Home
ಸುದ್ದಿಜಾಲ

ನೀವು ಅಧಿಕ ಡೇಟಾ ಪ್ರಿಯರೇ?..ಹಾಗಿದ್ರೆ ಜಿಯೋದ ಈ ಎರಡು ಪ್ಲ್ಯಾನ್‌ಗಳಿಗೆ ಫಿದಾ ಆಗ್ತೀರಿ!

ಭಾರತೀಯ ಟೆಲಿಕಾಂ ವಲಯದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳ ಆಯ್ಕೆ ನೀಡಿದೆ. ಜಿಯೋ ತನ್ನ ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಪಟ್ಟಿಯಲ್ಲಿ ಅಲ್ಪಾವಧಿಯ ಪ್ಲ್ಯಾನ್‌ಗಳ ಜೊತೆಗೆ ಕೆಲವು ಅತ್ಯುತ್ತಮ ದೀರ್ಘಾವಧಿಯ ಯೋಜನೆಗಳನ್ನು ಒಳಗೊಂಡಿದೆ. ಅವುಗಳಲ್ಲಿ ರಿಲಯನ್ಸ್‌ ಜಿಯೋ ಟೆಲಿಕಾಂನ 700ರೂ. ಬೆಲೆ ಒಳಗಿನ ಎರಡು ಪ್ರೀಪೇಯ್ಡ್ ಪ್ಲ್ಯಾನ್ ಗಳು ಆಕರ್ಷಕ ಎನಿಸಿವೆ. ಈ ಎರಡು ಪ್ಲ್ಯಾನ್‌ಗಳು ಭರ್ಜರಿ ಡೇಟಾ ಪ್ರಯೋಜನ ಪಡೆದಿವೆ.

ಟೆಲಿಕಾಂನ

ಹೌದು, ಜಿಯೋ ಟೆಲಿಕಾಂನ ಜಿಯೋ 419ರೂ ಮತ್ತು ಜಿಯೋ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಅಧಿಕ ಡೇಟಾ ಸೌಲಭ್ಯ ಪಡೆದ ಯೋಜನೆಗಳಾಗಿ ಗಮನ ಸೆಳೆದಿವೆ. ಈ ಎರಡು ಯೋಜನೆಗಳು ಅಧಿಕ ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಓಟಿಟಿ ಹಾಗೂ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋ 419ರೂ ಮತ್ತು ಜಿಯೋ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 601ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 601ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 3 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 6 GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90GB ಡೇಟಾ ಪ್ರಯೋಜನ ದೊರೆಯಲಿದೆ.

ಜಿಯೋ 419ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 419ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 419ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನವನ್ನು ದೊರೆಯಲಿದೆ. ಇನ್ನು ಈ ಪ್ಲಾನಿನಲ್ಲಿ ಅನಿಯಮಿತ ಕರೆ ಪ್ರಯೋಜನ ಸಹ ಗ್ರಾಹಕರಿಗೆ ಲಭ್ಯ ಆಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 84 GB ಡೇಟಾ ಪ್ರಯೋಜನ ದೊರೆಯಲಿದೆ.

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 1199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 479ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 479ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್‌ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

Best Mobiles in India

English summary
Jio Telecom's These Two Under Rs 700 Plans Offers Daily 3GB Data.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+