ಜಿಯೋ ಮತ್ತು ಏರ್‌ಟೆಲ್ 179ರೂ. ಪ್ಲ್ಯಾನ್: ರೀಚಾರ್ಜ್‌ಗೆ ಯಾವುದು ಯೋಗ್ಯ?
ಭಾರತೀಯ ಟೆಲಿಕಾಂ ವಲಯದಲ್ಲಿ ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿವೆ. ಅವುಗಳಲ್ಲಿ ಪ್ರೀಪೇಯ್ಡ್ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್ ಯೋಜನೆಗಳು ಸೇರಿವೆ. ಆದರೆ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಅಗ್ಗದ 179 ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಸಹ ಗಮನ ಸೆಳೆದಿದೆ.

ಹೌದು, ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂ ಸಂಸ್ಥೆಗಳು 179ರೂ. ಬೆಲೆಯ ಅಗ್ಗದ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆ ಯಲ್ಲಿ ಡೇಟಾ, ಆಕರ್ಷಕ ವ್ಯಾಲಿಡಿಟಿ, ಅನಿಯಮಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನ ಗಳು ಸೇರಿವೆ. ಹಾಗೆಯೇ ಇತರೆ ಸೌಲಭ್ಯಗಳು ಸಿಗಲಿವೆ. ಅದಾಗ್ಯೂ, ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂನ ಈ ಎರಡು ಯೋಜನೆಗಳಲ್ಲಿ ಕೆಲವು ಭಿನ್ನತೆಗಳು ಗಮನಿಸಬಹುದಾಗಿದೆ. ಹಾಗಾದರೇ ಜಿಯೋ ಮತ್ತು ಏರ್‌ಟೆಲ್ 179ರೂ. ಪ್ರಿಪೇಯ್ಡ್ ಪ್ಲ್ಯಾನಿನಲ್ಲಿ ರೀಚಾರ್ಜ್ ಮಾಡಲು ಯಾವುದು ಉತ್ತಮ? ಈ ಯೋಜನೆಗಳ ಒಟ್ಟಾರೇ ಪ್ರಯೋಜನಗಳೆನು ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.
ಜಿಯೋದ 179ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 179 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 24 GB ಡೇಟಾ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಹಾಗೂ ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹಾಗೆಯೇ ಹೆಚ್ಚುವರಿಯಾಗಿ ಜಿಯೋ ಆಪ್ಸ್ ಸೇವೆ ಲಭ್ಯ.

ಏರ್‌ಟೆಲ್ 179 ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂ 179ರೂ. ಪ್ರಿಪೇಯ್ಡ್ ಪ್ಲಾನ್ 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 100 SMS ಮತ್ತು ಅನಿಯಮಿತ ಕರೆ ಪ್ರಯೋಜನಗಳು ಲಭ್ಯವಾಗಲಿವೆ. ಇದಲ್ಲದೆ ಒಟ್ಟಾರೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 2 GB ಡೇಟಾ ಪ್ರಯೋಜನವನ್ನು ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್, ಹೆಲೋ ಟ್ಯೂನ್ ಸೌಲಭ್ಯಗಳು ದೊರೆಯುತ್ತವೆ. ಯೋಜನೆಯಲ್ಲಿ ದೈನಂದಿನ ಡೇಟಾ ಪ್ರಯೋಜನ ಇಲ್ಲ.
ರೀಚಾರ್ಜ್‌ಗೆ ಯಾವುದು ಉತ್ತಮ?
ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂ ಈ ಎರಡು ಕಂಪನಿಗಳು 179ರೂ, ಪ್ರೀಪೇಯ್ಡ್ ಪ್ಲ್ಯಾನ್ ನಲ್ಲಿ ಆಕರ್ಷಕ ಸೌಲಭ್ಯಗಳನ್ನು ನೀಡಿವೆ. ಈ ಎರಡು ಟೆಲಿಕಾಂಗಳು ಬಹುತೇಕ ಸಾಮ್ಯತೆಯ ಪ್ರಯೋಜನ ಹೊಂದಿದ್ದರೂ, ಭಿನ್ನತೆ ಒಳಗೊಂಡಿವೆ. ಎರಡು ಪ್ಲ್ಯಾನ್ ಗಳ ವ್ಯಾಲಿಡಿಟಿಯಲ್ಲಿ ಭಿನ್ನತೆ ಕಾಣಬಹುದು. ಏರ್‌ಟೆಲ್‌ನ ಯೋಜನೆಯು 28 ದಿನಗಳ ವ್ಯಾಲಿಡಿಟಿ ಹೊಂದಿದ್ದರೆ, ಜಿಯೋ ಟೆಲಿಕಾಂನ ಪ್ಲ್ಯಾನ್ 24 ದಿನಗಳ ವ್ಯಾಲಿಡಿಟಿ ಒದಗಿಸಿದೆ. ವ್ಯಾಲಿಡಿಟಿ ಅಂಶ ಗಮನಿಸುವುದಾದರೇ ಏರ್‌ಟೆಲ್ ಉತ್ತಮ ಆಗಿ ಕಂಡುಬರುತ್ತದೆ.
ಆದರೆ ಡೇಟಾ ವಿಷಯಕ್ಕೆ ಬಂದಾಗ ಜಿಯೋ ಪ್ರತಿದಿನ 1 GB ಡೇಟಾ ನೀಡುತ್ತದೆ ಮತ್ತು ಏರ್‌ಟೆಲ್ ಒಟ್ಟಾರೇ 2 GB ಡೇಟಾ ನೀಡುತ್ತದೆ. ಇನ್ನು ಈ ಎರಡು ಯೋಜನೆಗಳು ಡೈಲಿ 100 ಎಸ್‌ಎಮ್‌ಎಸ್ ಪ್ರಯೋಜನ ಪಡೆದಿವೆ. ಹೀಗಾಗಿ ಪ್ರತಿದಿನ ಡೇಟಾ ಸೌಲಭ್ಯ ಅಗತ್ಯ ಇದ್ದರೇ, ಜಿಯೋ ಸೂಕ್ತ ಎನಿಸುತ್ತದೆ. ಅದೇ ಹೆಚ್ಚು ಡೇಟಾ ಅಗತ್ಯ ಇಲ್ಲ ಎನ್ನುವುದಾದರೇ ಏರ್‌ಟೆಲ್ ಉತ್ತಮ ಆಯ್ಕೆ.


Click it and Unblock the Notifications








