ದಾವಣಗೆರೆ, ಶಿವಮೊಗ್ಗ, ಗದಗ ಸೇರಿದಂತೆ 16 ನಗರಗಳಲ್ಲಿ ಈಗ ಜಿಯೋ 5G ಲಭ್ಯ!

|

ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗ-ಬೆಟಗೇರಿ (ಕರ್ನಾಟಕ), ಕಾಕಿನಾಡ, ಕರ್ನೂಲ್ (ಆಂಧ್ರಪ್ರದೇಶ), ಸಿಲ್ಚಾರ್ (ಅಸ್ಸಾಂ), ಮಲಪ್ಪುರಂ ಸೇರಿದಂತೆ 16 ನಗರಗಳಲ್ಲಿ ರಿಲಯನ್ಸ್ ಜಿಯೋ ಇಂದು (ಜನವರಿ 17ರ ಸೋಮವಾರ) ತನ್ನ ಟ್ರೂ 5G ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಇದರಲ್ಲಿ ಪಾಲಕ್ಕಾಡ್, ಕೊಟ್ಟಾಯಂ, ಕಣ್ಣೂರು (ಕೇರಳ), ತಿರುಪ್ಪೂರ್ (ತಮಿಳುನಾಡು), ನಿಜಾಮಾಬಾದ್, ಖಮ್ಮಂ (ತೆಲಂಗಾಣ), ಮತ್ತು ಬರೇಲಿ (ಉತ್ತರ ಪ್ರದೇಶ) ಸಹ ಒಳಗೊಂಡಿದೆ.

ದಾವಣಗೆರೆ, ಶಿವಮೊಗ್ಗ, ಗದಗ ಸೇರಿದಂತೆ 16 ನಗರಗಳಲ್ಲಿ ಈಗ ಜಿಯೋ 5G ಲಭ್ಯ!

ರಿಲಯನ್ಸ್ ಜಿಯೋ ಜ.17 ರಂದು ಕರ್ನಾಟಕದ ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗ-ಬೆಟಗೇರಿ ಮತ್ತು ಇತರ 11 ನಗರಗಳಲ್ಲಿ ಟ್ರೂ 5ಜಿ ಸೇವೆಗಳ ಬಹು-ರಾಜ್ಯ ಬಿಡುಗಡೆಯನ್ನು ಘೋಷಿಸಿದೆ. ರಿಲಯನ್ಸ್ ಜಿಯೋ ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗ-ಬೆಟಗೇರಿಯಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ. ಇಂದಿನಿಂದ ಪ್ರಾರಂಭವಾಗುವ ಸೇವೆಯನ್ನು ಪಡೆಯುವುದಕ್ಕೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ, 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಈ ನಗರಗಳಲ್ಲಿನ ಜಿಯೋ ಬಳಕೆದಾರರನ್ನು ಜಿಯೋ ವೆಲ್ ಕಮ್ ಕೊಡುಗೆಗೆ ಆಹ್ವಾನಿಸಲಾಗುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿದ ಜಿಯೋ ವಕ್ತಾರರು, "7 ರಾಜ್ಯಗಳಾದ್ಯಂತ 16 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳನ್ನು ಬಿಡುಗಡೆ ಮಾಡಲು ನಾವು ಹೆಮ್ಮೆಪಡುತ್ತೇವೆ, ಇದರೊಂದಿಗೆ ಒಟ್ಟು ಸಂಖ್ಯೆಯನ್ನು 134 ನಗರಗಳಿಗೆ ಕೊಂಡೊಯ್ದಿದ್ದೇವೆ. 2023ರ ಹೊಸ ವರ್ಷದಲ್ಲಿ ಜಿಯೋ ಟ್ರೂ 5ಜಿ ತಂತ್ರಜ್ಞಾನದ ರೂಪಾಂತರದ ಪ್ರಯೋಜನಗಳನ್ನು ಪ್ರತಿ ಜಿಯೋ ಬಳಕೆದಾರರು ಆನಂದಿಸಲು ನಾವು ಬಯಸುತ್ತೇವೆ. ಏಕೆಂದರೆ ನಾವು ದೇಶದಾದ್ಯಂತ ಟ್ರೂ 5ಜಿ ಜಾರಿಯ ‌‌ವೇಗ ಮತ್ತು ತೀವ್ರತೆಯನ್ನು ಹೆಚ್ಚಿಸಿದ್ದೇವೆ.

ದಾವಣಗೆರೆ, ಶಿವಮೊಗ್ಗ, ಗದಗ ಸೇರಿದಂತೆ 16 ನಗರಗಳಲ್ಲಿ ಈಗ ಜಿಯೋ 5G ಲಭ್ಯ!

"ಹೊಸದಾಗಿ ಪ್ರಾರಂಭಿಸಲಾದ ಈ ಟ್ರೂ 5ಜಿ ನಗರಗಳು ಪ್ರಮುಖ ಪ್ರವಾಸೋದ್ಯಮ ಮತ್ತು ವಾಣಿಜ್ಯ ತಾಣಗಳು ಹಾಗೂ ನಮ್ಮ ದೇಶದ ಪ್ರಮುಖ ಶಿಕ್ಷಣ ಕೇಂದ್ರಗಳಾಗಿವೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಪಡೆಯುತ್ತಾರೆ ಮಾತ್ರವಲ್ಲ, ಜತೆಗೆ ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಎಸ್ಎಂಇಗಳು ಅನಂತ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತವೆ.

"ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಉತ್ತರ ಪ್ರದೇಶ ರಾಜ್ಯ ಸರ್ಕಾರಗಳು ಈ ಪ್ರದೇಶಗಳನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನಕ್ಕೆ ನಿರಂತರ ಬೆಂಬಲ ನೀಡಿದ್ದಕ್ಕಾಗಿ ನಾವು ಅವರಿಗೆ ಕೃತಜ್ಞರಾಗಿರುತ್ತೇವೆ," ಎಂದಿದ್ದಾರೆ.

ದಾವಣಗೆರೆ, ಶಿವಮೊಗ್ಗ, ಗದಗ ಸೇರಿದಂತೆ 16 ನಗರಗಳಲ್ಲಿ ಈಗ ಜಿಯೋ 5G ಲಭ್ಯ!

ಜಿಯೋ 5G ಡೇಟಾ ಪ್ಲ್ಯಾನ್‌ಗಳ ಮಾಹಿತಿ
ಜಿಯೋ 5G ಸೇವೆ ಲಭ್ಯವಿರುವ ಪ್ರದೇಶದ ಗ್ರಾಹಕರು ಜಿಯೋ 239 ರೂ. ಪ್ರಿಪೇಯ್ಡ್ ಯೋಜನೆ ಅಥವಾ ಅದಕ್ಕಿಂತ ಅಧಿಕ ಮೊತ್ತದ ಪ್ಲ್ಯಾನ್‌ ರೀಚಾರ್ಜ್ ಮಾಡಿರುವ ಗ್ರಾಹಕರು ಹೆಚ್ಚುವರಿ ಪ್ಯಾಕ್ ಖರೀದಿಸುವ ಅಗತ್ಯವಿಲ್ಲ. ಆದರೆ ಕಡಿಮೆ ಬೆಲೆಯ ಪ್ಲ್ಯಾನ್‌ಗಳನ್ನು ರೀಚಾರ್ಜ್‌ ಮಾಡಿರುವ ಗ್ರಾಹಕರಿಗೆ 5G ಅನ್ನು ಅನುಭವಿಸಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ಜಿಯೋ ಹೊಸ 5G ಅಪ್‌ಗ್ರೇಡ್‌ ಪ್ರಿಪೇಯ್ಡ್ ಯೋಜನೆಯನ್ನು ಈಗ ಅವರಿಗೆ ಲಭ್ಯ ಮಾಡಿದೆ. ಅದುವೇ ಜಿಯೋ 61ರೂ. ಪ್ಲ್ಯಾನ್ ಆಗಿದ್ದು, ಇದು 6GB ಡೇಟಾ ಪ್ರಯೋಜನ ಪಡೆದಿದೆ.

ಗ್ರಾಹಕರು ತಮ್ಮ ಚಾಲ್ತಿ ಇರುವ ಪ್ರಿಪೇಯ್ಡ್ ಯೋಜನೆ ಅವಧಿ ಮುಗಿಯುವವರೆಗೆ 61ರೂ. ಪ್ಲ್ಯಾನ್‌ ಸಕ್ರಿಯವಾಗಿರುತ್ತದೆ. ಜಿಯೋ 119ರೂ, ಜಿಯೋ 149ರೂ, ಜಿಯೋ 179ರೂ, ಜಿಯೋ 199ರೂ ಅಥವಾ ಜಿಯೋ 209ರೂ. ಬೆಲೆಯ ಪ್ರಿಪೇಯ್ಡ್ ಪ್ಲ್ಯಾನ್‌ ರೀಚಾರ್ಜ್ ಮಾಡಿರುವ ಗ್ರಾಹಕರಿಗೆ ಈ 5G ಅಪ್‌ಗ್ರೇಡ್‌ ಡೇಟಾ ಪ್ಲಾನ್ ಕಾರ್ಯನಿರ್ವಹಿಸುತ್ತದೆ. ಆದರೆ, ಗ್ರಾಹಕರು ಜಿಯೋ 5G ವೆಲ್ಕಮ್ ಆಫರ್ ಅನ್ನು ಸ್ವೀಕರಿಸದಿದ್ದರೆ, ಈ ಪ್ಲ್ಯಾನ್ ಉಪಯುಕ್ತವಾಗದು.

Best Mobiles in India

Read more about:
English summary
Jio True 5G: Now in DAVANAGERE, SHIVAMOGGA, BIDAR, HOSPET, GADAG-BETAGERI AND MORE CITIES. Know complete details in Kannada.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X