವರಿಯಾಗಿ ಓಟಿಟಿ (OTT) ಪ್ರಯೋಜನ ಸಹ ಪಡೆದಿದ್ದು, ಗ್ರಾಹಕರಿಗೆ ಡಬಲ್ ಧಮಾಕಾ ನೀಡಿವೆ. ಆದ್ರೆ, ಇದೀಗ ಜಿಯೋ ಕೈಗೊಂಡಿರುವ ಈ ನಿರ್ಧಾರ ನಿಜಕ್ಕೂ ಅಚ್ಚರಿ ಎನಿಸಿದೆ.

ಹೌದು, ಮುಖೇಶ್ ಅಂಬಾನಿ ಮಾಲೀಕತ್ವದ ಜಿಯೋ ಸಂಸ್ಥೆಯು ತನ್ನ ಎರಡು ಜನಪ್ರಿಯ ಪ್ರೀಪೇಯ್ಡ್ ಯೋಜನೆಗಳನ್ನು ಸಂಪೂರ್ಣವಾಗಿ (removed) ನಿಲ್ಲಿಸಿದೆ. ಆ ಎರಡು ಜನಪ್ರಿಯ ಯೋಜನೆಗಳು ಡಿಸ್ನಿ+ ಹಾಟ್‌ಸ್ಟಾರ್ (Disney+ Hotstar) ಓಟಿಟಿ ಚಂದಾದಾರಿಕೆ ಸೌಲಭ್ಯ ಪಡೆದಿದ್ದು, ಜೊತೆಗೆ ದೈನಂದಿನ ಡೇಟಾ, ಎಸ್‌ಎಮ್‌ಎಸ್ ಪ್ರಯೋಜನ, ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳೊಂದಿಗೆ ಆಕರ್ಷಕ ವ್ಯಾಲಿಡಿಟಿ ಸಹ ಪಡೆದಿವೆ.

ಜಿಯೋ ತನ್ನ ಪ್ಲ್ಯಾನ್‌ಗಳ ಲಿಸ್ಟ್‌ನಿಂದ ತೆಗೆದುಹಾಕಿರುವ ಪ್ರೀಪೇಯ್ಡ್ ಪ್ಲ್ಯಾನ್‌ಗಳೆಂದರೆ, ಅವು ಕ್ರಮವಾಗಿ ಜಿಯೋ 1499ರೂ ಮತ್ತು ಜಿಯೋ 4199ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಗಿವೆ. ಹೀಗಾಗಿ ಈ ಎರಡೂ ಯೋಜನೆಗಳು ಟೆಲಿಕಾಂನ ಅಧಿಕೃತ ವೆಬ್‌ಸೈಟ್ ಅಥವಾ ಜಿಯೋ ಮೊಬೈಲ್ ಆಪ್‌ನಲ್ಲಿ ಕಾಣಿಸುವುದಿಲ್ಲ. ಹಾಗಾದರೆ ಜಿಯೋ ಟೆಲಿಕಾಂ ಕಿಕ್‌ಔಟ್ ಮಾಡಿರುವ ಆ ಎರಡು ಪ್ಲ್ಯಾನ್‌ಗಳ ಬಗ್ಗೆ ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ.

ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಜಿಯೋ ಆಪ್‌ಗಳು ಲಭ್ಯವಾಗಲಿವೆ.

ಜಿಯೋ 1,499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 168 GB ಡೇಟಾ ಸೌಲಭ್ಯ ಸಿಗಲಿದೆ.

ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಇದರೊಂದಿಗೆ ಹೆಚ್ಚುವರಿಯಾಗಿ ಜಿಯೋ ಆಪ್‌ಗಳು ಲಭ್ಯವಾಗಲಿವೆ.

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಜನಪ್ರಿಯ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ರೀಚಾರ್ಜ್‌ಗೆ ಲಭ್ಯವಿದೆ. ಇದು 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.


Click it and Unblock the Notifications








