ಜಿಯೋ ಟೆಲಿಕಾಂನ ಈ ಪ್ಲ್ಯಾನ್ ದುಬಾರಿ!..ಆದರೆ ಸಿಗಲಿದೆ ಜಬರ್ದಸ್ತ್ ಪ್ರಯೋಜನ!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಮುಂಚೂಣಿಯ ಟೆಲಿಕಾಂ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ರಿಲಯನ್ಸ್ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುಂದೆ ಸಾಗಿರುವ ಜಿಯೋ ಇದೀಗ ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಆ ಪೈಕಿ ಜಿಯೋ 2,599ರೂ. ಪ್ರೀಪೇಯ್ಡ್ ಪ್ಲ್ಯಾನ್ ದುಬಾರಿ ಪ್ರೈಸ್ ಟ್ಯಾಗ್ ಅನಿಸಿದರೂ, ಆಕರ್ಷಕ ಪ್ರಯೋಜನಗಳನ್ನು ಪಡೆದಿದೆ. ಈ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿಸಿದರೇ ಗ್ರಾಹಕರಿಗೆ ಭರ್ಜರಿ ಪ್ರಯೋಜನಗಳು ಲಭ್ಯವಾಗಲಿವೆ.

ಹೌದು, ರಿಲಯನ್ಸ್ ಜಿಯೋ ಟೆಲಿಕಾಂನ ಕೆಲವು ವಾರ್ಷಿಕ ಯೋಜನೆಗಳ ಆಯ್ಕೆ ಪಡೆದಿದೆ. ಆ ಪೈಕಿ 2,599ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಗಮನ ಸೆಳೆದಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಡಿಸ್ನಿ ಹಾಟ್‌ಸ್ಟಾರ್ ಓಟಿಟಿ, ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ರಿಲಾಯನ್ಸ್ ಜಿಯೋ ಟೆಲಿಕಾಂನ 2,599ರೂ. ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಈ ಯೋಜನೆಯ ಒಟ್ಟಾರೇ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 2599ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ಜಿಯೋದ 2,599ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಜಿಯೋ 3,499ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 3,499ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 2,399ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್ಸ್ ಪ್ರಯೋಜನ ಲಭ್ಯ.

ಜಿಯೋ 2121ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ಜಿಯೋ 2121ರೂ.ಪ್ಲ್ಯಾನ್ ಪ್ರತಿದಿನ 1.5GB ಡೇಟಾ ಪ್ರಯೋಜನ ಒದಗಿಸುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನವನ್ನು ಒಳಗೊಂಡಿದ್ದು, ಜಿಯೋ ಟಿವಿ, ಜಿಯೋ ಸಿನಿಮಾ ಸೇರಿದಂತೆ ಜಿಯೋ ಅಪ್ಲಿಕೇಶನ್‌ಗಳ ಸೇವೆಯು ದೊರೆಯುತ್ತದೆ. ಇನ್ನು ಈ ಪ್ಲ್ಯಾನ್ 336 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ.

ರಿಲಾಯನ್ಸ್ ಜಿಯೋ 599ರೂ. ಪ್ರೀಪೇಯ್ಡ್ ಯೋಜನೆ
ಜಿಯೋ ಟೆಲಿಕಾಂನ ಈ ಜನಪ್ರಿಯ ಯೋಜನೆಗೆ ಈಗ 20% ಕ್ಯಾಶ್‌ಬ್ಯಾಕ್ ಕೊಡುಗೆ ಇದೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ. ಹಾಗೆಯೇ ಹೆಚ್ಚುವರಿಯಾಗಿ ಕೆಲವು ಆಪ್ ಸೇವೆಗಳು ದೊರೆಯಲಿವೆ.


Click it and Unblock the Notifications








