ಜಿಯೋ, ಏರ್‌ಟೆಲ್, ವಿ ಟೆಲಿಕಾಂ: 200ರೂ. ಒಳಗಿನ ಪ್ರೀಪೇಯ್ಡ್ ಪ್ಲ್ಯಾನ್‌ಗಳು!
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ರಿಲಾಯನ್ಸ್ ಜಿಯೋ, ಏರ್‌ಟೆಲ್, ವಿ ಟೆಲಿಕಾಂ ಹಾಗೂ ಬಿಎಸ್‌ಎನ್‌ಎಲ್ ಟೆಲಿಕಾಂಗಳು ಗ್ರಾಹಕರನ್ನು ಹೆಚ್ಚಿಸಿಕೊಳ್ಳಲು ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿವೆ. ಅಧಿಕ ಡೇಟಾ, ದೀರ್ಘಾವಧಿಯ ವ್ಯಾಲಿಡಿಟಿ, ಅನಿಯಮಿತ ವಾಯಿಸ್ ಕರೆಗಳಂತಹ ಪ್ರಯೋಜನಗಳನ್ನು ನೀಡುತ್ತಿವೆ. ಕೆಲವು ಪ್ಲ್ಯಾನ್‌ಗಳು ದುಬಾರಿ ಬೆಲೆಯಲ್ಲಿದ್ದರೇ, ಮತ್ತೆ ಕೆಲವು ಅಗ್ಗದ ಯೋಜನೆಗಳನ್ನು ಹೊಂದಿವೆ.

ಹೌದು, ಜಿಯೋ, ಏರ್‌ಟೆಲ್, ವಿ ಟೆಲಿಕಾಂ ಹಾಗೂ ಬಿಎಸ್‌ಎನ್‌ಎಲ್ ಟೆಲಿಕಾಂಗಳು ಕಡಿಮೆ ದರದಲ್ಲಿ ಆರಂಭಿಕ ಪ್ರೀಪೇಯ್ಡ್ ಡೇಟಾ ರೀಚಾರ್ಜ್ ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿವೆ. ಅವುಗಳು 200ರೂ. ಒಳಗಿವೆ. ಈ ಯೋಜನೆಗಳಲ್ಲಿ ಹೆಚ್ಚಿನ ಸೌಲಭ್ಯಗಳು ಲಭ್ಯವಾಗದಿದ್ದರೂ, ಅಗತ್ಯತೆಯ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗಾದರೇ ಜಿಯೋ, ಏರ್‌ಟೆಲ್, ವಿ ಟೆಲಿಕಾಂ ಹಾಗೂ ಬಿಎಸ್‌ಎನ್‌ಎಲ್ ಟೆಲಿಕಾಂಗಳ ಅಗ್ಗದ ಡೇಟಾ ರೀಚಾರ್ಜ್ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಜಿಯೋದ 149ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ 149ರೂ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ.

ಜಿಯೋದ 199ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ಏರ್‌ಟೆಲ್ 179ರೂ. ಪ್ಲ್ಯಾನ್
ಏರ್‌ಟೆಲ್‌ನ ನೂತನ 179ರೂ. ಪ್ಲ್ಯಾನ್ ಅಲ್ಪಾವಧಿಯ ಪ್ಲ್ಯಾನ್ ಆಗಿದ್ದು, ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಭಾರತದಾದ್ಯಂತ ಅನಿಯಮಿತ ಕರೆಗಳ ಸೌಲಭ್ಯ ಇದೆ. ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ 300 ಎಸ್ಎಮ್ಎಸ್ ಹಾಗೂ 2GB ಡಾಟಾ 4G/3G/2G ಪ್ರಯೋಜನವನ್ನು ಒಳಗೊಂಡಿದೆ. ಇದರೊಂದಿಗೆ ಭಾರ್ತಿ ಆಕ್ಸಾ ಲೈಫ್ ಇನ್ಶೂರೆನ್ಸ್‌ನಿಂದ ಟರ್ಮ್ ಲೈಫ್ ಇನ್ಶೂರೆನ್ಸ್ ಸೌಲಭ್ಯ ಸಹ ಪಡೆದಿದೆ.

ವಿ ಟೆಲಿಕಾಂ 149ರೂ. ಪ್ರಿಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ 300 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 1GB ಡೇಟಾವನ್ನು ಪಡೆಯಬಹುದು. ಆದರೆ ಈ ಕೊಡುಗೆ ಪಡೆಯಲು ಗ್ರಾಹಕರು ಕಂಪನಿಯ ಅಧಿಕೃತ ಆಪ್ ಅಥವಾ ವೆಬ್ ಮೂಲಕ ರೀಚಾರ್ಜ್ ಮಾಡಿಸಬೇಕು.


Click it and Unblock the Notifications








