ಈ Jio ರೀಚಾರ್ಜ್ ಪ್ಲ್ಯಾನ್‌ಗಳ ವ್ಯಾಲಿಡಿಟಿಯೇ ಭಿನ್ನ; ಆದರೂ ಭರ್ಜರಿ ಡೇಟಾ ಲಭ್ಯ!
ಜಿಯೋ ಟೆಲಿಕಾಂ ಭಿನ್ನ ಪ್ರಿಪೇಯ್ಡ್ ಯೋಜನೆಗಳ ಮೂಲಕ ಅಧಿಕ ಗ್ರಾಹಕ ಬಳಗವನ್ನು ಒಳಗೊಂಡಿದೆ. ಜಿಯೋ ಸಂಸ್ಥೆಯು ಅಧಿಕ ದೈನಂದಿನ ಡೇಟಾ ಪ್ಲ್ಯಾನ್‌ಗಳಂತೆ, ಅಧಿಕ ವ್ಯಾಲಿಡಿಟಿಯ ಸೌಲಭ್ಯದ ಯೋಜನೆಗಳನ್ನು ಹೊಂದಿದೆ. ಅವುಗಳ ಪೈಕಿ ಕೆಲವು ಪ್ಲ್ಯಾನ್‌ಗಳು ದೈನಂದಿನ ಡೇಟಾ, ಎಸ್‌ಎಮ್‌ಎಸ್ ಜೊತೆಗೆ ವಿಭಿನ್ನ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಗ್ರಾಹಕರನ್ನು ಸೆಳೆದಿವೆ. ಅವು ಯಾವ ಪ್ರೀಪೇಯ್ಡ್ ಪ್ಲ್ಯಾನ್ ಅಂತೀರಾ?
ಹೌದು, ಜಿಯೋ ಟೆಲಿಕಾಂ ಅಲ್ಪಾವಧಿಯ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳ ಆಯ್ಕೆ ಪಡೆದಿದೆ. 28, 84, 56 ಈ ರೀತಿಯ ವ್ಯಾಲಿಡಿಟಿ ಯೋಜನೆಗಳನ್ನು ಹೊರತುಪಡಿಸಿ ಜಿಯೋ 98, 90, 72, 70 ಈ ರೀತಿ ಭಿನ್ನ ವ್ಯಾಲಿಡಿಟಿ ಅವಧಿಯ ಪ್ಲ್ಯಾನ್‌ಗಳನ್ನು ಒಳಗೊಂಡಿದೆ. ಅವುಗಳು ದೀರ್ಘಾವಧಿ ಗ್ರಾಹಕರಿಗೆ ಆಕರ್ಷಕ ಎನಸಿವೆ. ಹಾಗಾದರೇ ಜಿಯೋ ಟೆಲಿಕಾಂನ ಈ ಭಿನ್ನ ವ್ಯಾಲಿಡಿಟಿ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಜಿಯೋ 899ರೂ. ಪ್ರೀಪೇಯ್ಡ್ ಪ್ಲ್ಯಾನ್
ಜಿಯೋ ಸಂಸ್ಥೆಯ 899ರೂ. ರೀಚಾರ್ಜ್ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಹೊಂದಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 200 GB ಡೇಟಾ ಸೌಲಭ್ಯ ಸಿಗಲಿದೆ. ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ 20 GB ಡೇಟಾ ಪ್ರಯೋಜನ ಕೂಡಾ ಗ್ರಾಹಕರಿಗೆ ದೊರೆಯುತ್ತದೆ.
ಜಿಯೋ 749ರೂ. ಪ್ರೀಪೇಯ್ಡ್ ಪ್ಲ್ಯಾನ್
ಜಿಯೋ ಸಂಸ್ಥೆಯ 749ರೂ. ರೀಚಾರ್ಜ್ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 72 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 164 GB ಡೇಟಾ ಸೌಲಭ್ಯ ಸಿಗಲಿದೆ. ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ 20 GB ಡೇಟಾ ಪ್ರಯೋಜನ ಕೂಡಾ ಗ್ರಾಹಕರಿಗೆ ದೊರೆಯುತ್ತದೆ.
ಜಿಯೋ 999ರೂ. ಪ್ರೀಪೇಯ್ಡ್ ಪ್ಲ್ಯಾನ್
ಜಿಯೋ (Jio) 999ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 98 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.
ಜಿಯೋ 666ರೂ. ಪ್ರೀಪೇಯ್ಡ್ ಪ್ಲ್ಯಾನ್
ಜಿಯೋ ಸಂಸ್ಥೆಯ 666ರೂ. ರೀಚಾರ್ಜ್ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ 20 GB ಡೇಟಾ ಪ್ರಯೋಜನ ಕೂಡಾ ಗ್ರಾಹಕರಿಗೆ ದೊರೆಯುತ್ತದೆ.


Click it and Unblock the Notifications








