ಒಂದು ಬಾರಿ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, 365 ದಿನ ಡೇಟಾ ಕಿರಿ ಕಿರಿ ಇರಲ್ಲ!
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ರೀಚಾರ್ಜ್ ಪ್ಲ್ಯಾನ್‌ಗಳ ಆಯ್ಕೆ ನೀಡಿದೆ. ಅದೇ ದಾರಿಯಲ್ಲಿ ಮುಂದೆ ಸಾಗಿರುವ ಜಿಯೋ ಇತ್ತೀಚಿಗೆ ಮತ್ತೆ ಕೆಲವು ಪ್ರೀಪೇಯ್ಡ್ ಪ್ಲ್ಯಾನ್ ಸೇರ್ಪಡೆ ಮಾಡಿದೆ. ಅವುಗಳ ಪೈಕಿ ಜಿಯೋ ಈ ಜನಪ್ರಿಯ ಪ್ಲ್ಯಾನ್ ರೀಚಾರ್ಜ್ ಮಾಡಿಸಿದರೆ, ವರ್ಷಪೂರ್ತಿ ಟೆನ್ಷನ್ ಇರಲ್ಲ.
ಹೌದು, ಜಿಯೋ ಸಂಸ್ಥೆಯ 2999ರೂ. ಪ್ರೀಪೇಯ್ಡ್ ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಅಲ್ಲದೇ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ದೊರೆಯುತ್ತದೆ. ಹಾಗಾದರೇ ಜಿಯೋದ ಈ 2999ರೂ. ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ.

ಜಿಯೋ 2999ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 912.5 GB ಡೇಟಾ ದೊರೆಯುತ್ತದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ಸಿಗಲಿದೆ.
ಜಿಯೋ 4498ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ ಜೊತೆಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಅಮೆಜಾನ್ ಪ್ರೈಮ್ ಹಾಗೂ ಡಿಸ್ನಿ+ ಹಾಟ್‌ಸ್ಟಾರ್ ಓಟಿಟಿ ಲಭ್ಯ.
ಜಿಯೋ 3227ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 3227ರೂ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ ಜೊತೆಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಅಮೆಜಾನ್ ಪ್ರೈಮ್ ಓಟಿಟಿ ಚಂದಾದಾರಿಕೆ ಪಡೆದಿದೆ.
ಜಿಯೋ 3226ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಹೊಂದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ ಜೊತೆಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಸೋನಿಲೈವ್ ಓಟಿಟಿ ಚಂದಾದಾರಿಕೆ ಪಡೆದಿದೆ.
ಜಿಯೋ 3225ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಹೊಂದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ ಜೊತೆಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಡೈಲಿ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಜೀ5 ಓಟಿಟಿ ಚಂದಾದಾರಿಕೆ ಒಳಗೊಂಡಿದೆ.


Click it and Unblock the Notifications








