ಜಿಯೋದಿಂದ ದಿಢೀರ್ ಹೊಸ ಪ್ಲ್ಯಾನ್ ಲಾಂಚ್; ವರ್ಷ ಪೂರ್ತಿ 3GB ಡೇಟಾ!
ದೇಶದಲ್ಲಿ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಜಿಯೋ ಈಗಾಗಲೇ ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಸಿದೆ. ಆದ್ರೆ ಜಿಯೋ ಟೆಲಿಕಾಂ ಇದೀಗ ಸದ್ದಿಲ್ಲದೇ ಮತ್ತೊಂದು ಪ್ರೀಪೇಯ್ಡ್ ಯೋಜನೆಯನ್ನು ಬಿಡುಗಡೆ ಮಾಡಿದೆ. ಜಿಯೋ ಟೆಲಿಕಾಂನ ಈ ಹೊಸ ಯೋಜನೆಯಲ್ಲಿ ಗ್ರಾಹಕರಿಗೆ ವರ್ಷ ಪೂರ್ತಿ ಪ್ರತಿದಿನ ಭರ್ಜರಿ ಅಧಿಕ ಡೇಟಾ ಲಭ್ಯವಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ.

ಹೌದು, ಜಿಯೋ ಟೆಲಿಕಾಂ ತನ್ನ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಲಿಸ್ಟ್‌ಗೆ ಹೊಸದಾಗಿ 3499ರೂ.ಗಳ ಪ್ಲ್ಯಾನ್ ಅನ್ನು ಹೊಸದಾಗಿ ಸೇರ್ಪಡೆ ಮಾಡಿಕೊಂಡಿದೆ. ಪ್ರೈಸ್ ಟ್ಯಾಗ್ ಅಧಿಕ ಅನಿಸಿದರೂ ಈ ಯೋಜನೆಯು ವಾರ್ಷಿಕ ಅವಧಿಯ ಪ್ರೀಪೇಯ್ಡ್ ಪ್ಲ್ಯಾನ್ ಆಗಿದೆ. ವಾಯಿಸ್ ಕರೆ, ಎಸ್‌ಎಮ್‌ಎಸ್ ಪ್ರಯೋಜನಗಳ ಜೊತೆಗೆ ಒಟ್ಟಾರೇ 1095 GB ಡೇಟಾ ಸೌಲಭ್ಯವನ್ನು ಈ ಯೋಜನೆಯು ಒಳಗೊಂಡಿದೆ. ಹಾಗಾದರೇ ಜಿಯೋದ ಹೊಸ 3499ರೂ.ಗಳ ಪ್ಲ್ಯಾನಿನ ಪ್ರಯೋಜನಗಳ ಬಗ್ಗೆ ಹಾಗೂ ಇತರೆ ವಾರ್ಷಿಕ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 3499ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಹೊಸ 3499ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 3GB ಡೇಟಾ ಪ್ರಯೋಜನವನ್ನು ಪಡೆದಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 1095 GB ಡೇಟಾ ಸೌಲಭ್ಯ ಗ್ರಾಹಕರಿಗೆ ಲಭ್ಯವಾಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಜಿಯೋ ಆಪ್ಸ್ ಹಾಗೂ ಇತರೆ ಸೇವೆಗಳು ಸಿಗಲಿವೆ.

ಜಿಯೋ 2399ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಹೊಸ 2,399ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 2121ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 2121ರೂ. ಪ್ಲ್ಯಾನ್ ಪ್ರತಿದಿನ 1.5GB ಡೇಟಾ ಪ್ರಯೋಜನ ಒದಗಿಸುತ್ತದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನವನ್ನು ಒಳಗೊಂಡಿದ್ದು, ಇನ್ನು ಈ ಪ್ಲ್ಯಾನ್ 336 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ.

ಜಿಯೋ 1299ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನ್ ಒಟ್ಟು 336 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.ಹಾಗೆಯೇ ಈ ಪ್ಲ್ಯಾನಿನಲ್ಲಿ ಪೂರ್ಣ ಅವಧಿಗೆ ಒಟ್ಟು 24GB ಡೇಟಾ ಪ್ರಯೋಜನ ಲಭ್ಯವಾಗುತ್ತದೆ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸಿಗುತ್ತವೆ. ಇದೊಂದು ವ್ಯಾಲಿಡಿಟಿ ಯೋಜನವಾಗಿದೆ.

ಜಿಯೋ 329ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಜಿಯೋ 249ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಜಿಯೋದ 199ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋದ 149ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ 149ರೂ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ.

ಜಿಯೋ 129ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್‌ಎಮ್‌ಎಸ್‌ಗಳು ದೊರೆಯುತ್ತವೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇನ್ನು ಈ ಪ್ಲಾನ್ ಒಟ್ಟು 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 999ರೂ. ಪ್ರೀಪೇಯ್ಡ್ ಪ್ಲಾನ್
ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಜೊತೆಗೆ ಉಚಿತ ಎಸ್‌ಎಮ್‌ಎಸ್ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ಜಿಯೋ 599ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 555ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 555ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಲ್-ಇನ್-ಒನ್ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.


Click it and Unblock the Notifications








