Home
ಸುದ್ದಿಜಾಲ

ಜಿಯೋ ಗ್ರಾಹಕರೇ, ಉಚಿತ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ ಬೇಕೆ? ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿ!

ಜಿಯೋ, ಏರ್‌ಟೆಲ್‌ ಹಾಗು ವಿ ಟೆಲಿಕಾಂ ಸಂಸ್ಥೆಗಳು ಇತ್ತೀಚಿಗೆ ತಮ್ಮ ರೀಚಾರ್ಜ್‌ ಯೋಜನೆಗಳ ಬೆಲೆಯಲ್ಲಿ ಏರಿಕೆ ಮಾಡಿದ್ದು, ಗ್ರಾಹಕರಿಗೆ ಶಾಕ್‌ ನೀಡಿವೆ. ಬೆಲೆ ಏರಿಕೆ ಬಳಿಕವೂ ಅಧಿಕ ಗ್ರಾಹಕರನ್ನು ಸೆಳೆಯಲು ಇರುವ ಚಂದಾದಾರರನ್ನು ಉಳಿಸಿಕೊಳ್ಳಲು ಈ ಸಂಸ್ಥೆಗಳು ಹೆಚ್ಚುವರಿ ಕೊಡುಗೆ ನೀಡುವ ರೀಚಾರ್ಜ್‌ ಯೋಜನೆಗಳನ್ನು ಸಹ ಒದಗಿಸಿವೆ. ಆ ಪೈಕಿ ದೇಶದ ಮುಂಚೂಣಿಯ ಟೆಲಿಕಾಂ ಸಂಸ್ಥೆಯಾದ ಜಿಯೋ (Jio) ತನ್ನ ಎರಡು ಯೋಜನೆಗಳಲ್ಲಿ ಉಚಿತ ನೆಟ್‌ಫ್ಲಿಕ್ಸ್‌ (Netflix) ಚಂದಾದಾರಿಕೆ ನೀಡುತ್ತಿದೆ.

ಹೌದು, ಜಿಯೋ ಟೆಲಿಕಾಂನ ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಹೆಚ್ಚುವರಿಯಾಗಿ ಓಟಿಟಿ ಪ್ರಯೋಜನ ಪಡೆದಿವೆ. ಹಾಗೆಯೇ ಜಿಯೋ ಸಂಸ್ಥೆಯ 1299ರೂ. ಹಾಗೂ 1799ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಇದೀಗ ಗ್ರಾಹಕರಿಗೆ ಉಚಿತವಾಗಿ ನೆಟ್‌ಫ್ಲಿಕ್ಸ್‌ (Netflix) ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ಯೋಜನೆಯು ದೈನಂದಿನ ಡೇಟಾ ಪ್ರಯೋಜನ ಪಡೆದಿರುವುದು ಆಕರ್ಷಕ ಎನಿಸಿದೆ. ಹಾಗಾದರೇ ಜಿಯೋ ಟೆಲಿಕಾಂನ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ ಗ್ರಾಹಕರೇ, ಉಚಿತ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ ಬೇಕೆ? ಈ ಪ್ಲ್ಯಾನ್‌ ನೋಡಿ

ಜಿಯೋ ಟೆಲಿಕಾಂ 1299ರೂ. ರೀಚಾರ್ಜ್‌ ಯೋಜನೆ

ಜಿಯೋ ಟೆಲಿಕಾಂ 1299ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 2GB ದೈನಂದಿನ ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದುಕೊಂಡಿದೆ. ಇನ್ನು ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಪ್ರಯೋಜನ ದೊರೆಯುತ್ತದೆ.

ಹಾಗೆಯೇ ಜಿಯೋದ ಈ ಯೋಜನೆಯಲ್ಲಿ ಉಚಿತವಾಗಿ ನೆಟ್‌ಫ್ಲಿಕ್ಸ್‌ (Netflix) ಚಂದಾದಾರಿಕೆಯ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಜಿಯೋ ಕ್ಲೌಡ್‌ ಸೇವೆಗಳು ಸಹ ದೊರೆಯುತ್ತವೆ.

ಜಿಯೋ ಟೆಲಿಕಾಂ 1799ರೂ. ರೀಚಾರ್ಜ್‌ ಯೋಜನೆ

ಜಿಯೋ ಟೆಲಿಕಾಂ 1799ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 3GB ದೈನಂದಿನ ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದುಕೊಂಡಿದೆ. ಇನ್ನು ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 252GB ಡೇಟಾ ಪ್ರಯೋಜನ ದೊರೆಯುತ್ತದೆ.

ಹಾಗೆಯೇ ಜಿಯೋ ಟೆಲಿಕಾಂನ ಈ ರೀಚಾರ್ಜ್‌ ಯೋಜನೆಯಲ್ಲಿ ಉಚಿತವಾಗಿ ನೆಟ್‌ಫ್ಲಿಕ್ಸ್‌ (Netflix) ಚಂದಾದಾರಿಕೆಯ ಪ್ರಯೋಜನ ಸಹ ಗ್ರಾಹಕರಿಗೆ ಲಭ್ಯವಾಗಲಿದೆ. ಅಲ್ಲದೇ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಜಿಯೋ ಕ್ಲೌಡ್‌ ಸೇವೆಗಳು ಸಹ ದೊರೆಯುತ್ತವೆ.

ಜಿಯೋದ 1029ರೂ. ಯೋಜನೆ (ಪ್ರೈಮ್‌ ವಿಡಿಯೋ)

ಜಿಯೋ ಟೆಲಿಕಾಂ 1029ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 2GB ದೈನಂದಿನ ಡೇಟಾ ಸೌಲಭ್ಯ ಪಡೆದುಕೊಂಡಿದೆ. ಇದರ ಜೊತೆಗೆ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದುಕೊಂಡಿದೆ. ಇನ್ನು ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಪ್ರಯೋಜನ ದೊರೆಯುತ್ತದೆ.

ಹಾಗೆಯೇ ಜಿಯೋದ ಈ ಯೋಜನೆಯಲ್ಲಿ ಉಚಿತವಾಗಿ ಅಮೆಜಾನ್‌ ಪ್ರೈಮ್‌ ವಿಡಿಯೋ ಓಟಿಟಿ (Prime Video Mobile Edition) ಚಂದಾದಾರಿಕೆಯ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಜಿಯೋ ಕ್ಲೌಡ್‌ ಸೇವೆಗಳು ಸಹ ದೊರೆಯುತ್ತವೆ.

Best Mobiles in India

English summary
Jio telecom's these prepaid plans offer netflix subscription and data benefits. Check out other benefits and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+