ಜಿಯೋದ ಐದು ಪ್ಲ್ಯಾನ್ ಪರಿಷ್ಕರಣೆ: ಸಿಗಲಿದೆ ಜಬರ್ದಸ್ತ್ ಪ್ರಯೋಜನ!
ಏರ್‌ಟೆಲ್, ವಿ ಮತ್ತು ಜಿಯೋ ಟೆಲಿಕಾಂಗಳು ಇತ್ತೀಚೆಗೆ ತಮ್ಮ ಎಲ್ಲಾ ಪ್ರಿಪೇಯ್ಡ್ ಯೋಜನೆಗಳ ಬೆಲೆಗಳನ್ನು ಸುಮಾರು 20% ವರೆಗೆ ಹೆಚ್ಚಿಸಿವೆ. ಆದ್ರೆ ರಿಲಯನ್ಸ್ ಜಿಯೋ ಟೆಲಿಕಾಂ ಇದೀಗ ತನ್ನ ಐದು ಪ್ರಿಪೇಯ್ಡ್ ಯೋಜನೆಗಳನ್ನು ನವೀಕರಿಸಿದೆ. ಜಿಯೋ ಟೆಲಿಕಾಂನ ಪರಿಷ್ಕೃತ ಯೋಜನೆಗಳು ಆಕರ್ಷಕ ಪ್ರಯೋಜನಗಳನ್ನು ಒಳಗೊಂಡಿವೆ. ಜೊತೆಗೆ ಹೆಚ್ಚುವರಿಯಾಗಿ ಓಟಿಟಿ ಪ್ರಯೋಜನವನ್ನು ಹೊಂದಿವೆ.

ಹೌದು, ಜಿಯೋ ಟೆಲಿಕಾಂ ತನ್ನ ಜಿಯೋ 601ರೂ, ಜಿಯೋ 799ರೂ, ಜಿಯೋ 1066ರೂ, ಜಿಯೋ 3119ರೂ ಮತ್ತು ಜಿಯೋ 659ರೂ. ಪ್ರಿಪೇಯ್ಡ್ ಯೋಜನೆಗಳು ಪರಿಷ್ಕರಣೆ ಮಾಡಿದೆ. ಈ ಯೋಜನೆಗಳಲ್ಲಿ ಈಗ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನವನ್ನು ನೀಡಿದೆ. ಅಲ್ಲದೇ ಕೆಲವೊಂದು ಯೋಜನೆಗಳು ಹೆಚ್ಚುವರಿ ಡೇಟಾ ಪ್ರಯೋಜನ ಸಹ ಒಳಗೊಂಡಿವೆ. ಹಾಗಾದರೇ ಜಿಯೋ ಟೆಲಿಕಾಂನ ಈ ಐದು ಪ್ರಿಪೇಯ್ಡ್ ಯೋಜನಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 601ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 6GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90GB ಡೇಟಾ ಪ್ರಯೋಜನ ದೊರೆಯಲಿದೆ.

ಜಿಯೋ 799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ 799ರೂ. ಪ್ರೀಪೇಯ್ಡ್ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 112GB ಡೇಟಾ ಪ್ರಯೋಜನ ದೊರೆಯಲಿದೆ.

ಜಿಯೋ 1066ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ 1066ರೂ. ಪ್ರೀಪೇಯ್ಡ್ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದೆ. ಇದು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 5GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173GB ಡೇಟಾ ಪ್ರಯೋಜನ ದೊರೆಯಲಿದೆ.

ಜಿಯೋ 3119ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ 3119ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಇದು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 10GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 740GB ಡೇಟಾ ಪ್ರಯೋಜನ ದೊರೆಯಲಿದೆ.

ಜಿಯೋ 659ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ 659ರೂ. ಪ್ರೀಪೇಯ್ಡ್ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 1.5GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಾಯಿಸ್ ಕರೆಗಳ ಸೌಲಭ್ಯ ಮತ್ತು ಎಸ್ಎಮ್ಎಸ್ ಪ್ರಯೋಜನ ಇಲ್ಲ. ಇದೊಂದು ಕ್ರಿಕೆಟ್ ಪ್ಯಾಕ್ ಆಗಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 84GB ಡೇಟಾ ಪ್ರಯೋಜನ ದೊರೆಯಲಿದೆ.


Click it and Unblock the Notifications








