Home
ಸುದ್ದಿಜಾಲ

ಈ ಪ್ಲ್ಯಾನ್‌ಗಳಲ್ಲಿ ಪ್ರತಿದಿನ 2GB ಡೇಟಾ ಜೊತೆಗೆ ಬಿಗ್ ವ್ಯಾಲಿಡಿಟಿನು ಸಿಗುತ್ತೆ!

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ ಸೇರಿದಂತೆ ವೊಡಾಫೋನ್ ಮತ್ತು ಏರ್‌ಟೆಲ್‌ ಸಹ ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿವೆ. ತಮ್ಮ ಚಂದಾದಾರರನ್ನು ಸೆಳೆಯಲು ಈ ಟೆಲಿಕಾಂ ಸಂಸ್ಥೆಗಳು ಪ್ರತಿದಿನ 2GB ಡೇಟಾ ಸೌಲಭ್ಯದ ಯೋಜನೆಯ ಆಯ್ಕೆಗಳನ್ನು ನೀಡಿವೆ. ಆದರೆ ಡೇಟಾ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯದ ಹಾಗೂ ಉಚಿತ ವಾಯಿಸ್‌ ಕರೆಗಳನ್ನು ಒಳಗೊಂಡ ಯೋಜನೆಗಳು ಹೆಚ್ಚು ಗ್ರಾಹಕರನ್ನು ಆಕರ್ಷಿಸುತ್ತವೆ.

ಜಿಯೋ, ವೊಡಾಫೋನ್ ಮತ್ತು ಏರ್‌ಟೆಲ್‌

ಹೌದು, ಜಿಯೋ, ವೊಡಾಫೋನ್ ಮತ್ತು ಏರ್‌ಟೆಲ್‌ ಪ್ರತಿದಿನ 2GB ಡೇಟಾ ಪ್ರಯೋಜನ ಒದಗಿಸುವ ಕೆಲವು ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿವೆ. ಈ ಯೋಜನೆಗಳಲ್ಲಿ ಬಳಕೆದಾರರಿಗೆ ಪ್ರತಿದಿನ ಡೇಟಾ ಸೌಲಭ್ಯದ ಜೊತೆಗೆ 84 ದಿನಗಳ ದೀರ್ಘಾವಧಿಯ ವ್ಯಾಲಿಡಿಟಿ, ಎಸ್‌ಎಮ್‌ಎಸ್‌ ಪ್ರಯೋಜನ ಹಾಗೂ ಉಚಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ಲಭ್ಯವಾಗಲಿವೆ. ಕೆಲವು 84 ದಿನಗಳ ವ್ಯಾಲಿಡಿಟಿ ಇದ್ದರೇ ಮತ್ತೆ ಕೆಲವು 28 ದಿನಗಳ ವ್ಯಾಲಿಡಿಟಿ ಹೊಂದಿವೆ. ಹಾಗಾದರೇ ಜಿಯೋ, ವೊಡಾಫೋನ್‌ ಮತ್ತು ಏರ್‌ಟೆಲ್‌ನ 2GB ಡೇಟಾ ಯೋಜನೆಗಳ ಪ್ಲ್ಯಾನ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಜಿಯೋ 249ರೂ. ಪ್ಲ್ಯಾನ್

ಜಿಯೋ 249ರೂ. ಪ್ಲ್ಯಾನ್

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 1,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ.

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 1.2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಏರ್‌ಟೆಲ್ 298ರೂ. ಪ್ಲ್ಯಾನ್

ಏರ್‌ಟೆಲ್ 298ರೂ. ಪ್ಲ್ಯಾನ್

ಏರ್‌ಟೆಲ್‌ನ 298ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 698.ರೂ ಪ್ಲ್ಯಾನ್

ಏರ್‌ಟೆಲ್‌ನ 698.ರೂ ಪ್ಲ್ಯಾನ್

ಏರ್‌ಟೆಲ್‌ನ 698.ರೂ ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಲಭ್ಯ. ಜೊತೆಗೆ ಈ ಪ್ಲ್ಯಾನ್‌ Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್ ಸೌಲಭ್ಯ ಲಭ್ಯ.

ವೊಡಾಫೋನ್ 299ರೂ. ಪ್ಲ್ಯಾನ್

ವೊಡಾಫೋನ್ 299ರೂ. ಪ್ಲ್ಯಾನ್

ವೊಡಾಫೋನಿನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್ 699ರೂ. ಪ್ಲ್ಯಾನ್

ವೊಡಾಫೋನ್ 699ರೂ. ಪ್ಲ್ಯಾನ್

ವೊಡಾಫೋನಿನ 699ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಸೌಲಭ್ಯ ಒಳಗೊಂಡಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಆದರೆ ಪ್ರಸ್ತುತ ಈ ಯೋಜನೆಗೆ ಡಬಲ್ ಡೇಟಾ ಕೊಡುಗೆ ಇದ್ದು, ಹೆಚ್ಚುವರಿಯಾಗಿ ಪ್ರತಿದಿನ 2GB ಡೇಟಾ ದೊರೆಯುತ್ತದೆ. ಹೀಗಾಗಿ ಒಟ್ಟಾರೇ ಪ್ರತಿದಿನ 4GB ಲಭ್ಯ.

Best Mobiles in India

English summary
Airtel, Jio and Vodafone Idea offer 2GB daily data plans to customers with validity of 28 days and 84 days.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+