ಜಿಯೋದ ಈ ಎರಡು ಪ್ಲ್ಯಾನ್‌ಗಳಲ್ಲಿ, ಸಿಗುತ್ತೆ ವರ್ಷಪೂರ್ತಿ ಅಧಿಕ ಡೇಟಾ!
ದೇಶದ ಟೆಲಿಕಾಂ ವಲಯದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳ ಆಯ್ಕೆ ನೀಡಿದೆ. ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಗಳ ಪಟ್ಟಿಯಲ್ಲಿ ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಹೊಂದಿದೆ. ಆ ಪೈಕಿ ಜಿಯೋ ಟೆಲಿಕಾಂನ ಎರಡು ವಾರ್ಷಿಕ ಅವಧಿಯ ಪ್ರೀಪೇಯ್ಡ್ ಪ್ಲ್ಯಾನ್ ಗಳು ಗಮನ ಸೆಳೆದಿವೆ. ಈ ಯೋಜನೆಗಳು ವರ್ಷ ಪೂರ್ತಿ ಕರೆ, ಡೇಟಾ, ಎಸ್‌ಎಮ್‌ಎಸ್ ಪ್ರಯೋಜನ ಸೌಲಭ್ಯ ಪಡೆದಿವೆ.

ಹೌದು, ಜಿಯೋ ಟೆಲಿಕಾಂನ ಜಿಯೋ 4,199ರೂ ಮತ್ತು ಜಿಯೋ 3,119ರೂ. ಪ್ರೀಪೇಯ್ಡ್ ಪ್ಲ್ಯಾನ್‌ಗಳು ವಾರ್ಷಿಕ ಅವಧಿಯ ಯೋಜನೆ ಆಗಿವೆ. ಈ ಎರಡು ಯೋಜನೆಗಳು ಅಧಿಕ ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಓಟಿಟಿ ಹಾಗೂ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋ 4,199ರೂ ಮತ್ತು ಜಿಯೋ 3,119ರೂ. ಪ್ರೀಪೇಯ್ಡ್ ಪ್ಲ್ಯಾನ್‌ಗಳ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 3,119ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 3,119ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಜೊತೆಗೆ ಜಿಯೋ ಆಪ್ಸ್ ಪ್ರಯೋಜನ ಲಭ್ಯ.

ಜಿಯೋ 2,879ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 1559ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 336 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹಾಗೆಯೇ ಈ ಪ್ಲ್ಯಾನಿನಲ್ಲಿ ಪೂರ್ಣ ಅವಧಿಗೆ ಒಟ್ಟು 24 GB ಡೇಟಾ ಪ್ರಯೋಜನ ಲಭ್ಯವಾಗುತ್ತದೆ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಮ್ ಪ್ರಯೋಜನ ಸಿಗಲಿದೆ.

ಜಿಯೋ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 533ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋ 479ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 395ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 395ರೂ ಪ್ಲ್ಯಾನಿನಲ್ಲಿ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications








