300ರೂ.ಒಳಗೆ ಲಭ್ಯವಾಗುವ ಅತ್ಯುತ್ತಮ ಪ್ರಿಪೇಯ್ಡ್‌ ಪ್ಲಾನ್‌ಗಳು!

|

ದೇಶದ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂಗಳು ತಮ್ಮ ಅಗ್ರಸ್ಥಾನವನ್ನು ಕಾಯ್ದುಕೊಂಡು ಬಂದಿವೆ. ಇದರಲ್ಲಿ ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳು ಮುಂಚೂಣಿಯಲ್ಲಿ ಗುರುತಿಸಿಕೊಂಡಿವೆ. ತಮ್ಮ ಗ್ರಾಹಕರಿಗೆ ಆಕರ್ಷಕ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಅಗ್ಗದ ಬೆಲೆಯಲ್ಲಿ ಅಧಿಕ ಡೇಟಾ ನೀಡುವ ಪ್ಲಾನ್‌ಗಳ ಮೂಲಕ ಪರಸ್ಪರ ಪೈಪೋಟಿ ನಡೆಸುತ್ತಿವೆ. ಇವುಗಳಲ್ಲಿ ದೀರ್ಘಾವಧಿ ಪ್ಲಾನ್‌ಗಳು ಮಾತ್ರವಲ್ಲ ಅಲ್ಪಾವಧಿ ಮಾನ್ಯತೆಯ ಪ್ಲಾನ್‌ಗಳು ಕೂಡ ಸೇರಿವೆ.

ಪ್ರಿಪೇಯ್ಡ್‌

ಹೌದು, ಏರ್‌ಟೆಲ್‌, ಜಿಯೋ ಮತ್ತು ವಿ ಟೆಲಿಕಾಂಗಳು ಅನೇಕ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿವೆ. ಯೋಗ್ಯವಾದ ಮಾನ್ಯತೆಯ ಅವಧಿಯೊಂದಿಗೆ ನೀವು ಸಾಕಷ್ಟು ಡೇಟಾ ಮತ್ತು ಅನಿಯಮಿತ ಕರೆಗಳನ್ನು ಬಯಸಿದರೆ 300ರೂ.ಬೆಲೆಯಲ್ಲಿ ಹಲವು ಪ್ಲಾನ್‌ಗಳನ್ನು ಪರಿಶೀಲಿಸಬಹುದು. ಹಾಗಾದ್ರೆ 300ರೂ.ಬೆಲೆಯಲ್ಲಿ ಲಭ್ಯವಾಗುವ ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳ ಪ್ರಿಪೇಯ್ಡ್‌ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋ 299ರೂ.ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 299ರೂ.ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂ 299ರೂ. ಪ್ರಿಪೇಯ್ಡ್‌ ಪ್ಲಾನ್‌ ನಿಮಗೆ 300ರೂ. ಅಡಿಯಲ್ಲಿ ಲಭ್ಯವಾಗುವ ಪ್ಲಾನ್‌ಗಳಲ್ಲಿ ಒಂದಾಗಿದೆ. ಈ ಪ್ರಿಪೇಯ್ಡ್‌ ಪ್ಲಾನ್‌ 28ದಿನಗಳ ಮಾನ್ಯತೆಯ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ 2GB ದೈನಂದಿನ ಡೇಟಾ ಪ್ರಯೋಜನ ನೀಡಲಿದೆ. ಇದಲ್ಲದೆ ದೈನಂದಿನ 100 SMS ಮತ್ತು ಅನಿಯಮಿತ ಧ್ವನಿ ಕರೆ ಪ್ರಯೋಜನಗಳನ್ನು ಸಹ ನೀಡಲಿದೆ.

ಜಿಯೋ 259ರೂ.ಪ್ರಿಪೇಯ್ಡ್‌ ಪ್ಲಾನ್‌
ಜಿಯೋ 259ರೂ.ಪ್ರಿಪೇಯ್ಡ್‌ ಪ್ಲಾನ್‌ ನಿಮಗೆ ಒಂದು ತಿಂಗಳ ವ್ಯಾಲಿಡಿಟಿಯನ್ನು ನೀಡಲಿದೆ. ಈ ಅವಧಿಯಲ್ಲಿ ದೈನಂದಿನ 1.5GB ಡೇಟಾ ಮತ್ತು ಅನಿಯಮಿತ ಕರೆ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ದಿನನಿತ್ಯ 100SMS ಪ್ರಯೋಜನ ದೊರೆಯಲಿದೆ. ಹೆಚ್ಚುವರಿಯಾಗಿ ಜಿಯೋ ಪ್ರಿಪೇಯ್ಡ್ ಪ್ಯಾಕ್, ಜಿಯೋಟಿವಿ ಮತ್ತು ಜಿಯೋ ಸಿನಿಮಾ ಅಪ್ಲಿಕೇಶನ್‌ಗಳಿಗೆ ಪೂರಕ ಚಂದಾದಾರಿಕೆಯನ್ನು ಸಹ ಒಳಗೊಂಡಿದೆ.

ಏರ್‌ಟೆಲ್‌ 299ರೂ.ಪ್ರಿಪೇಯ್ಡ್‌ ಪ್ಲಾನ್‌

ಏರ್‌ಟೆಲ್‌ 299ರೂ.ಪ್ರಿಪೇಯ್ಡ್‌ ಪ್ಲಾನ್‌

ಏರ್‌ಟೆಲ್ 299ರೂ. ಪ್ರಿಪೇಯ್ಡ್ ಪ್ಲಾನ್‌ 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಅವಧಿಯಲ್ಲಿ ದೈನಂದಿನ 1.5GB ಡೇಟಾ, ಅನಿಯಮಿತ ಧ್ವನಿ ಕರೆಗಳು ಮತ್ತು ದಿನಕ್ಕೆ 100 SMS ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಫಾಸ್ಟ್‌ಟ್ಯಾಗ್‌, Xstream ಮೊಬೈಲ್ ಪ್ಯಾಕ್, ವಿಂಕ್‌ ಮ್ಯೂಸಿಕ್‌ ಚಂದಾದಾರಿಕೆಯನ್ನು ಪಡೆದುಕೊಳ್ಳಬಹುದಾಗಿದೆ.

ಏರ್‌ಟೆಲ್‌ 265ರೂ.ಪ್ರಿಪೇಯ್ಡ್‌ ಪ್ಲಾನ್‌
ಏರ್‌ಟೆಲ್‌ 265ರೂ.ಪ್ರಿಪೇಯ್ಡ್‌ ಪ್ಲಾನ್‌ 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಸಮಯದಲ್ಲಿ ಪ್ರತಿನಿತ್ಯ 1GB ದೈನಂದಿನ ಡೇಟಾ ಪ್ರಯೋಜನ ನೀಡಲಿದೆ. ಇದಲ್ಲದೆ ಅನಿಯಮಿತ ಧ್ವನಿ ಕರೆಗಳು, ಅಮೆಜಾನ್ ಪ್ರೈಮ್ ವಿಡಿಯೋ ಮತ್ತು ದಿನಕ್ಕೆ 100 SMS ಅನ್ನು ಸಹ ನೀಡಲಿದೆ.

ವಿ ಟೆಲಿಕಾಂ 299ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 299ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 299ರೂ. ಪ್ರಿಪೇಯ್ಡ್‌ ಪ್ಲಾನ್‌ 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಇನ್ನು ಈ ಅವಧಿಯಲ್ಲಿ ಪ್ರತಿನಿತ್ಯ 1.5GB ಡೇಟಾ, ದಿನಕ್ಕೆ 100 SMS ಹಾಗೂ ಅನಿಯಮಿತ ಧ್ವನಿ ಕರೆ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಗ್ರಾಹಕರು 12:00AM ನಿಂದ 6:00AM ವರೆಗೆ ಉಚಿತ ಅನಿಯಮಿತ ಡೇಟಾವನ್ನು ಸಹ ಪಡೆಯುತ್ತಾರೆ.

Best Mobiles in India

Read more about:
English summary
Jio vs Airtel vs Vi:Best prepaid recharge plans under Rs 300

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X