ಜಿಯೋ V/S ಏರ್‌ಟೆಲ್ 249ರೂ. ಪ್ಲ್ಯಾನ್: ರೀಚಾರ್ಜ್‌ಗೆ ನಿಮ್ಮ ಆಯ್ಕೆ ಯಾವುದು?
ಭಾರತೀಯ ಟೆಲಿಕಾಂ ವಲಯದಲ್ಲಿ ರಿಲಾಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿವೆ. ಆ ಪೈಕಿ ಪ್ರೀಪೇಯ್ಡ್ ಯೋಜನೆಗಳ ಜೊತೆಗೆ ಪೋಸ್ಟ್‌ಪೇಯ್ಡ್ ಯೋಜನೆಗಳು ಸೇರಿವೆ. ಆದರೆ ಬಜೆಟ್ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್ ಯೋಜನೆಗಳು ಹೆಚ್ಚಿನ ಪ್ರಯೋಜನಗಳೊಂದಿಗೆ ಚಂದಾದಾರರ ಗಮನ ಸೆಳೆದಿವೆ. ಈ ನಿಟ್ಟಿನಲ್ಲಿ ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳ 249ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್‌ನಲ್ಲಿ ಯಾವುದು ರೀಚಾರ್ಜ್ ಮಾಡಿಸಲು ಯೋಗ್ಯ?

ಹೌದು, ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಟೆಲಿಕಾಂ ಸಂಸ್ಥೆಗಳು 249ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ 249ರೂ. ಬೆಲೆಯ ರೀಚಾರ್ಜ್ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಕೆಲವು ಸೌಲಭ್ಯಗಳು ಸಿಗಲಿವೆ. ಆದರೂ ಈ ಯೋಜನೆಗಳಲ್ಲಿ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಟೆಲಿಕಾಂಗಳ 249ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ರೀಚಾರ್ಜ್‌ಗೆ ಯಾವುದು ಯೋಗ್ಯ? ಯೋಜನೆಯ ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ಜಿಯೋ 249ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಏರ್‌ಟೆಲ್ 249ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ಏರ್‌ಟೆಲ್‌ನ 249ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ.

ರೀಚಾರ್ಜ್‌ಗೆ ಯಾವುದು ಯೋಗ್ಯ?
ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಈ ಎರಡು ಕಂಪನಿಗಳು ಆಕರ್ಷಕ ಸೌಲಭ್ಯಗಳನ್ನು ನೀಡಿವೆ. ಹಾಗೆಯೇ 28 ದಿನಗಳ ವ್ಯಾಲಿಡಿಟಿ ನೀಡಿವೆ. ಅದಾಗ್ಯೂ ವ್ಯಾಲಿಡಿಟಿಗಿಂತ ಮುಖ್ಯವಾಗಿ ನೀವು ಹೆಚ್ಚಿನ ಡೇಟಾವನ್ನು ಬಯಸುತ್ತಿದ್ದರೇ, ನಿಮಗೆ ಜಿಯೋ ಉತ್ತಮ ಅನಿಸಲಿದೆ. ಇನ್ನು ಡೈಲಿ 1.5GB ಡೇಟಾ ಸಾಕಾಗುತ್ತೇ ಎನ್ನುವ ಗ್ರಾಹಕರಿಗೆ ಏರ್‌ಟೆಲ್ ಆಕರ್ಷಕ ಎನಿಸಲಿದೆ. ಏರ್‌ಟೆಲ್ ಕೆಲವು ಹೆಚ್ಚುವರಿ ಸೇವೆಗಳನ್ನು ನೀಡುತ್ತದೆ.

ಜಿಯೋದ 199ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ಏರ್‌ಟೆಲ್ 199ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 199ರೂ. ಪ್ರಿಪೇಯ್ಡ್ ಯೋಜನೆಯು ಸಹ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 1GB ಡೇಟಾ, 100 ಎಸ್‌ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಲಭ್ಯವಾಗಲಿದೆ. ಆದರೆ ಈ ಯೋಜನೆಯು ಇದೀಗ ಪರಿಷ್ಕರಣೆ ಆಗಿದ್ದು, ಕೆಲವು ಚಂದಾದಾರರಿಗೆ ಈ ಯೋಜನೆಯಲ್ಲಿ 1.5GB ಡೇಟಾ ಪ್ರಯೋಜನದ ಆಯ್ಕೆ ಇದೆ.

ಜಿಯೋ 349ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಿದ್ದು, ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ದೊರೆಯುತ್ತದೆ. ಇದರೊಂದಿದೆ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಆಪ್ಸ್ ಸೇವೆ ಲಭ್ಯ.


Click it and Unblock the Notifications








