Home
ಸುದ್ದಿಜಾಲ

ಜಿಯೋ ಟ್ರೂ 5G ಸೇವೆ ಈಗ ಬೆಂಗಳೂರಿನಲ್ಲಿ ಪ್ರಾರಂಭ!..ಆರಂಭಿಕ ಕೊಡುಗೆ ಏನು?

ರಿಲಯನ್ಸ್ ಜಿಯೋ ತನ್ನ 5G ಸೇವೆಗಳನ್ನು ಇದೀಗ ಮತ್ತೆ ಎರಡು ಹೊಸ ನಗರಗಳಲ್ಲಿ ಹೊರತಂದಿದೆ. ಮುಂಬೈ, ದೆಹಲಿ, ಕೋಲ್ಕತ್ತಾ, ಚೆನ್ನೈ, ವಾರಾಣಸಿ ಮತ್ತು ನಾಥದ್ವಾರ ಹೀಗೆ ಆರು ನಗರಗಳಲ್ಲಿ ಜಿಯೋ ಟ್ರೂ - 5G ಸೇವೆಗಳ ಯಶಸ್ವಿ ಬೀಟಾ -ಅನಾವರಣ ಆದ ನಂತರದಲ್ಲಿ ಇದೀಗ ಜಿಯೋ ಹೆಚ್ಚಿನ ನಗರಗಳಲ್ಲಿ ಜಿಯೋ ಟ್ರೂ - 5G ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಬೆಂಗಳೂರು ಮತ್ತು ಹೈದರಾಬಾದ್‌ಗೂ ಈಗ ಜಿಯೋ ಟ್ರೂ 5G ದೊರೆಯುತ್ತದೆ.

ಜಿಯೋ ಟ್ರೂ 5G ಸೇವೆ

ಹೌದು, ಸಂಸ್ಥೆಯು ತನ್ನ ಜಿಯೋ ಟ್ರೂ 5G ಸೇವೆಯು ಈಗ ಬೆಂಗಳೂರು ಹಾಗೂ ಹೈದರಾಬಾದ್ ನಗರಗಳಲ್ಲಿ ಪ್ರಾರಂಭಿಸಿದೆ. ಇನ್ನು ಜಿಯೋ ಟ್ರೂ 5G ಯು ಈ ಎರಡೂ ತಂತ್ರಜ್ಞಾನ ಕೇಂದ್ರಿತ ನಗರಗಳಲ್ಲಿ ಮಾನವೀಯತೆಗೆ ಸೇವೆ ಸಲ್ಲಿಸುವ ಮತ್ತು ಭಾರತೀಯರ ಜೀವನದ ಗುಣಮಟ್ಟ ಸುಧಾರಿಸುವ ಕೆಲವು ಇತ್ತೀಚಿನ ತಂತ್ರಜ್ಞಾನಗಳ ನಿಜವಾದ ಸಾಮರ್ಥ್ಯವನ್ನು ಅರಿಯುವುದಕ್ಕೆ ಸಹಾಯ ಮಾಡುತ್ತದೆ.

ಜಿಯೋ ಟ್ರೂ 5G ಅನುಭವವನ್ನು

ಅತ್ಯುತ್ತಮ ಗ್ರಾಹಕ ಅನುಭವ ಖಚಿತ ಮಾಡಿಕೊಳ್ಳಲು ಜಿಯೋದಿಂದ ಸುಧಾರಿತ ಟ್ರೂ 5G ಸೇವೆಗಳನ್ನು ಹಂತ -ಹಂತವಾಗಿ ಹೊರತರುತ್ತಿದೆ. ಜಿಯೋ ಟ್ರೂ 5G ಅನುಭವವನ್ನು ಈಗಾಗಲೇ ಆರು ನಗರಗಳಲ್ಲಿ ಲಕ್ಷಗಟ್ಟಲೆ ಬಳಕೆದಾರರು ಪಡೆಯುತ್ತಿದ್ದಾರೆ. ಇದಕ್ಕೆ ದೊರೆಯುತ್ತಿರುವ ಪ್ರತಿಕ್ರಿಯೆ ಅತ್ಯಂತ ಧನಾತ್ಮಕವಾಗಿದೆ ಮತ್ತು ಭರವಸೆ ನೀಡುತ್ತದೆ. ಜಿಯೋ ಜಾಗತಿಕವಾಗಿ ಅತ್ಯಾಧುನಿಕ 5G ನೆಟ್‌ವರ್ಕ್ ಅನ್ನು ರೂಪಿಸುವುದಕ್ಕೆ ಗ್ರಾಹಕರ ಒಳನೋಟಗಳು ಮತ್ತು ಪ್ರತಿಕ್ರಿಯೆಯು ಸಹಾಯ ಮಾಡುತ್ತಿದೆ.

ಸ್ಮಾರ್ಟ್‌ಫೋನ್‌ಗಳಲ್ಲಿ 500

ಜಿಯೋ ಬಳಕೆದಾರರು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ 500 ಎಂಬಿಪಿಎಸ್‌ (Mbps) ನಿಂದ 1 ಜಿಬಿಪಿಎಸ್ (Gbps) ವರೆಗೆ ಎಲ್ಲಿಯಾದರೂ ವೇಗದ ಅನುಭವವನ್ನು ಪಡೆಯುತ್ತಿದ್ದಾರೆ ಹಾಗೂ ಅತಿ ಹೆಚ್ಚು ಪ್ರಮಾಣದಲ್ಲಿ ಡೇಟಾ ಬಳಸುತ್ತಿದ್ದಾರೆ. ಇದಕ್ಕೆ ಕಾರಣ ಆಗಿರುವುದು ಜಿಯೋ ಟ್ರೂ 5Gಯ ಮೂರು ಪಟ್ಟು ಅನುಕೂಲಗಳು, ಆದ್ದರಿಂದಲೇ ಇದು ಭಾರತದಲ್ಲಿನ ಏಕೈಕ ನಿಜವಾದ 5G ನೆಟ್‌ವರ್ಕ್ ಆಗಿದೆ:

ಯಾವುದೇ

* 4G ನೆಟ್‌ವರ್ಕ್‌ನ ಮೇಲೆ ಯಾವುದೇ ಅವಲಂಬನೆ ಇಲ್ಲದೆ ಸುಧಾರಿತ 5G ನೆಟ್‌ವರ್ಕ್‌ ನೊಂದಿಗೆ ಅದ್ವಿತೀಯ 5G ಆರ್ಕಿಟೆಕ್ಚರ್.

* 700 MHz, 3500 MHz, ಮತ್ತು 26 GHz ಬ್ಯಾಂಡ್‌ಗಳಾದ್ಯಂತ 5G ಸ್ಪೆಕ್ಟ್ರಮ್‌ನ ದೊಡ್ಡ ಮತ್ತು ಉತ್ತಮ ಮಿಶ್ರಣ.

* ಕ್ಯಾರಿಯರ್ ಅಗ್ರಿಗೇಷನ್ ಎಂಬ ಸುಧಾರಿತ ತಂತ್ರಜ್ಞಾನ ಬಳಸಿಕೊಂಡು ಈ 5G ಫ್ರೀಕ್ವೆನ್ಸಿಗಳನ್ನು ಏಕರೂಪದ "ಡೇಟಾ ಹೈವೇ" ಆಗಿ ಯಾವುದೇ ಅಡೆತಡೆ ಇಲ್ಲದೆ ಸಂಯೋಜಿಸುತ್ತದೆ.

ಬೆಂಗಳೂರು ಮತ್ತು ಹೈದರಾಬಾದ್‌

ನವೆಂಬರ್ 10 ರಿಂದ ಬೆಂಗಳೂರು ಮತ್ತು ಹೈದರಾಬಾದ್‌ನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗುತ್ತದೆ, ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಈ ಮೂಲಕ ಪಡೆಯಬಹುದಾಗಿದೆ.

ಏಕೈಕ ಸಂಸ್ಥೆಯಾಗಿ

ಜಿಯೋ ಟೆಲಿಕಾಂ 700MHz (n28) ಆವರ್ತನದಲ್ಲಿ 5G ಬ್ಯಾಂಡ್‌ಗಳನ್ನು ಹೊಂದಿರುವ ಏಕೈಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಜಿಯೋ 800MHz (n5), 1800MHz (n3), 3300MHz (n78) ಮತ್ತು 26GHz (n258) ಆವರ್ತನ ಬ್ಯಾಂಡ್‌ಗಳಲ್ಲಿ ಬ್ಯಾಂಡ್‌ಗಳನ್ನು ಖರೀದಿಸಿತು. ಒಂದೇ ದೃಢವಾದ "ಡೇಟಾ ಹೈವೇ" ಅನ್ನು ನೀಡಲು, ಟೆಲಿಕಾಂ ಈ 5G ಆವರ್ತನಗಳನ್ನು ಸಂಯೋಜಿಸುವ ಮೂಲಕ ಕ್ಯಾರಿಯರ್ ಒಟ್ಟುಗೂಡಿಸುವಿಕೆಯನ್ನು ಬಳಸುತ್ತದೆ.

ಡಿಸೆಂಬರ್ 2023

ಇನ್ನು ಡಿಸೆಂಬರ್ 2023 ರೊಳಗೆ ದೇಶವ್ಯಾಪಿ 5G ಸೇವೆಯನ್ನು ಒದಗಿಸುವುದಾಗಿ ಜಿಯೋ ಭರವಸೆ ನೀಡಿದೆ. ಆದರೆ ಮುಂದಿನ ಹಂತದ ರೋಲ್ಔಟ್ ನಡೆಯುವ ನಗರಗಳ ಪಟ್ಟಿಯನ್ನು ಕಂಪನಿಯು ದೃಢಪಡಿಸಿಲ್ಲ.

Best Mobiles in India

English summary
Jio True 5G launched in Bengaluru and Hyderabad: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+